ಪತಿ ಚಾಕೊಲೇಟ್ ತಂದು ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ವಿಚಿತ್ರ ಘಟನೆ

|

Updated on: Apr 07, 2023 | 12:58 PM

ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪತಿ ಚಾಕೊಲೇಟ್ ತಂದು ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ವಿಚಿತ್ರ ಘಟನೆ
Follow us on

ಬೆಂಗಳೂರು: ಚಿಕ್ಕ ಮಕ್ಕಳು ಚಾಕೋಲೆಟ್(chocolate), ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ಮಾಡುವುದನ್ನ ನಾವು ನೋಡಿದ್ದೇವೆ. ಇನ್ನು ಕೇಳಿದ್ದನ್ನು ಕೊಡಿಸಲಿಲ್ಲ ಎಂದು ಹಠ ಹಿಡಿಯುವುದು, ಅಳುವುದು ಸಾಮಾನ್ಯ. ಆದ್ರೆ, ಇಲ್ಲೋರ್ವ ಎರಡು ಮಕ್ಕಳ ತಾಯಿಯೊಬ್ಬರು, ಪತಿ(Husband) ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ಪತ್ನಿ ಆತ್ಮಹತ್ಯೆಶ್ರ(Suicide) ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಹೌದು.. ಈ ಘಟನೆ ಬೆಂಗಳೂರಿನ(Bengaluru) ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಂದಿನಿ‌(30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

6 ವರ್ಷದ ಹಿಂದೆ ಮದುವೆಯಾಗಿದ್ದ ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ. ಇನ್ನು ನಂದಿನಿ ಪತಿ ಸಲೂಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಅದರಂತೆ ನಿನ್ನೆ(ಏಪ್ರಿಲ್ 06) ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದ್ರೆ, ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಬಳಿಕ ಪತಿ ಮನೆಗೆ ಬಂದು ನೋಡಿದಾಗ ನಂದಿನಿ ನೇಣು ಹಾಕಿಕೊಂಡಿದ್ದಳು. ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ಅಷ್ಟರಲ್ಲಾಗಲೇ ನಂದಿನಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ.

ಚಾಕೋಲೆಟ್​ ತಂದು ಕೊಡದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಆದ್ರೆ, ಈ ಬಗ್ಗೆ ಪೊಲೀಸರು ಯಾವುದೇ ಖಚಿತ ಕಾರಣ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸ್ ತನಿಖೆ ಬಳಿಕ ನಂದಿನಿ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿದುಬರಲಿದೆ.

Published On - 11:53 am, Fri, 7 April 23