32 ಕೋಟಿ ತೆರಿಗೆ ಬಾಕಿ; ಮಂತ್ರಿ ಮಾಲ್ಗೆ ಬೀಗ ಜಡಿದು ಲೈಸೆನ್ಸ್ ಕ್ಯಾನ್ಸಲ್ ಮಾಡಿದ ಬಿಬಿಎಂಪಿ
ಒನ್ ಟೈಂ ಪೇಮೆಂಟ್ಗೆ ಅವಕಾಶ ಕೊಟ್ಟಿದ್ದರೂ ತೆರಿಗೆ ಪಾವತಿಸದ ಕಾರಣ ಮುಂಜಾನೆಯೇ ಬಿಬಿಎಂಪಿ ಅಧಿಕಾರಿಗಳು ಮಾಲ್ಗೆ ಬೀಗ ಜಡಿದಿದ್ದಾರೆ. ಹಾಗೂ ಮಂತ್ರಿ ಮಾಲ್ ಲೈಸೆನ್ಸ್ ರದ್ದು ಮಾಡಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಮತ್ತೆ ಬೀಗ ಬಿದ್ದಿದೆ. ಮಂತ್ರಿ ಮಾಲ್ 32 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ.
ಬೆಂಗಳೂರು, ಮಾರ್ಚ್.16: ಕೋಟಿ ಕೋಟಿ ರೂಪಾಯಿ ತೆರಿಗೆ (Tax) ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು (BBMP) ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ (Mantri Square Mall) ಮತ್ತೊಮ್ಮೆ ಬೀಗ ಜಡಿದಿದ್ದಾರೆ. ಮುಂಜಾನೆಯೇ ಮಾಲ್ಗೆ ಬೀಗ ಹಾಕಲಾಗಿದ್ದು ಲೈಸೆನ್ಸ್ ಕ್ಯಾನ್ಸಲ್ ಮಾಡಲಾಗಿದೆ. ಮಂತ್ರಿ ಮಾಲ್ ಸುಮಾರು 32 ಕೋಟಿ ವರೆಗೂ ತೆರಿಗೆ ಬಾಕಿ ಉಳಿಸಿಕೊಂಡಿದೆ. ಪಾಲಿಕೆ ಒನ್ ಟೈಂ ಪೇಮೆಂಟ್ಗೆ ಅವಕಾಶ ಕೊಟ್ಟಿತ್ತು. ಆದರೆ ಸೆಟಲ್ ಆಗದಿರುವ ಕಾರಣ ಮಾಲ್ಗೆ ಬೀಗ ಜಡಿದಿದೆ.
ಈ ಹಿಂದೆಯೂ ಅನೇಕ ಬಾರಿ ತೆರಿಗೆ ವಿಚಾರವಾಗಿ ಮಂತ್ರ ಮಾಲ್ ಗೆ ಬೀಗ ಹಾಕಲಾಗಿತ್ತು. ಇದೀಗ ಮತ್ತೆ ಇಂದು ಮುಂಜಾನೆ ಬಿಬಿಎಂಪಿ ಅಧಿಕಾರಿಗಳು ಮಾಲ್ ಗೆ ಬೀಗ ಹಾಕಿದ್ದಾರೆ. ಮಾರ್ಷಲ್ ಹಾಗೂ ಪೊಲೀಸರ ಬಿಗಿ ಭದ್ರತೆಯಲ್ಲಿ ಮಾಲ್ ಮುಖ್ಯ ಪ್ರವೇಶ ದ್ವಾರಕ್ಕೆ ಬೀಗ ಜಡಿಯಲಾಗಿದೆ. ತೆರಿಗೆ ಪಾವತಿಸದ ಹಿನ್ನೆಲೆ ಲೈಸೆನ್ಸ್ ಕೂಡ ರದ್ದು ಮಾಡಲಾಗಿದೆ.
ಮಾಲ್ನ ಮುಖ್ಯ ದ್ವಾರಕ್ಕೆ ಬೀಗ ಹಾಕುವುದರೊಂದಿಗೆ ನೋಟಿಸ್ ಕೂಡ ಅಂಟಿಸಲಾಗಿದೆ. ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 06 ರ ಸುತ್ತೊಲೆಯಂತೆ, ನಿಮ್ಮ ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್ ಮಾಡಲಾಗಿದೆ ಎಂದು ಬ್ಯಾನರ್ ಅಳಡಿಸಲಾಗಿದೆ.
ಇದನ್ನೂ ಓದಿ: ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಡಿಕೆ ಸಹೋದರರ ಶಿಬಿರದಲ್ಲಿ ಆತಂಕ ಮೂಡಿಸಿದೆಯೇ? ಶಿವಕುಮಾರ್ ಪ್ರತಿಕ್ರಿಯೆ ಅದನ್ನು ಸೂಚಿಸುತ್ತದೆ!
ಬೆಂಗಳೂರಿಂದ ಗಲ್ಫ್ ರಾಷ್ಟ್ರಗಳಿಗೆ ಮಾನವ ಕಳ್ಳ ಸಾಗಣೆ?
ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಎಂದು ಆರೋಪಿಸಿ NCPCR ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಂಪಿಗೇಹಳ್ಳಿ ಠಾಣಾ ವ್ಯಾಪ್ತಿಯ ಮದರಸಾ ಮೇಲೆ ನಡೆಸಿದ ದಾಳಿ ವೇಳೆ 20 ಬಾಲಕಿಯರು ಪತ್ತೆಯಾಗಿದ್ದು, ಅವರನ್ನ ಗಲ್ಫ್ ರಾಷ್ಟ್ರಗಳಿ ಸಾಗಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ X ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಕಂಗೂನ್, FIR ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಕುಳಿತಿ ಪ್ರಸಂಗ ನಡೆದಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ