ಬೆಂಗಳೂರು: ಕಾರಿನಲ್ಲಿ ವ್ಯಕ್ತಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಗುಂಡಿಕ್ಕಿ ಹತ್ಯೆ ಶಂಕೆ

ಬೆಂಗಳೂರಿನಲ್ಲಿ ನಿಂತಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ತಲೆಗೆ ಗುಂಡೇಟಿನ ರೀತಿ ಗಾಯವಾಗಿದೆ. ಹೀಗಾಗಿ ಆತ್ಮಹತ್ಯೆಯೋ ಅಥವಾ ದುಷ್ಕರ್ಮಿಗಳ ಗುಂಡಿಕ್ಕಿ ಹತ್ಯೆ ಮಾಡಿದ್ದಾರೋ ಎನ್ನುವ ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಾಗಳಲ್ಲಿ ತನಿಖೆ ನಡೆಸಿದ್ದಾರೆ. ಇನ್ನು ಮೃತ ವ್ಯಕ್ತಿ ಯಾರು ಎನ್ನುವುದು ಸಹ ಪೊಲೀಸರು ಪತ್ತೆ ಮಾಡಿದ್ದಾರೆ.

ಬೆಂಗಳೂರು: ಕಾರಿನಲ್ಲಿ ವ್ಯಕ್ತಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಗುಂಡಿಕ್ಕಿ ಹತ್ಯೆ ಶಂಕೆ
ಕಾರಿನೊಳಗೆ ವ್ಯಕ್ತಿ ಶವ ಪತ್ತೆ
Edited By:

Updated on: Nov 17, 2026 | 3:18 PM

ಬೆಂಗಳೂರು, (ನವೆಂಬರ್ 17): ಬೆಂಗಳೂರಿನ ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನ ಮುಂದಿನ ಸೀಟಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಇದೀಗ ವ್ಯಕ್ತಿಯ ಗುರುತು ಸಹ ಪತ್ತೆಯಾಗಿದೆ. ಬನ್ನೇರಘಟ್ಟ ರಸ್ತೆ ನಿವಾಸಿ ಇಮ್ರಾನ್ ಪಾಷ ಎನ್ನುವುದು ಗೊತ್ತಾಗಿದೆ. ಆದ್ರೆ, ಮೃತ ಇಮ್ರಾನ್ ಪಾಷ ಹಣೆಗೆ ಗಾಯವಾಗಿರುವುದು ಕಂಡುಬಂದಿದೆ. ಇನ್ನು ಸ್ಥಳದಲ್ಲಿ ಬುಲೆಟ್ ಕೂಡ ಸಿಕ್ಕಿದೆ. ಹೀಗಾಗಿ ಗುಂಡಿಕ್ಕಿ ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನೊಂದೆಡೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಕಾರಿನನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕಂಡು ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಬಾಗಲೂರು ಠಾಣೆಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರಿನೊಳಗೆ ಗುಂಡೇಟಿನಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಬನ್ನೇರಘಟ್ಟ ರಸ್ತೆ ನಿವಾಸಿ ಇಮ್ರಾನ್ ಪಾಷ ಎಂಬುವುದು ಗೊತ್ತಾಗಿದೆ. ಹೀಗಾಗಿ ಈ ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಆತ್ಮಹತ್ಯೆಯೇ? ಅಥವಾ ದುಷ್ಕರ್ಮಿಗಳ ದಾಳಿಯಿಂದ ಸಾವು ಸಂಭವಿಸಿದೆಯೇ ಎಂಬುದರ ಕುರಿತು ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Loading...

ಇದನ್ನೂ ನೋಡಿ: ಪ್ರಾಜೆಕ್ಟ್ ವರ್ಕ್‌ಗೆ ತೆರಳುತ್ತಿದ್ದ ವೇಳೆ ಕಾರಿನ ಟೈರ್ ಸ್ಪೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಸಾವು; ಹೆತ್ತವರ ಆಕ್ರಂದನ

ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೂತ್‌ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೂತ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಿನ್ನೆ (ನವೆಂಬರ್ 17) ಸಂಜೆಯಿಂದ ಕಾರು ಇಲ್ಲೆ ಇದೆ ಅಂತ ಸ್ಥಳಿಯರು ಕರೆ ಮಾಡಿದ್ದರು. ಬಾಗಲೂರು ಪೊಲೀಸರು ಬಂದು ಪರಿಶೀಲನೆ ಮಾಡಿದಾಗ ಮೃತದೇಹ ಕಂಡು ಬಂದಿದೆ. ತಲೆಯ ಬಲ ಭಾಗಕ್ಕೆ ಗುಂಡಿಟ್ಟು ಹೊಡೆದ ಹಾಗೆ ಕಾಣಿಸುತ್ತಿದೆ‌. ಅಲ್ಲದೇ ಕಾರಿನ‌ ಪಕ್ಕದಲ್ಲಿ ಖಾಲಿ ಗುಂಡು ಸಹ‌ ಸಿಕ್ಕಿದೆ. ಇಮ್ರಾನ್ ಪಾಷ ಬನ್ನೆರಘಟ್ಟ ರಸ್ತೆ ನಿವಾಸಿ ಅಂತ ಗೊತ್ತಾಗಿದ್ದು, ಕುಟುಂಬಸ್ಥರು ಸಹ ಸ್ಥಳಕ್ಕೆ ಬಂದಿದ್ದಾರೆ ಎಂದು ಮಾಹಿತಿ ನೀಡಿದರು.

ಶೂಟ್ ಮಾಡಿರುವ ರೀತಿ ತಲೆಗೆ ಗಾಯ

ಮೃತ ಇಮ್ರಾನ್ ಪಾಷ ಸ್ಕ್ರಾಪ್ ಬ್ಯುಸಿನೆಸ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೆಲ್ನೋಟಕ್ಕೆ ಶೂಟ್ ಮಾಡಿ ಮರ್ಡರ್ ಮಾಡಿರುವ ರೀತಿ ಕಂಡು ಬಂದಿದ್ದು, FSL ತಂಡ ಸಹ ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿದ್ದಾರೆ. ಕಾರಿನಲ್ಲಿ ಗನ್ ಇದಿಯಾ ಇಲ್ವಾ ಅಂತೆಲ್ಲ ಪರಿಶೀಲನೆ ಮಾಡಬೇಕಿದೆ. ಶೂಟ್ ಮಾಡಿರುವ ರೀತಿ ತಲೆಗೆ ಗಾಯವಾಗಿದೆ. ಕುಟುಂಬಸ್ಥರ ಬಳಿಯು ಯಾರ ಜೊತೆಯಾದರು ಹಣಕಾಸಿನ ವ್ಯವಹಾರ ಇತ್ತಾ ಎನ್ನುವುದನ್ನು ಚೆಕ್ ಮಾಡುತ್ತಿದ್ದು, ತನಿಖೆ ನಂತರ ಮತ್ತಷ್ಟು ವಿಚಾರ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಇಮ್ರಾನ್ ಪಾಷ  ಸಾವು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಇದೊಂದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ಪೊಲೀಸ್ ತನಿಖೆಯ ನಂತರ ತಿಳಿಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us