ಬೆಂಗಳೂರು: ಸೋಮವಾರ ಮತ್ತು ಮಂಗಳವಾರದ ನಡುವೆ ಕರ್ನಾಟಕದಾದ್ಯಂತ 29 ರಸ್ತೆ ಅಪಘಾತಗಳು (Accident) ಸಂಭವಿಸಿದ್ದು, ದುರ್ಘಟನೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ (IG DGP) ನಿಯಂತ್ರಣ ಕೊಠಡಿಯ ಅಂಕಿಅಂಶಗಳು ತೋರಿಸಿವೆ. ಈ ಬಗ್ಗೆ ಕರ್ನಾಟಕದ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಅಲೋಕ್ ಕುಮಾರ್ ಮಂಗಳವಾರ ಡೇಟಾವನ್ನು ಹಂಚಿಕೊಂಡಿದ್ದಾರೆ.
ಸೋಮವಾರ ಬೆಳಿಗ್ಗೆ 6 ರಿಂದ ಮಂಗಳವಾರ ಬೆಳಿಗ್ಗೆ 6 ರ ನಡುವೆ ಸಂಭವಿಸಿದ 29 ಅಪಘಾತಗಳ ಪೈಕಿ 21 ಪ್ರಕರಣಗಳಲ್ಲಿ ದ್ವಿಚಕ್ರ ವಾಹನಗಳೇ ಅಪಘಾತಕ್ಕೀಡಾಗಿವೆ. ಈ ಅವಧಿಯಲ್ಲಿ ರಾಜ್ಯದಾದ್ಯಂತ ಸಂಭವಿಸಿದ ಒಟ್ಟು ಅಪಘಾತಗಳಲ್ಲಿ 28 ಜನರು ಗಾಯಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲಿ ಒಟ್ಟು ಮೂರು ಅಪಘಾತಗಳು ಸಂಭವಿಸಿದೆ. ಬೆಂಗಳೂರು ನಗರದಲ್ಲಿ ಬೈಕ್ ಮತ್ತು ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದರೆ, ಗ್ರಾಮಾಂತರದಲ್ಲಿ ನಿಯಂತ್ರಣ ತಿಪ್ಪಿ ಬೈಕ್ ಅಪಘಾತ ಮತ್ತು ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಮೂರು ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಅಮ್ಮ ನಾಲ್ಕು ದಿನ ಬದುಕಿದ್ದಳು; ಕೊಲಂಬಿಯಾದ ವಿಮಾನ ಅಪಘಾತದಲ್ಲಿ ಸಾಯುವ ಮುನ್ನ ಆಕೆ ಮಕ್ಕಳಿಗೆ ನೀಡಿದ ಸಲಹೆ ಏನು?
No. of precious lives being lost everyday in road accidents
Bike riders seems to be the worst hit
“ Plz follow traffic & safety rules, to save your own life and lives of others, not merely to avoid traffic fines” pic.twitter.com/ks5v3BDHQV
— alok kumar (@alokkumar6994) June 13, 2023
ಚಿತ್ರದುರ್ಗದ ಭರಮಸಾಗರದಲ್ಲಿ ಅತಿ ಹೆಚ್ಚು ಸಾವು ಸಂಭವಿಸಿದೆ. ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಖಾಸಗಿ ಬಸ್ ಮತ್ತು ಆಟೋರಿಕ್ಷಾಕ್ಕೆ ಡಿಕ್ಕಿಯಾಗಿ 14 ಮಂದಿ ಗಾಯಗೊಂಡಿದ್ದಾರೆ.
ಸಾರ್ವಜನಿಕರು ಪ್ರಯಾಣಿಸುವಾಗ ನಿಯಮಗಳನ್ನು ಪಾಲಿಸುವಂತೆ ಎಡಿಜಿಪಿ ಕುಮಾರ್ ಮನವಿ ಮಾಡಿದ್ದಾರೆ. ಪ್ರತಿನಿತ್ಯ ರಸ್ತೆ ಅಪಘಾತಗಳಲ್ಲಿ ಅಮೂಲ್ಯ ಜೀವಗಳು ಬಲಿಯಾಗುತ್ತಿವೆ. ದ್ವಿಚಕ್ರ ವಾಹನ ಸವಾರರು ಹೆಚ್ಚು ತೊಂದರೆ ಅನುಭವಿಸುವಂತಾಗಿದೆ. ದಯವಿಟ್ಟು ಟ್ರಾಫಿಕ್ ಮತ್ತು ಸುರಕ್ಷತಾ ನಿಯಮಗಳನ್ನು ಅನುಸರಿಸಿ. ಕೇವಲ ಟ್ರಾಫಿಕ್ ದಂಡವನ್ನು ತಪ್ಪಿಸಲು ಅಲ್ಲ, ನಿಮ್ಮ ಮತ್ತು ಇತರರ ಜೀವಗಳನ್ನು ಉಳಿಸಲು ನಿಯಮ ಪಾಲಿಸುವಂತೆ ಟ್ವೀಟ್ ಮಾಡಿದ್ದಾರೆ.
ಆನೇಕಲ್: ಮಾದಕ ವಸ್ತು ಮತ್ತು ಸಂಚಾರಿ ನಿಯಮಗಳ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್ ಪಿ ನೇತೃತ್ವದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರ ನಡೆಯಿತು. ಆನೇಕಲ್ ಉಪವಿಭಾಗದ ಅತ್ತಿಬೆಲೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿನ ನೆರಳೂರು ಸ್ವಾಮಿ ವಿವೇಕಾನಂದ ವಿದ್ಯಾನಿಕೇತನ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ ನಡೆದಿದ್ದು, ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳ ಜೊತೆ ಸಮಾಲೋಚನೆಯೂ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:52 pm, Tue, 13 June 23