AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕೊರತೆ ನಡುವೆಯೂ ಕಳಪೆ ಆಹಾರ ವಿರುದ್ಧ ಸಮರ ಸಾರಿರುವ ಆಹಾರ ಸುರಕ್ಷತಾ ಇಲಾಖೆ ಮೇಲೆ ಈಗ ಜನರಿಗೂ ಸಿಟ್ಟು! ಯಾಕೆ ಗೊತ್ತೇ?

ಸಿಬ್ಬಂದಿ ಹಾಗೂ ಅಧಿಕಾರಿಗಳ ತೀವ್ರ ಕೊರತೆ ಎದುರಿಸುತ್ತಿದ್ದರೂ ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್, ರೆಸ್ಟೋರೆಂಟ್​ಗಳ ಮೇಲೆ ನಿರಂತರ ದಾಳಿ ನಡೆಸಿ ಕಳಪೆ ಆಹಾರದ ಬಗ್ಗೆ ಸತತ ಶೋಧ ನಡೆಸುತ್ತಿದ್ದಾರೆ. ಇಷ್ಟಾದರೂ ಬೆಂಗಳೂರಿಂದ ಹೆಚ್ಚಿನ ಜನರು ಇಲಾಖೆಯ ಕಾರ್ಯ ವೈಖರಿ ಮೇಲೆ ವಿಶ್ವಾಸ ಕಡಿಮೆಯಾಗಿದೆ ಎಂದಿರುವ ಅಚ್ಚರಿಯ ಅಂಶ ಸಮೀಕ್ಷೆಯೊಂದರಿಂದ ಬೆಳಕಿಗೆ ಬಂದಿದೆ.

ಸಿಬ್ಬಂದಿ ಕೊರತೆ ನಡುವೆಯೂ ಕಳಪೆ ಆಹಾರ ವಿರುದ್ಧ ಸಮರ ಸಾರಿರುವ ಆಹಾರ ಸುರಕ್ಷತಾ ಇಲಾಖೆ ಮೇಲೆ ಈಗ ಜನರಿಗೂ ಸಿಟ್ಟು! ಯಾಕೆ ಗೊತ್ತೇ?
ಹೋಟೆಲ್​ಗಳ ಮೇಲೆ ಅಧಿಕಾರಿಗಳ ದಾಳಿ (ಸಂಗ್ರಹ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on:Aug 22, 2026 | 9:22 AM

Share

ಮುಖ್ಯಾಂಶಗಳು

  • ಶೇ 43 ಮಂದಿಗೆ ಆಹಾರ ಸುರಕ್ಷತೆ ಮೇಲೆ ವಿಶ್ವಾಸವಿಲ್ಲ
  • ನಿರಂತರ ತಪಾಸಣೆಗೆ ಬೆಂಗಳೂರಿಗರ ಒತ್ತಾಯ
  • ನಾಗರಿಕರ ಆಹಾರ ಸುರಕ್ಷತಾ ತಂಡ ರಚನೆ

ಬೆಂಗಳೂರು, ಆಗಸ್ಟ್ 22: ಬೆಂಗಳೂರಿನಲ್ಲಿ (Bengaluru) ಆಹಾರ ಸುರಕ್ಷತಾ ನಿಯಮ ಉಲ್ಲಂಘನೆಗಳ ವಿರುದ್ಧ ಅಧಿಕಾರಿಗಳು ಇತ್ತೀಚೆಗೆ ತಪಾಸಣೆ ಹಾಗೂ ದಾಳಿ ಹೆಚ್ಚಿಸಿರುವುದು ನಿರಂತರ ವರದಿಯಾಗುತ್ತಿದೆ. ಒಂದೆಡೆ, ಆಹಾರ ಸುರಕ್ಷತಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವ ವಿಚಾರ ಇತ್ತೀಚೆಗಷ್ಟೇ ಬಹಿರಂಗವಾಗಿತ್ತು. ಮಂಜೂರಾದ 210 ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳಲ್ಲಿ 113 ಹುದ್ದೆಗಳು ಖಾಲಿ ಇರುವ ವಿಚಾರ ಬೆಳಕಿಗೆ ಬಂದಿತ್ತು. ಇದೆಲ್ಲದರ ನಡುವೆಯೂ ಆಹಾರ ಸುರಕ್ಷತೆ ಬಗ್ಗೆ ಕಟ್ಟುನಿಟ್ಟಿನ ಕ್ರಮ ನಡೆಯುತ್ತಿದ್ದರೂ ಇಲಾಖೆಯ ಪರಿಣಾಮಕಾರಿತ್ವದ ಬಗ್ಗೆ ಸಾರ್ವಜನಿಕರ ವಿಶ್ವಾಸ ಇನ್ನೂ ಕಡಿಮೆಯೇ ಇದೆ ಎಂಬ ಅಚ್ಚರಿಯ ಅಂಶವೊಂದು ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ. ಲೋಕಲ್ ಸರ್ಕಲ್ಸ್ (LocalCircles) ನಡೆಸಿದ ಸಮೀಕ್ಷೆಯಲ್ಲಿ ಬೆಂಗಳೂರಿನ 2,762 ನಿವಾಸಿಗಳು ಭಾಗವಹಿಸಿದ್ದು, ಶೇ 43 ಮಂದಿ ಜಿಲ್ಲಾ ಹಾಗೂ ರಾಜ್ಯ ಆಹಾರ ಮತ್ತು ಔಷಧ ಆಡಳಿತ (FDA)ದ ಮೇಲೆ ಅತ್ಯಂತ ಕಡಿಮೆ ಅಥವಾ ಯಾವುದೇ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಶೇ 31 ಮಂದಿ ಸಂಸ್ಥೆಯ ಮೇಲೆ ಕಡಿಮೆ ವಿಶ್ವಾಸವಿದೆ ಎಂದಿದ್ದಾರೆ. ಕೇವಲ ಶೇ 23 ಮಂದಿ ಮಾತ್ರ ಆಹಾರ ಸುರಕ್ಷತಾ ನಿಯಂತ್ರಣ ವ್ಯವಸ್ಥೆಯ ಮೇಲೆ ಹೆಚ್ಚಿನ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಶೇ 3 ಮಂದಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾಗರಿಕರ ಬೇಡಿಕೆ, ಅಭಿಪ್ರಾಯ ಏನು?

ನಗರದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಪಾಸಣೆ ಮತ್ತು ದಾಳಿಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಈ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಆದರೆ, ದೊಡ್ಡ ಪ್ರಕರಣವೊಂದು ಬೆಳಕಿಗೆ ಬಂದ ಬಳಿಕ ಮಾತ್ರ ದಾಳಿ ನಡೆಸುವ ಬದಲು ವರ್ಷಪೂರ್ತಿ ನಿರಂತರವಾಗಿ ತಪಾಸಣೆ ನಡೆಸಬೇಕು ಎಂಬುದು ನಾಗರಿಕರ ಪ್ರಮುಖ ಬೇಡಿಕೆಯಾಗಿದೆ.

‘ಆಹಾರ ಮಳಿಗೆಗಳ ಮೇಲೆ ಆಗಾಗ್ಗೆ ದಾಳಿ ನಡೆಯುತ್ತಿದ್ದರೂ ವರ್ಷದ ಉಳಿದ ಅವಧಿಯಲ್ಲಿ ಏನಾಗುತ್ತಿದೆ ಎಂಬುದು ಸಾರ್ವಜನಿಕರಿಗೆ ತಿಳಿಯುವುದಿಲ್ಲ’ ಎಂದು ಹೆಬ್ಬಾಳದ ನಿವಾಸಿ ರಂಜಿತಾ ಅಯ್ಯರ್ ಎಂಬವರು ಆತಂಕ ವ್ಯಕ್ತಪಡಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ. ನಿಯಮಿತ ತಪಾಸಣೆ ನಡೆಯುತ್ತಿದೆಯೇ ಎಂಬ ಮಾಹಿತಿ ಗ್ರಾಹಕರಿಗೆ ಲಭ್ಯವಾಗಬೇಕು ಎಂದು ಅವರು ಹೇಳಿದ್ದಾರೆ.

ರೆಸ್ಟೋರೆಂಟ್‌ಗಳ ತಪಾಸಣೆ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವ ಅಗತ್ಯವಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಯಾವ ಹೋಟೆಲ್ ಅಥವಾ ರೆಸ್ಟೋರೆಂಟ್‌ಗೆ ಕೊನೆಯ ಬಾರಿ ತಪಾಸಣೆ ನಡೆಸಲಾಗಿತ್ತು, ಆಗ ಯಾವ ಅಂಶಗಳು ಪತ್ತೆಯಾಗಿದ್ದವು ಎಂಬ ಮಾಹಿತಿ ಗ್ರಾಹಕರಿಗೆ ಗೋಚರಿಸುವಂತೆ ಮಾಡಬೇಕು. ಇದರಿಂದ ಆಹಾರ ಸುರಕ್ಷತಾ ವ್ಯವಸ್ಥೆಯ ಮೇಲಿನ ವಿಶ್ವಾಸ ಹೆಚ್ಚಬಹುದು ಎಂದು ನಾಗರಿಕರು ಹೇಳಿದ್ದಾರೆ.

ರಾಷ್ಟ್ರಮಟ್ಟದಲ್ಲಿಯೂ ಪರಿಸ್ಥಿತಿ ಹೆಚ್ಚು ಭಿನ್ನವಾಗಿಲ್ಲ. ದೇಶಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ 79ರಷ್ಟು ಗ್ರಾಹಕರು ತಮ್ಮ ಸ್ಥಳೀಯ ಆಹಾರ ಸುರಕ್ಷತಾ ನಿಯಂತ್ರಣ ಸಂಸ್ಥೆಯ ಮೇಲೆ ಕಡಿಮೆ, ಅತ್ಯಂತ ಕಡಿಮೆ ಅಥವಾ ಯಾವುದೇ ವಿಶ್ವಾಸವಿಲ್ಲ ಎಂದು ತಿಳಿಸಿದ್ದಾರೆ.

ಆಹಾರ ಸುರಕ್ಷತಾ ಇಲಾಖೆಯಲ್ಲಿ ಅಧಿಕಾರಿ, ಸಿಬ್ಬಂದಿ ಕೊರತೆ

ರಾಜ್ಯದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಗೂ ಕೊರತೆ ಇರುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ರಾಜ್ಯದಲ್ಲಿ ಮಂಜೂರಾಗಿರುವ ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳ ಪೈಕಿ ಶೇ 53ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ನಿಯಮಿತ ತಪಾಸಣೆ ಹಾಗೂ ಜಾರಿ ಕಾರ್ಯಕ್ಕೆ ತೊಂದರೆಯಾಗುತ್ತಿರುವುದು ತಿಳಿದುಬಂದಿತ್ತು. ರಾಜ್ಯದಲ್ಲಿ ಒಟ್ಟು 210 ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ಕೇವಲ 97 ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದ 113 ಹುದ್ದೆಗಳು ಖಾಲಿ ಇವೆ. ಆಹಾರ ವಿಶ್ಲೇಷಕರು ಹಾಗೂ ಆಹಾರ ನಿರೀಕ್ಷಕರ ಹುದ್ದೆಗಳಲ್ಲಿಯೂ ಸಾಕಷ್ಟು ಹುದ್ದೆಗಳು ಖಾಲಿ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ: ಹೋಟೆಲ್​ಗಳ ಕರ್ಮಕಾಂಡ ಬೆನ್ನಲ್ಲೇ ಮತ್ತೊಂದು ಮಹತ್ವದ ವಿಚಾರ ಬಯಲು: ರಾಜ್ಯದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಗೂ ಕೊರತೆ!

ನಕಲಿ ಔಷಧಿಗಳ ಬಗ್ಗೆಯೂ ಆತಂಕ

ಆಹಾರ ಮಳಿಗೆಗಳಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ನಕಲಿ ಔಷಧಿಗಳ ಮಾರಾಟದ ಬಗ್ಗೆಯೂ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ಔಷಧಿ ಜಾಲ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕಳವಳ ಮತ್ತಷ್ಟು ಹೆಚ್ಚಾಗಿದೆ.

ಏತನ್ಮಧ್ಯೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಅಕ್ರಮ ಅಥವಾ ಅನೈರ್ಮಲ್ಯದ ಚಟುವಟಿಕೆಗಳು ಕಂಡುಬಂದರೆ ಸಾರ್ವಜನಿಕರು ಮೌನವಾಗಿರದೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಅನುಮಾನಾಸ್ಪದ ವ್ಯವಹಾರಗಳ ವಿರುದ್ಧ ಕ್ರಮ ಕೈಗೊಳ್ಳಲು ನಾಗರಿಕರ ಸಹಕಾರ ಅತ್ಯಂತ ಅಗತ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ಔಷಧ ದಂಧೆ ಪ್ರಕರಣ: ಪೊಲೀಸರ ಜೊತೆಗೇ ಕಿಂಗ್​ಪಿನ್​​ ಕಣ್ಣಾಮುಚ್ಚಾಲೆ?, ಲುಕ್‌ಔಟ್‌ ನೋಟಿಸ್ ಜಾರಿ

ಇದಲ್ಲದೆ, ತಾಲೂಕು ಮಟ್ಟದಲ್ಲಿ ನಾಗರಿಕರ ನೇತೃತ್ವದ ಆಹಾರ ಸುರಕ್ಷತಾ ಕಣ್ಗಾವಲು ತಂಡಗಳನ್ನು ರಚಿಸುವ ಯೋಜನೆಯನ್ನೂ ಸಚಿವರು ತಿಳಿಸಿದ್ದಾರೆ. ಆರೋಗ್ಯ ಮತ್ತು ಪೌಷ್ಟಿಕಾಂಶ ಕ್ಷೇತ್ರದ ಹಿರಿಯರು ಹಾಗೂ ನಿವೃತ್ತ ತಜ್ಞರನ್ನು ಈ ತಂಡಗಳಲ್ಲಿ ನೇಮಿಸಿ, ಆಹಾರ ಸುರಕ್ಷತಾ ಜಾರಿ ಕಾರ್ಯಗಳಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:49 am, Sat, 22 August 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ