AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಯನ್ನು ಬಿಡಲು 5 ಲಕ್ಷ ರೂ. ಡಿಮ್ಯಾಂಡ್: ಸಿಕ್ಕಿಬಿದ್ದ ಕೆಆರ್ ಪುರಂ ಇನ್ಸ್​ಪೆಕ್ಟರ್​

ಭ್ರಷ್ಟ ಅಧಿಕಾರಿಗಳನ್ನ ಹೆಡೆಮುರಿ ಕಟ್ಟಿದರೂ ಇದು ನಿಲ್ಲುತ್ತಿಲ್ಲ. ಹಣದ ದಾಹಕ್ಕೆ ತಮ್ಮ ಅಧಿಕಾರವನ್ನೇ ಮಾರಿಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಲಂಚ ಸ್ವೀಕರಿಸುವಾಗ ಕೆಆರ್ ಪುರಂ(KR Puram) ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ(Lokayukta) ಬಲೆಗೆ ಬಿದಿದ್ದಾರೆ.

ಆರೋಪಿಯನ್ನು ಬಿಡಲು 5 ಲಕ್ಷ ರೂ. ಡಿಮ್ಯಾಂಡ್: ಸಿಕ್ಕಿಬಿದ್ದ ಕೆಆರ್ ಪುರಂ ಇನ್ಸ್​ಪೆಕ್ಟರ್​
ಲೋಕಾಯುಕ್ತ ಬಲೆಗೆ ಬಿದ್ದ ಕೆಆರ್​ ಪುರಂ ಪೊಲೀಸರು
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 14, 2024 | 9:16 PM

ಬೆಂಗಳೂರು, ಮಾ.14: ಲಂಚ ಸ್ವೀಕರಿಸುವಾಗ ಕೆಆರ್ ಪುರಂ(KR Puram) ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ(Lokayukta) ಬಲೆಗೆ ಬಿದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್ ರಮ್ಯ, ವಂಚನೆ ಪ್ರಕರಣದಲ್ಲಿ ಆರೋಪಿಯೊಬ್ಬನನ್ನ ವಶಕ್ಕೆ ಪಡೆದಿದ್ದರು. ಈ ಹಿನ್ನಲೆ ವಶದಿಂದ ಬಿಡಲು ಐದು ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು. ಜೊತೆಗೆ ಐವತ್ತು ಸಾವಿರ ಹಣವನ್ನ ಮೊದಲೇ ಪಡೆದಿದ್ದರು. ಇಂದು(ಮಾ.14) ಒಂದು ಲಕ್ಷ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.

ಇದೇ ಮಾ.12 ರಂದು ಜಿ.ಎಸ್.ಟಿ ಹಣ ಕಡಿತಗೊಳಿಸಲು ತುಮಕೂರಿನ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮಂಜುನಾಥ್ ವಿ.ಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು. ಇವರು ಮಂಜುನಾಥ್ ರೆಡ್ಡಿ ಎಂಬುವವರು ತಮ್ಮ ಬಳಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದ‌ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇವರ ದೂರಿನ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ಅರೆಸ್ಟ್​ ಮಾಡಿದ್ದರು.

ಇದನ್ನೂ ಓದಿ:ತುಮಕೂರು: ಜಿಎಸ್​ಟಿ ಹಣ ಕಡಿತಗೊಳಿಸಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ

ಎರಡು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಸಹಾಯಕ ಇಂಜಿನಿಯರ್​​ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಬಳ್ಳಾರಿ ನಗರದ ವಿಮ್ಸ್​ ಆಸ್ಪತ್ರೆಯ ಪಕ್ಕದಲ್ಲಿರುವ ಸಣ್ಣ ನೀರಾವರಿ ಕಚೇರಿಯಲ್ಲಿ ಮಾರ್ಚ್​ 6 ರಂದು ನಡೆದಿತ್ತು. ಕಾಮಗಾರಿ ಬಿಲ್ 30 ಲಕ್ಷ​ ರೂ. ಪಾವತಿಸಲು ಕಚೇರಿಯಲ್ಲಿ 2 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ನಾಗರಾಜ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದಿದ್ದ. ಗುತ್ತಿಗೆದಾರ ರಾಮಕೃಷ್ಣ ಎಂಬುವವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಬಳ್ಳಾರಿ ಲೋಕಾಯುಕ್ತ ಎಸ್​ಪಿ ಸಿದ್ದರಾಜ ನೇತೃತ್ವದಲ್ಲಿ ದಾಳಿ ನಡೆಸಿ ಹಿಡಿದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Thu, 14 March 24

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ