AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಶೇ 40 ರಷ್ಟು ಏರಿಕೆ: ಮುಖ್ಯ ಕಾರಣ ಇದುವೇ ನೋಡಿ!

Dengue Cases in Bengaluru: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳವಾಗಿದ್ದು, ಜೊತೆಗೆ ವೈರಲ್ ಜ್ವರ ಕೂಡಾ ಹೆಚ್ಚೆಚ್ಚು ಕಂಡುಬರುತ್ತಿದೆ. ರಾಜ್ಯದಲ್ಲಿ ಕೂಡ ಡೆಂಘಿ ಹೆಚ್ಚಳವಾಗಿದೆ. ಹೀಗಾಗಿ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಈಡಿಸ್ ಸೊಳ್ಳೆ ನಾಶಕ್ಕೆ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಶೇ 40 ರಷ್ಟು ಏರಿಕೆ: ಮುಖ್ಯ ಕಾರಣ ಇದುವೇ ನೋಡಿ!
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಶೇ 40 ರಷ್ಟು ಏರಿಕೆ
ವಿನಯ್​ ಕಾಶಪ್ಪನವರ್​
| Edited By: |

Updated on: May 24, 2024 | 7:22 AM

Share

ಬೆಂಗಳೂರು, ಮೇ 24: ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ (Bengaluru) ವಾತಾವರಣ ಬದಲಾಗಿದ್ದು ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ತಂಪಾದ ವಾತವರಣದಿಂದ ಜನರು ಖುಷಿಯಗಿದ್ದಾರೆ. ಆದರೆ ಮಳೆಯಿಂದ ನಗರದಲ್ಲಿ ಡೆಂಗ್ಯೂ/ಡೆಂಘಿ (Dengue) ಪ್ರಕರಣಗಳಲ್ಲಿ ವಿಪರೀತ ಏರಿಕೆ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ರಾಜಧಾನಿಯಲ್ಲಿ ಶೇ 40 ರಷ್ಟು ಡೆಂಘಿ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ಇದರ ಜೊತೆಗೆ ಇತರ ಜ್ವರದ ಪ್ರಕರಣಗಳು ಕೂಡಾ ಹೆಚ್ಚಾಗಿದ್ದು, ಆರೋಗ್ಯ ಇಲಾಖೆಯ (Health Department) ಚಿಂತೆಗೆ ಕಾರಣವಾಗಿದೆ.

ಈ ವರ್ಷ ಜನರು ಅತಿಯಾಗಿ ಎಳೆನೀರು ಸೇವಸಿ ಚಿಪ್ಪುಗಳನ್ನು ಎಲ್ಲೆಂದರಲ್ಲಿ ಬಿಸಾಡಿದ್ದಾರೆ. ಇದರಲ್ಲಿ ನೀರು ನಿಂತು ಅತಿಯಾಗಿ ಸೊಳ್ಳೆಗಳ ಉತ್ಪತಿಯಾಗುತ್ತಿದೆ. ಇದು ಈಗ ಆರೋಗ್ಯ ಇಲಾಖೆಯ ತಲೆ ಬಿಸಿಗೆ ಕಾರಣವಾಗಿದೆ.

ಎಲ್ಲೆಂದರಲ್ಲಿ ಬಿಸಾಡಿರುವ ಎಳೆನೀರು ಚಿಪ್ಪುಗಳಲ್ಲಿ ಅತಿಯಾಗಿ ಸೊಳ್ಳೆಗಳ ಉತ್ಪತಿಯಾಗಿದೆ. ಇದರಿಂದಲೇ ಡೆಂಘಿ ಸೇರಿದ್ದಂತೆ ನಾನಾ ಖಾಯಿಲೆಗಳು ಏರಿಕೆಯಾಗುತ್ತಿವೆ ಎಂಬುದು ಆರೋಗ್ಯ ಇಲಾಖೆಯ ಅಭಿಪ್ರಾಯ. ಎಳೆನೀರು ಕುಡಿದು ಬಿಸಾಡಿರುವ ಚಿಪ್ಪುಗಳನ್ನು ವಿಲೇವಾರಿ ಮಾಡುವುದೇ ಆರೋಗ್ಯ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಬಗ್ಗೆ ಬಿಬಿಎಂಪಿಗೂ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಡೆಂಘಿ ಜೊತೆಗೆ ವೈರಲ್ ಜ್ವರ ಕೂಡಾ ಹೆಚ್ಚೆಚ್ಚು ಕಂಡುಬರುತ್ತಿದೆ. ಇನ್ನು ರಾಜ್ಯದಲ್ಲಿ ಡೆಂಘಿ ಹೆಚ್ಚಳ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಡಿಸ್ ಸೊಳ್ಳೆ ನಾಶಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಮನೆಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ. ಆಸ್ಪತ್ರೆಗಳಲ್ಲಿನ ಡೆಂಗ್ಯೂ ಪ್ರಕರಣಗಳ ಮಾನಿಟರ್ ಮಾಡಬೇಕು. ವಾರ್ಡ್ ಅಥವಾ ಗ್ರಾಮಗಳಿಗೆ ಭೇಟಿ ನೀಡಿ ಶಂಕಿತ ಪ್ರಕರಣದ ಮೇಲೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಶಂಕಿತ ಡೆಂಗ್ಯೂ ಪ್ರಕರಣಗಳ ಟೆಸ್ಟ್​ಗೆ NSI antigen ಹಾಗೂ IgM ಟೆಸ್ಟಿಂಗ್ ಕಿಟ್ ಪರಿಶೀಲಿಸಬೇಕು. ಲಾರ್ವ ನಾಶ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಗಾಳಿಯ ಅಬ್ಬರಕ್ಕೆ ಚಾಲಕನಿಲ್ಲದೇ ಮುಂದೆ ಸಾಗಿದ ಆಟೋ! ವಿಡಿಯೋ ನೋಡಿ

ಡೆಂಗ್ಯೂ: ಈ ಮುನ್ನೆಚ್ಚರಿಕೆ ಕೈಗೊಳ್ಳಿ

ಈ ಮಧ್ಯೆ, ಜನರು ಮನೆ ಸುತ್ತ ಸ್ವಚ್ಛತೆ ಕಾಪಾಡುವುದು ಈ ಹೊತ್ತಿನಲ್ಲಿ ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆದಷ್ಟು ಮನೆಯಲ್ಲಿ ಮಲಗುವ ಹೊತ್ತಿನಲ್ಲಿ ಸೊಳ್ಳೆ ಪರದೆ ಹಾಕುವುದು, ಬಿಸಿ ನೀರು ಕುಡಿಯುವುದು, ಆರೋಗ್ಯಕರ ಆಹಾರ ಸೇವನೆ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬಿಟ್ಟು ಬಿಟ್ಟು ಜ್ವರ ಬಂದು ಮೂರನೇ ದಿನವಾದರೂ ಜ್ವರ ಮರುಕಳಿಸಿದರೆ, ಇದರ ಜತೆ ವಾಂತಿ ಇದ್ದರೆ ಡೆಂಘಿ ಟೆಸ್ಟ್ ಮಾಡಿಸುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್