ಬೆಂಗಳೂರು, ಅಕ್ಟೋಬರ್ 08: ಎನ್ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಸ್ಟಾನ್ಸ್ ಆಕ್ಟ್) ಅಡಿಯಲ್ಲಿ ಬೆಂಗಳೂರಿನಲ್ಲಿ (Bengaluru) ಒಂದೇ ತಿಂಗಳಲ್ಲಿ 49 ಪ್ರಕರಣಗಳು ದಾಖಲಾಗಿದ್ದು, 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ (Drugs) ಅನ್ನು ಪೊಲೀಸರು (Police) ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮೂವರು ವಿದೇಶಿ ಪ್ರಜೆಗಳು ಸೇರಿ 67 ಮಂದಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ಒಟ್ಟು 171 ಕೆಜಿ 985 ಗ್ರಾಂ ಅಫೀಮು, 13 ಗ್ರಾಂ ಕೊಕೇನ್, 372 ಗ್ರಾಂ ಎಂಡಿಎಂಎ, 998 ಎಕ್ಸ್ಟೆಸಿ ಮಾತ್ರೆಗಳು ಮತ್ತು 1089 ಎಲ್ಎಸ್ಡಿ ಸ್ಟ್ರಿಪ್ಸ್ಗಳನ್ನು ಬೆಂಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ.
ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಸ್ನೇಹಿತರನ್ನು ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದರು. ಆಫ್ರಿಕಾ ಮೂಲದ ಮೈಕಲ್ ಓಕೆಲಿ ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು.
ಆರೋಪಿ ಮೈಕೆಲ್ 2018ರಲ್ಲಿ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು, ಕೆ.ಆರ್.ಪುರಂನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇದ್ದನು. ಸಹನಾ ಮತ್ತು ಮೈಕಲ್ ಸ್ನೇಹಿತರಾಗಿದ್ದು, ಒಟ್ಟಿಗೆ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ಮೈಕಲ್ ಮತ್ತು ಸಹನಾ ಒಟ್ಟಿಗೆ ಕೆಆರ್ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್ ಆಗಿದ್ದರು. ಇಲ್ಲಿ, ಒಂದೇ ಮನೆಯಲ್ಲಿ ವಾಸವಾಗಿದ್ದ ಮೈಕಲ್ ಮತ್ತು ಸಹನಾ, ಇಲ್ಲಿಂದಲೇ ಡ್ರಗ್ಸ್ ಸರಬರಾಜು ಮಾಡಲು ಆರಂಭಿಸಿದ್ದರು.
ಇದನ್ನೂ ಓದಿ: ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ; 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ
ಸಿಸಿಬಿ ಪೊಲೀಸರು ಜುಲೈನಲ್ಲಿ ಓರ್ವ ಡ್ರಗ್ಸ್ ಪೆಡ್ಲರ್ನನ್ನು ಬಂಧಿಸಿದ್ದರು. ಈತ ನೀಡಿದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಮೈಕಲ್ನ ಬಂಧನಕ್ಕೆ ಬಲೆಬೀಸಿದ್ದರು. ಆರೋಪಿ ಮೈಕಲ್ ಯರಪ್ಪನಹಳ್ಳಿ ಗ್ರಾಮದಲ್ಲಿರುವ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ನಂತರ ಆತನ ಮನೆ ಮೇಲೆ ದಾಳಿ ಮಾಡಿ, ಬಂಧಿಸಿದ್ದರು. ಬಂಧಿತರಿಂದ ಒಂದು ಕೆಜಿಗೂ ಅಧಿಕ ಎಂಡಿಎಂಎ, ಮೂರು ಮೊಬೈಲ್, ಎರಡು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಿಸಿಬಿ ಪೊಲೀಸರುಸ ವಶಕ್ಕೆ ಪಡೆದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ