ರಾಜಧಾನಿಯಲ್ಲಿ ಯುವ ಮಹಿಳೆಯರು ಹೆಚ್ಚು ನಾಪತ್ತೆ! ಬೆಂಗಳೂರು ಪೊಲೀಸರು ಹೇಳೋದೇನು?

ವರದಿಯ ಪ್ರಕಾರ 19 ರಿಂದ 21 ವರ್ಷ ವಯಸ್ಸಿನ 173 ಹುಡುಗಿಯರು ಇನ್ನೂ ಪತ್ತೆಯಾಗಿಲ್ಲ. 16 ವರ್ಷದೊಳಗಿನ 162 ಬಾಲಕಿಯರು ಕಾಣೆಯಾಗಿದ್ದಾರೆ. 17 ರಿಂದ 18 ವರ್ಷ ವಯಸ್ಸಿನ 92 ಹುಡುಗಿಯರು ಮತ್ತು 22 ವರ್ಷ ಮೇಲ್ಪಟ್ಟ ವಯಸ್ಸಿನ 58 ಮಹಿಳೆಯರು ಪತ್ತೆಯಾಗಿಲ್ಲ. ಪೊಲೀಸರು ನಿರಂತರವಾಗಿ ದೂರುದಾರರನ್ನು ಸಂಪರ್ಕಿಸುತ್ತಾರೆ, ಆದರೆ ಅವರಿಂದಲೇ ಸ್ಪಂದನೆ ಸಿಗಲ್ಲ. ಆಗ ಪ್ರಕರಣಗಳನ್ನು ಕೈಬಿಡಲಾಗುತ್ತೆ.

ರಾಜಧಾನಿಯಲ್ಲಿ ಯುವ ಮಹಿಳೆಯರು ಹೆಚ್ಚು ನಾಪತ್ತೆ! ಬೆಂಗಳೂರು ಪೊಲೀಸರು ಹೇಳೋದೇನು?
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Aug 08, 2024 | 10:26 AM

ಬೆಂಗಳೂರು, ಆಗಸ್ಟ್ 08: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳ ನಾಪತ್ತೆ (Missing) ಪ್ರಕರಣಗಳು ಹೆಚ್ಚಾಗಿವೆ. ಅಲ್ಲದೆ ಕಾಣೆಯಾದವರನ್ನು ಪತ್ತೆ ಹಚ್ಚುವಲ್ಲಿ ಬೆಂಗಳೂರು ಪೊಲೀಸರು (Bangalore Police) ವಿಫಲರಾಗುತ್ತಿದ್ದಾರಾ ಎಂಬ ಪ್ರಶ್ನೆ ಕಾಡತೊಡಗಿದೆ. ಏಕೆಂದರೆ ಕಳೆದ 12 ವರ್ಷಗಳಲ್ಲಿ 485 ಮಹಿಳೆಯರು ಮತ್ತು ಹುಡುಗಿಯರು ನಾಪತ್ತೆಯಾಗಿದ್ದಾರೆ. ಆದರೆ ಇದುವರೆಗೂ ಅವರು ಯಾರೂ ಪತ್ತೆಯೇ ಆಗಿಲ್ಲವಂತೆ!

ವರದಿಯ ಪ್ರಕಾರ 19 ರಿಂದ 21 ವರ್ಷ ವಯಸ್ಸಿನ 173 ಹುಡುಗಿಯರು ಇನ್ನೂ ಪತ್ತೆಯಾಗಿಲ್ಲ. 16 ವರ್ಷದೊಳಗಿನ 162 ಹುಡುಗಿಯರು ಕಾಣೆಯಾಗಿದ್ದಾರೆ. 17 ರಿಂದ 18 ವರ್ಷ ವಯಸ್ಸಿನ 92 ಹುಡುಗಿಯರು ಮತ್ತು 22 ವರ್ಷ ಮೇಲ್ಪಟ್ಟ ವಯಸ್ಸಿನ 58 ಮಹಿಳೆಯರು ಸಹ ಪತ್ತೆಯಾಗಿಲ್ಲ. ಕಾಣೆಯಾದವರಲ್ಲಿ ಶೆ. 70 ರಷ್ಟು ಮಹಿಳೆಯರು ಮತ್ತು ಹುಡುಗಿಯರು ಆರ್ಥಿಕವಾಗಿ ಹಿಂದುಳಿದ ಮತ್ತು ಹಿಂದುಳಿದ ಕುಟುಂಬಗಳಿಗೆ ಸೇರಿದವರು ಎಂದು ಅಂಕಿಅಂಶಗಳ ಮೂಲಕ ತಿಳಿದುಬಂದಿದೆ.

ಪ್ರೇಮ ಪ್ರಕರಣಗಳು, ಕೌಟುಂಬಿಕ ಕಲಹ, ಮನಸ್ತಾಪ, ಆರ್ಥಿಕ ಪರಿಸ್ಥಿತಿ, ಸಾಮಾಜಿಕ ಜಾಲತಾಣದಲ್ಲಿ ಪರಿಚಿತರ ಪ್ರಭಾವ, ಅಪಹರಣ, ಕಳ್ಳಸಾಗಣೆ ಮತ್ತಿತರ ಕಾರಣದಿಂದ ಬಾಲಕಿಯರು, ಮಹಿಳೆಯರು ನಾಪತ್ತೆ ಆಗುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ, ಡೆಕ್ಕನ್​ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಸೀರಿಯಲ್ ಕಿಲ್ಲರ್ಸ್​: 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ, ಮೂವರು ಶಂಕಿತರ ಬಂಧನ

ಕೆಲ ಪ್ರಕರಣಗಳಲ್ಲಿ ತಮ್ಮ ಮನೆಯವರು ನಾಪತ್ತೆಯಾಗಿದ್ದಾರೆ ಎಂಬ ಗಂಭೀರ ಅಂಶವನ್ನು ಮರೆಮಾಚುವ ಕುಟುಂಬಸ್ಥರು ಅವರನ್ನು ಪತ್ತೆಹಚ್ಚಲು ತಮ್ಮದೆ ಮಾರ್ಗಗಳನ್ನು ಹುಡುಕಿಕೊಂಡು ಹೊರಡುತ್ತಾರೆ. ಅಂತಿಮವಾಗಿ ನಾಪತ್ತೆಯಾದವರನ್ನು ಪತ್ತೆಹಚ್ಚಿಕೊಳ್ಳುತ್ತಾರೆ. ಕಾಣೆಯಾದ ವ್ಯಕ್ತಿಯನ್ನು ಪತ್ತೆಹಚ್ಚಲು ಈ ಕುಟುಂಬಗಳು ಪೊಲೀಸ್ ತನಿಖೆಗಳನ್ನೂ ಮೀರಿದ ವಿಧಾನಗಳು, ಮಾರ್ಗಗಳನ್ನು ಬಳಸುತ್ತವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪರಿಸ್ಥಿತಿಯ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಬಿಚ್ಚಿಟ್ಟಿದ್ದಾರೆ.

ಇನ್ನು ಕೆಲ ಕುಟುಂಬಗಳಲ್ಲಿ ಕಾಣೆಯಾದ ಯುವತಿ ಹಿಂದಿರುಗಿ ಮನೆಗೆ ಬಂದರೆ ನೆರೆಹೊರೆಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಅವಮಾನ ಮಾಡುತ್ತಾರೆ ಎಂದು ಹೆದರಿ ಕುಟುಂಬಸ್ಥರು ಪ್ರಕರಣದ ತನಿಖೆಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಹಾಗೂ ತನಿಖೆಯ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನಗಳನ್ನೂ ಮಾಡುವುದಿಲ್ಲ. ಅಂತಿಮವಾಗಿ ತನಿಖಾಧಿಕಾರಿಗಳಿಗೆ ಪ್ರತಿಕ್ರಿಯಿಸುವುದನ್ನೂ ನಿಲ್ಲಿಸುತ್ತಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ನಿರಂತರವಾಗಿ ದೂರುದಾರರನ್ನು ಸಂಪರ್ಕಿಸುತ್ತಾರೆ, ಆದರೆ ಅವರಿಂದಲೇ ಸ್ಪಂದನೆ ಸಿಗಲ್ಲ. ಆಗ ಪ್ರಕರಣಗಳನ್ನು ಕೈಬಿಡಲಾಗುತ್ತೆ. ಅಪ್ರಾಪ್ತ ಬಾಲಕಿಯು ಓಡಿಹೋಗಿ ಮದುವೆಯಾಗಿ ಹಿಂದಿರುಗಿದಾಗ, ದೂರುದಾರರು ಹುಡುಗನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವುದನ್ನು ತಡೆಯಲು ಪೊಲೀಸರಿಗೆ ಮಾಹಿತಿ ನೀಡುವುದನ್ನೇ ತಪ್ಪಿಸುತ್ತಾರೆ. ಇದರಿಂದಾಗಿ ಅನೇಕ ನಾಪತ್ತೆ ಪ್ರಕರಣ​ಗಳು ಕ್ಲೋಸ್ ಆಗುವುದಿಲ್ಲ ಎಂದು ಅ ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ