ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನು ಐದು ದಿನ ಮಳೆ ಸಾಧ್ಯತೆ; ಕರಾವಳಿ, ಮಲೆನಾಡು ಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ!

ಬೆಂಗಳೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲಿ ನಿನ್ನೆ ಮಳೆಯಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಮತ್ತು ಅಸಾನಿ ಚಂಡಮಾರುತದ ಪರಿಣಾಮವಾಗಿ ಸಂಜೆಯ ವೇಳೆಯಲ್ಲಿ ರಾಜಧಾನಿಯ ಮಲ್ಲೇಶ್ವರಂ ಸದಾಶಿವನಗರ, ಚಾಮರಾಜಪೇಟ, ಚಿಕ್ಕಪೇಟೆಯಲ್ಲಿ ಮಳೆಯಾಗಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನು ಐದು ದಿನ ಮಳೆ ಸಾಧ್ಯತೆ; ಕರಾವಳಿ, ಮಲೆನಾಡು ಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ!
ಪ್ರಾತಿನಿಧಿಕ ಚಿತ್ರ
Follow us
| Updated By: sandhya thejappa

Updated on:Mar 21, 2022 | 8:55 AM

ಬೆಂಗಳೂರು: ಅಸಾನಿ ಚಂಡಮಾರುತ (Asani Cyclone) ಪರಿಣಾಮ ಹಿನ್ನೆಲೆ ರಾಜ್ಯದ ಹಲವೆಡೆ ಇನ್ನು 5 ದಿನ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆಗ್ನೇಯ ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಪ್ರಬಲ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯಾದ್ಯಂತ ಗುಡುಗು, ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 24 ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗಬಹುದು.

ಇನ್ನು ಮಾರ್ಚ್ 24 ಮತ್ತು 25ರಂದು ಗದಗ, ಹಾವೇರಿ, ಧಾರವಾಡ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲಿ ನಿನ್ನೆ ಮಳೆಯಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಮತ್ತು ಅಸಾನಿ ಚಂಡಮಾರುತದ ಪರಿಣಾಮವಾಗಿ ಸಂಜೆಯ ವೇಳೆಯಲ್ಲಿ ರಾಜಧಾನಿಯ ಮಲ್ಲೇಶ್ವರಂ ಸದಾಶಿವನಗರ, ಚಾಮರಾಜಪೇಟ, ಚಿಕ್ಕಪೇಟೆಯಲ್ಲಿ ಮಳೆಯಾಗಿದೆ. ಗಿರಿನಗರ, ಹನುಮಂತನಗರ, ಬನಶಂಕರಿ, ಬಸವನಗುಡಿ, ಜಯನಗರ, ಜೆಪಿ ನಗರ, ಕುರುಬರಹಳ್ಳಿ, ಪದ್ಮನಾಭನಗರ, ಗಾಂಧಿನಗರ, ಕಾಟನ್ ಪೇಟೆ ಹಾಗೂ ಕಬ್ಬನ್ ಪಾರ್ಕ್, ಕೆಆರ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ನಗರದ ಹೊರ ಭಾಗದಲ್ಲಿ ಮಳೆಯಾಗಿದೆ.

ಬೇಸಿಗೆಯಲ್ಲಿ ಮಳೆ ಬಂದಿರುವುದಕ್ಕೆ ಜನರು ಮತ್ತು ರೈತಾಪಿ ವರ್ಗ ಸಂತಸಗೊಂಡಿದ್ದಾರೆ. ಆದರೆ ಕೆಲ ಕಡೆ ಸಿಡಿಲು, ಗಾಳಿಯ ಆರ್ಭಟ ಕೂಡ ಕಂಡು ಬಂದಿದೆ. ಗಾಳಿಯ ಅಬ್ಬರಕ್ಕೆ ಮನೆ, ಕಟ್ಟಡಗಳ ಚಾವಣಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಕಡೆ ಅಡಕೆ, ತೆಂಗು ಬೆಳೆ ಹಾನಿಯಾಗಿದೆ.

ಇದನ್ನೂ ಓದಿ

ತುಮಕೂರಿನಲ್ಲಿ ವಾಹನ ತಪಾಸಣೆ ವೇಳೆ ASIಗೆ ಬೈಕ್ ಡಿಕ್ಕಿ, ಬೆಂಗಳೂರಿನಲ್ಲಿ ಮದ್ಯದ ನಶೆಯಲ್ಲಿ ಜೀಪ್ ಚಾಲನೆ ಮಾಡಿ ಸರಣಿ ಅಪಘಾತ

Naveen Janagoudar: ಸ್ವಗ್ರಾಮದತ್ತ ನವೀನ್ ಪಾರ್ಥಿವ ಶರೀರ: ಅಂತಿಮ ನಮನಕ್ಕೆ ಚಳಗೇರಿಯಲ್ಲಿ ಸಿದ್ಧತೆ

Published On - 8:46 am, Mon, 21 March 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ