ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು, ಇನ್ನಷ್ಟು ತಲೆದಂಡ ಸಾಧ್ಯತೆ

| Updated By: ರಮೇಶ್ ಬಿ. ಜವಳಗೇರಾ

Updated on: Oct 11, 2023 | 10:21 AM

Attibele Fire incident : ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೆ ಇದೀಗ ಡಿಇ ಕಾಯ್ದಿರಿಸಿ ಪಾರದರ್ಶಕವಾದ ವರದಿ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು, ಇನ್ನಷ್ಟು ತಲೆದಂಡ ಸಾಧ್ಯತೆ
ಅತ್ತಿಬೆಲೆ ಅಗ್ನಿ ದುರಂತ
Follow us on

ಬೆಂಗಳೂರು, (ಅಕ್ಟೋಬರ್ 11): ಅತ್ತಿಬೆಲೆ ಪಟಾಕಿ ದುರಂತ (Attibele Fire incident ) ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಅತ್ತಿಬೆಲೆ ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿತ್ತು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಇಲಾಖೆ ತನಿಖೆಗೆ ಆದೇಶಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಪೊಲೀಸ್ ಮತ್ತು ಅಗ್ನಿಶಾಮಕ ಠಾಣೆ ಇಲಾಖೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ ಸಿಐಡಿಗೆ, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮಂಗಳವಾರ ಅಮಾನತಿನ ಬಗ್ಗೆ ಡಿಸಿ, ಎಸ್‍ಪಿಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಇದೀಗ ಡಿಇ ಕಾಯ್ದಿರಿಸಿ ಪಾರದರ್ಶಕವಾದ ವರದಿ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ