ಕಸದ ಟೆಂಡರ್​​ನಲ್ಲಿ ಅಕ್ರಮ ಆರೋಪ: ರಾಜ್ಯಪಾಲ ಗೆಹ್ಲೋಟ್​ಗೆ ಬಿಜೆಪಿ ನಿಯೋಗದಿಂದ ದೂರು

ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 36 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ಗೆ ದೂರು ನೀಡಿದ್ದು, ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿದೆ. ಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ ಮಾಡಲಾಗಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ಇಬ್ಬರ ಕೈವಾಡವೂ ಇದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಕಸದ ಟೆಂಡರ್​​ನಲ್ಲಿ ಅಕ್ರಮ ಆರೋಪ: ರಾಜ್ಯಪಾಲ ಗೆಹ್ಲೋಟ್​ಗೆ ಬಿಜೆಪಿ ನಿಯೋಗದಿಂದ ದೂರು
ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು
Image Credit source: Tv9 Kannada
Edited By:

Updated on: Jun 10, 2026 | 2:36 PM

ಬೆಂಗಳೂರು, ಜೂನ್​​ 10: ಕಸದ ಟೆಂಡರ್​​ನಲ್ಲಿ ಅಕ್ರಮ ನಡೆದ ಆರೋಪ ಸಂಬಂಧ ರಾಜ್ಯಪಾಲ ಗೆಹ್ಲೋಟ್​ಗೆ ಬಿಜೆಪಿ (BJP) ನಿಯೋಗ ದೂರು ಸಲ್ಲಿಕೆ ಮಾಡಿದೆ. ಬೆಂಗಳೂರಿನ ಕಸದ ಟೆಂಡರ್​​ನಲ್ಲಿ ದೊಡ್ಡ ಅಕ್ರಮ ನಡೆದಿದ್ದು, ಸಿಬಿಐ ತನಿಖೆಗೆ ಕೊಡಿ ಎಂದು ರಾಜ್ಯಪಾಲರಿಗೆ ನೀಡಿರುವ ದೂರಲ್ಲಿ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಟಿವಿ9ಗೆ ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ಮಾಹಿತಿ ನೀಡಿದ್ದು, ಬೆಂಗಳೂರಿನ ನಿವಾಸಿಗಳು ಬೆಚ್ಚಿ ಬೀಳುವಂತಹ ಹಗರಣ ಇದಾಗಿದ್ದು, ಇಷ್ಟುದಿನ ಯಾರಿಗೂ ಗೊತ್ತಿರಲಿಲ್ಲ. ದೆಹಲಿ ಮೂಲದ ಕಂಪನಿಗೆ ಟೆಂಡರ್​ ನೀಡುವ ಮೂಲಕ ದೇಶದಲ್ಲಿಯೇ ದೊಡ್ಡ ಗಾರ್ಬೆಜ್​ ಹಗರಣವನ್ನು ಕಾಂಗ್ರೆಸ್​​ ನೆತೃತ್ವದ ಸರ್ಕಾರ ನಡೆಸಿದೆ. ಈ ಬಗ್ಗೆ ಲೋಕಾಯುಕ್ತ ಕಚೇರಿಗೂ ಭೇಟಿ ನೀಡಿ ಅಫಿಡವಿಟ್ ಸಲ್ಲಿಸುತ್ತೇವೆ ಎಂದವರು ತಿಳಿಸಿದ್ದಾರೆ.

‘ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ’

ಕಾಂಗ್ರೆಸ್ ನಾಯಕ ಕಸ ಹಾಕಿ ಚಿನ್ನ ಪಡೆಯಿರಿ ಎಂದು ಹೇಳಿದ್ದರು. ಅವರ ನಾಯಕ ಹೇಳಿದ್ದನ್ನು ಕಾಂಗ್ರೆಸ್​​ನವರು ಫಾಲೋ ಮಾಡ್ತಿದ್ದಾರೆ. ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ ಮಾಡಲಾಗಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ಇಬ್ಬರ ಕೈವಾಡವೂ ಇದೆ. ಕಸಕ್ಕೆ ಸಂಬಂಧಿಸಿದ ಟೆಂಡರ್ ಅನ್ನು ರದ್ದು ಮಾಡಬೇಕು, ತಪ್ಪು ಮಾಡಿದ ಅಧಿಕಾರಿಗಳಿಗೆ ಶಿಕ್ಷೆ ಆಗಬೇಕು ಎಂದು ಅಶೋಕ್​ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು; ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದ ಹೆಚ್​​ಡಿಡಿ

ಅಲ್ಲದೆ ಟೆಂಡರ್​​ ಪಡೆದ ಕಂಪನಿಯನ್ನು ವರ್ಲ್ಡ್ ಬ್ಯಾಂಕ್ ಡಿಬಾರ್ ಮಾಡಿದೆ. ರಾಜ್ಯದಲ್ಲಿಯೂ ಈ ಹಿಂದೆ ಬಿಬಿಎಂಪಿ ಕಂಪನಿಯನ್ನು 2016ರಲ್ಲಿ ಟರ್ಮಿನೇಟ್​​ ಮಾಡಿತ್ತು. ಹೀಗಿದ್ದರೂ ಬ್ಲ್ಯಾಕ್​​ ಲಿಸ್ಟ್​​ ಕಂಪನಿಗೆ ಟೆಂಡರ್ ಕೊಡಲು ದೆಹಲಿಯಿಂದ ಕರೆ ಬರುತ್ತೆ. ಹೈಕಮಾಂಡ್ ಕರೆ ಬಂದ ಹಿನ್ನೆಲೆಯಲ್ಲಿ ಕಳೆದ ತಿಂಗಳ ಸಚಿವ ಸಂಪುಟ ಸಭೆಯಲ್ಲಿ ಕೊನೆಯದಾಗಿ ಅಜೆಂಡಾದಲ್ಲಿ ಸೇರಿಸಿ ಒಪ್ಪಿಗೆ ಪಡೆದಿದ್ದಾರೆ. ಸಭೆ ವೇಳೆ 36 ಸಾವಿರ ಕೋಟಿ ಮೌಲ್ಯದ ಕಸದ ಟೆಂಡರ್ ವಿಷಯ ಕೇಳಿ ಸಚಿವರು ಗರಬಡಿದಂತಾಗಿದ್ದರು. ಆಗ ಸಿದ್ದರಾಮಯ್ಯ ಇದು ಹೈಕಮಾಂಡ್​​ನಿಂದ ಬಂದಿರೋದು ಎಂದ ಬಳಿಕ ಸಂಪುಟದಲ್ಲಿ ಅನುಮೋದನೆ ಸಿಗುತ್ತೆ. ಕಸದ ಟೆಂಡರ್ ಕೊಡುವ ಬಗ್ಗೆ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಿದ್ದರಾಮಯ್ಯ ರಚಿಸಿದ್ದ ಸಮಿತಿ ರದ್ದು ಮಾಡಿ ಡಿಕೆಶಿ ಬೇರೊಂದು ಸಮಿತಿ ರಚಿಸಿದ್ದಾರೆ. ಒಂದು ವಾರದೊಳಗೆ ವರದಿ ಕೊಡಲು ಹೇಳಿದ್ದಾರೆ. ಇದು ಕಸದಿಂದ ಕಾಸು ಮಾಡುವ ಗೋಲ್ಡನ್ ಸ್ಕೀಂ. ಬೆಂಗಳೂರು ಕಸ ತುಂಬಿಕೊಂಡು ನಾರುತ್ತಿದ್ದರರೆ, ಇವರು ಕಸದ ಟೆಂಡರ್ ಮೂಲಕ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಕೊಡಲು ಹೊರಟಿದ್ದಾರೆ ಎಂದು ಅಶೋಕ್​​ ಗಂಭೀರ ಆರೋಪ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​​

Published On - 2:34 pm, Wed, 10 June 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us