AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿವಿಧೆಡೆ ರಸ್ತೆ ಅಪಘಾತ: 5 ಮಂದಿ ಬೈಕ್​ ಸವಾರರ ಸಾವು

ಒಂದೇ ದಿನ ರಾಜ್ಯದ ವಿವಿಧೆಡೆ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಐವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಥಣಿಸಂದ್ರದಲ್ಲಿ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಐಮಾನ್ ಮೃತಪಟ್ಟಿದ್ದಾನೆ.ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ ಬಾಗಲಕೋಟೆಯಲ್ಲಿ ಬಸ್-ಬೈಕ್ ಡಿಕ್ಕಿಯಾಗಿ ದಂಪತಿ ಮೃತಪಟ್ಟಿದ್ದಾರೆ. ದಾವಣಗೆರೆಯಲ್ಲಿಯೂ ಬೈಕ್ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ರಾಜ್ಯದ ವಿವಿಧೆಡೆ  ರಸ್ತೆ ಅಪಘಾತ: 5 ಮಂದಿ ಬೈಕ್​ ಸವಾರರ ಸಾವು
ಕೆಎಸ್​ಆರ್​ಟಿಸಿ ಬಸ್​ ಅಪಘಾತ
Follow us
Kiran Surya
| Updated By: ವಿವೇಕ ಬಿರಾದಾರ

Updated on: Mar 29, 2025 | 2:53 PM

ಬೆಂಗಳೂರು, ಮಾರ್ಚ್​ 29: ಬಿಬಿಎಂಪಿ (BBMP) ಕಸದ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ (Bengaluru) ಥಣಿಸಂದ್ರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬೈಕ್​ನಲ್ಲಿ ತೆರಳುತ್ತಿದ್ದ 10 ವರ್ಷದ ಐಮಾನ್ ಮೃತ ಬಾಲಕ. ಬಾಲಕನ ಮೃತಪಟ್ಟಿದ್ದನ್ನು ಕಂಡು ರೊಚ್ಚಿಗೆದ್ದ ಸಾರ್ವಜನಿಕರು ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಚಾಲಕ ಲಾರಿಯಿಂದ ಕೆಳಗಿಳಿದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಪಘಾತದಲ್ಲಿ ಐವಾನ್​ ತಂದೆಗೆ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಎಂನ ಆರೋಪ ಕೇಳಿಬಂದಿದೆ. ಶಾಲಾ ದಾಖಲಾತಿ ಬಗ್ಗೆ ವಿಚಾರಿಸಲು ತಂದೆ ಮತ್ತು ಮಗ ಮನೆಯಿಂದ ಹೊರಟಿದ್ದರು ಎಂದು ತಿಳಿದುಬಂದಿದೆ.

ದಂಪತಿ ಸ್ಥಳದಲ್ಲೇ ಸಾವು

ಬಾಗಲಕೋಟೆ: ಮುಧೋಳ ತಾಲೂಕಿನ ಮುಗಳಕೋಡ ಕ್ರಾಸ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್​ನಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ. ಸರ್ಕಾರಿ ಬಸ್ ಮತ್ತು ಬೈಕ್​ ಮುಖಾಮುಖಿ ಡಿಕ್ಕಿಯಾಗಿವೆ. ಬಸ್​ನಲ್ಲಿದ್ದ 15 ಜನರಿಗೆ ಗಂಭೀರ ಗಾಯವಾಗಿದೆ. ಶಂಕರೆಪ್ಪ ಲಕ್ಷ್ಮೇಶ್ವರ (55), ಶ್ರೀದೇವಿ ಲಕ್ಷ್ಮೇಶ್ವರ (50) ಮೃತ ದುರ್ದೈವಿಗಳು. ಮೃತ ದಂಪತಿ ಮುಧೋಳ ತಾಲೂಕಿನ ಮುಗಳಖೋಡ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮುಧೋಳ ತಾಲೂಕು ಆಸ್ಪತ್ರೆಗೆ ದಾಖಲಿಸಾಲಗಿದೆ. ಕೆಎಸ್​ಆರ್​ಟಿಸಿ ಬಸ್​ ಚಿಕ್ಕೋಡಿಯಿಂದ ಮುಧೋಳ ಮಾರ್ಗವಾಗಿ ತೆರಳುತ್ತಿತ್ತು. ಸ್ಥಳಕ್ಕೆ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಮುಧೋಳ ಸಿಪಿಐ ಭೇಟಿ ನೀಡಿ ಮಾಹಿತಿ ಪಡೆದರು. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ
Image
ಒಬ್ಬೊಬ್ಬರಾಗಿ ಸುರಕ್ಷಿತವಾಗಿ ಮನೆ ಸೇರಿದ ದಾವಣಗೆರೆಯ 22 ಹಕ್ಕಿಪಿಕ್ಕಿ ಜನರು
Image
ಯುಗಾದಿಗೆ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗ್ತೀರಾ? ಈ ಸೂಚನೆ ಗಮನಿಸಿ
Image
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
Image
ರಸ್ತೆ ಅಪಘಾತದಲ್ಲಿ ​ರುದ್ರಪ್ಪ ಲಮಾಣಿಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು-ಚಿಕ್ಕೋಡಿ ಬಸ್ ಆಕಸ್ಮಿಕವಾಗಿ ಅಪಘಾತಕ್ಕೀಡಾಗಿದೆ. ಇಬ್ಬರು ಮೃತ ಪಟ್ಟಿದ್ದಾರೆ, ಬಸ್​ನಳಿದ್ದ 20 ಜನರಿಗೆ ಗಾಯವಾಗಿದೆ. ಸರ್ಕಾರ ಕೂಡಲೇ ಮೃತರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಗಾಯಾಳುಗಳಿಗೂ ಪರಿಹಾರ ಕೊಡಬೇಕು ಜೊತೆಗೆ ಚಿಕಿತ್ಸೆ ವೆಚ್ಚ ಭರಿಸಬೇಕು. ಮೃತರ ಆತ್ಮಹತ್ಯೆ ಚಿರಶಾಂತಿ ದೊರೆಯಲಿ ಅಂತ ಪ್ರಾರ್ಥಿಸುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಇದನ್ನೂ ಓದಿ: ಟಿಟಿ ವಾಹನ ಪಲ್ಟಿಯಾಗಿ ಮೂವರು ದುರ್ಮರಣ

ಬೈಕ್​ನಲ್ಲಿದ್ದ ಇಬ್ಬರು ದುರ್ಮರಣ

ದಾವಣಗೆರೆ: ಚನ್ನಗಿರಿ ತಾಲೂಕಿನ ಗುಳ್ಳೇಹಳ್ಳಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (30) ಮೃತ ದುರ್ದೈವಿಗಳು. ಮೃತರು ಚಿಕ್ಕಮಗಳೂರಿನ ಕೊಟ್ಟಿಗೆಹಾಳದಿಂದ ದಾವಣಗೆರೆ ಕಡೆ ಹೊರಟಿದ್ದರು. ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಚಾಲಕನಿಗೆ ಹುಡುಕಾಟ ನಡೆದಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ