ಕರ್ನಾಟಕದಲ್ಲಿ ಇಂದು ಒಂದೇ ದಿನ 44 ಕೊವಿಡ್ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ಕರ್ನಾಟಕ ಕೋವಿಡ್ ಮಾರ್ಗಸೂಚಿ: ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ನ ಜೆಎನ್1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಇದರ ಮಧ್ಯೆ ಇಂದು ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಹಾಗಾದ್ರೆ, ಇಂದು ಎಷ್ಟು ಕೋವಿಡ್ ಕೇಸ್ ಪತ್ತೆಯಾಗಿವೆ? ಪಾಸಿಟಿವಿಟಿ ರೇಟ್ ಎಷ್ಟಿದೆ? ಇಲ್ಲಿದೆ ವಿವರ
ಬೆಂಗಳೂರು, (ಡಿಸೆಂಬರ್ 19): ದೇಶದಲ್ಲಿ ಕೋವಿಡ್ ಉಪತಳಿ ಜೆಎನ್ 1 (Covid JN 1) ಮೊದಲ ಪ್ರಕರಣ ಪತ್ತೆಯಾಗಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಂಜಾಗ್ರತೆ ವಹಿಸುವಂತೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಟೆಸ್ಟಿಂಗ್ ಹೆಚ್ಚಿಸಲು ತೀರ್ಮಾನಿಸಿದೆ. ಅದಕ್ಕೂ ಮೊದಲು ಕರ್ನಾಟಕದಲ್ಲಿ ಇಂದು(ಡಿಸೆಂಬರ್ 19) ಒಂದೇ ದಿನ 44 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರರೊಂದಿಗೆ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಪತ್ತೆಯಾದ ಕೋರೊನಾ ಕೇಸ್ ಸಂಖ್ಯೆ – 44, ಇಂದು ಆಸ್ಪತ್ರೆಯಿಂದ ಡಿಸ್ಜಾರ್ಜ್ ಆದವರ ಸಂಖ್ಯೆ – 35. ಇನ್ನು ರಾಜ್ಯದಲ್ಲಿ ಒಟ್ಟು ಸಕ್ರಿಯ ಕೊರೋನಾ ಕೇಸ್ಗಳು 79 ಇವೆ. ಇದರೊಂದಿಗೆ ಕರ್ನಾಟಕದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.6.09ರಷ್ಟಿದೆ.
ಇದನ್ನೂ ಓದಿ: Karnataka Covid Guidelines: ಕರ್ನಾಟಕ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ವಿವರ
ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ನ ಜೆಎನ್1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಆತಂಕ ಸೃಷ್ಟಿಯಾಗಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
ಔಷಧ, ಆಕ್ಸಿಜನ್, ಬೆಡ್ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೇ ಕೊವಿಡ್ ಟೆಸ್ಟ್ ಹೆಚ್ಚಿಸಲು ಅಧಿಕಾರಿಗಳು, ಸಿಬ್ಬಂದಿಗೆ ಸೂಚಿಸಲಾಗಿದೆ. ನಾಳೆಯಿಂದ ಕೊವಿಡ್ ಟೆಸ್ಟಿಂಗ್ ಹೆಚ್ಚಿಸಲಾಗುವುದು. ಆರಂಭದಲ್ಲಿ 500 ರಿಂದ 1000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ಒಂದು ವಾರದ ಬಳಿಕ 5000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ವಿಶ್ವದಲ್ಲಿ JN1 ವೈರಸ್ ನವೆಂಬರ್ ನಲ್ಲಿ 10% ಹರಡುವಿಕೆ ಇತ್ತು. ಈಗ ಡಿಸೆಂಬರ್ ವೇಳಗೆ 30% ಆಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಹಿತಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ