ಬೆಂಗಳೂರು, (ಏಪ್ರಿಲ್ 25): ರೈಲಿಗೆ ( train) ಸಿಲುಕಿ ಮೂವರು ಯುವಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ(Bengaluru) ಬೈಯಪ್ಪನಹಳ್ಳಿ ರೈಲು ನಿಲ್ದಾಣದ (byappanahalli railway station) ಬಳಿ ನಡೆದಿದೆ. ಶಶಿಕುಮಾರ್, ಲೋಕಿ ಸೇರಿ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮೃತ ದುರ್ವೈವಿಗಳು ಅಂಧ್ರಪ್ರದೇಶದ ಚಿತ್ತೂರು ಮೂಲದವರು ಎನ್ನಲಾಗಿದೆ. ಮೂವರು 25 ರ ವಯಸ್ಸಿನ ಯುವಕರಾಗಿದ್ದು, ಇಂದು (ಏಪ್ರಿಲ್ 25) ಸಾರ್ವಜನಿಕರು ನೋಡಿ ಕೂಡಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Davanagere: ತಾಯಿ ಸಾವಿಗೆ ಕಾರಣವಾದ ತಂದೆಯನ್ನೇ ಹತ್ಯೆಗೈದ ಮಗ
25 ವರ್ಷದ ಆಸುಪಾಸಿನಮೂವರು ಯುವಕರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಹಳಿ ದಾಟುವಾಗ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರಾ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.
ಇನ್ನು ಈ ಬಗ್ಗೆ ರೈಲ್ವೆ ಎಎಸ್ಪಿ ಡಾ. ಸೌಮ್ಯಲತಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಿನ್ನೆ ರಾತ್ರಿ ಯಶವಂತಪುರ ಕಣ್ಣೂರು ಎಕ್ಸ್ಪ್ರೆಸ್ ರೈಲು ಪಾಸ್ ಆಗುವ ವೇಳೆ ಅಡ್ಡಬಂದಿದ್ದಾರೆ. ಮಾರತ್ತಹಳ್ಳಿ ಬ್ರಿಡ್ಜ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಶಶಿಕುಮಾರ್ ಲೋಕೇಶ್ ಸೇರಿ ಮೂವರು ಮೃತರಾಗಿದ್ದಾರೆ. ಮೃತ ಮೂವರು ಆಂಧ್ರಪ್ರದೇಶದ ಚಿತ್ತೂರಿನವರು. ಲೋಕೇಶ್ ಕ್ಯಾಬ್ ಡ್ರೈವರ್. ಶಶಿಕುಮಾರ್ ಪಿಜಿಯಲ್ಲಿ ವಾಸವಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದರು ಎಂದು ಮಾಹಿತಿ ನೀಡಿದರು.
ಬೆಂಗಳೂರು: ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೆಂಗಳೂರಿನ ವಿಜಯ ನಗರದ 7th c ಮುಖ್ಯರಸ್ತೆ ಹಂಪಿನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆ ವಾಕಿಂಗ್ ಹೋಗುವ ಸಮಯದಲ್ಲಿ ಇಬ್ಬರು ಬೈಕ್ನಲ್ಲಿ ಬಂದ ಖದೀಮರು ಆಕೆಯ ಕುತ್ತಿಗೆಯಲ್ಲಿದ್ದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸರಗಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:22 pm, Thu, 25 April 24