AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು 328 ಜನರಿಗೆ ಕೊರೊನಾ ಸೋಂಕು ದೃಢ; ಯಾವ್ಯಾವ ಜಿಲ್ಲೆಯಲ್ಲೆಷ್ಟು?

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7,205 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ 328 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿಯೇ 163 ಜನರಲ್ಲಿ ಕೊರೊನಾ ಸೋಂಕು(Corona Virus) ಬೆಳಕಿಗೆ ಬಂದಿದ್ದು, 409 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಇಂದು 328 ಜನರಿಗೆ ಕೊರೊನಾ ಸೋಂಕು ದೃಢ; ಯಾವ್ಯಾವ ಜಿಲ್ಲೆಯಲ್ಲೆಷ್ಟು?
ಕೊರೊನಾ ಸೋಂಕು ದೃಢ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 05, 2024 | 8:00 PM

Share

ಬೆಂಗಳೂರು, ಜ.05: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7,205 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ 328 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿಯೇ 163 ಜನರಲ್ಲಿ ಕೊರೊನಾ ಸೋಂಕು(Corona Virus) ಬೆಳಕಿಗೆ ಬಂದಿದ್ದು, 409 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 1,159  ಸಕ್ರಿಯ ಕೇಸ್​ಗಳಿವೆ. ಇನ್ನು ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 4.55 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಯಾವ್ಯಾವ ಜಲ್ಲೆಯಲ್ಲೆಷ್ಟು?

ರಾಜ್ಯದ ಕೊರೊನಾ ವೈರಸ್​ ಹರಡುತ್ತಿದ್ದು, ಬೆಂಗಳೂರಿನಲ್ಲಿಯೇ ಇಂದು 163 ಜನರಿಗೆ ಕೊರೊನಾ ಸೋಂಕು ಬೆಳಕಿಗೆ ಬಂದಿದೆ. ಇನ್ನುಳಿದಂತೆ ಬಾಗಲಕೋಟೆ 4, ಬಳ್ಳಾರಿ 9, ಬೆಂಗಳೂರು ಗ್ರಾಮಾಂತರ 18, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 7, ಚಿತ್ರದುರ್ಗ 5, ದಕ್ಷಿಣ ಕನ್ನಡ 8, ದಾವಣಗೆರೆ 3, ಧಾರವಾಡ 2, ಗದಗ 1, ಹಾಸನ 12, ಹಾವೇರಿ 1, ಕಲಬುರಗಿ 4, ಕೋಲಾರ 1, ಮಂಡ್ಯ 7, ಮೈಸೂರು 26, ರಾಯಚೂರು 4, ರಾಮನಗರ 3 ಶಿವಮೊಗ್ಗ 6, ತುಮಕೂರು 15, ಉಡುಪಿ 1, ಉತ್ತರ ಕನ್ನಡ 6, ವಿಜಯನಗರದಲ್ಲಿ 7 ಪ್ರಕರಣಗಳು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ಜ.06 ರಂದು ಕೊರೋನಾ ಹೆಲ್ಪ್​ಲೈನ್ ಲೋಕಾರ್ಪಣೆ: ಸಚಿವ ದಿನೇಶ್ ಗುಂಡೂರಾವ್

ನಾಳೆ ಕೊರೋನಾ ಹೆಲ್ಪ್​ಲೈನ್ ಲೋಕಾರ್ಪಣೆ

ನಾಳೆ(ಜ.06) ಕೊರೊನಾ ಹೆಲ್ಪ್​ಲೈನ್​ನ್ನು ಲೋಕಾರ್ಪಣೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈಗ ಎಲ್ಲಾ ವಯಸ್ಸಾಗಿರುವವರಿಗೂ ಟೆಸ್ಟಿಂಗ್, ಅದರಲ್ಲೂ ವಯಸ್ಸಾಗಿ ಅನಾರೋಗ್ಯದಿಂದ ಇರುವವರು ಸ್ವತಃ ಬಂದು ಟೆಸ್ಟಿಂಗ್ ಮಾಡಿಸಬೇಕು. ಹೋಂ ಐಸೋಲೇಷನ್ ಆಗಿರುವ ವೃದ್ಧರ ಮೇಲೆ ನಿಗಾ ಇಡಲಾಗಿದೆ ಎಂದು ಬೆಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Fri, 5 January 24

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು