ಟ್ರಾಫಿಕ್ ಫೈನ್ ರಿಯಾಯಿತಿಗೆ ಗುಡ್ ರೆಸ್ಪಾನ್ಸ್: ಕೇವಲ 14 ದಿನದಲ್ಲಿ 18 ಕೋಟಿಗೂ ಅಧಿಕ ದಂಡ ಸಂಗ್ರಹ

ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೇಲಿನ ಶೇಕಡಾ 50ರಷ್ಟು ರಿಯಾಯಿತಿ ಯೋಜನೆಗೆ ಸದ್ಯ ಬೆಂಗಳೂರಿನಲ್ಲಿ ಭರ್ಜರಿ ಸ್ಪಂದನೆ ದೊರೆಯುತ್ತಿದೆ. ಬೆಂಗಳೂರು ಸಂಚಾರ ಪೊಲೀಸರು ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕೇವಲ 14 ದಿನಗಳಲ್ಲಿ 18.15 ಕೋಟಿ ರೂ ದಂಡ ವಸೂಲಿಯಾಗಿದೆ. ಜೊತೆಗೆ 6.06 ಲಕ್ಷ ಪ್ರಕರಣಗಳು ಇತ್ಯರ್ಥಗೊಂಡಿವೆ.

ಟ್ರಾಫಿಕ್ ಫೈನ್ ರಿಯಾಯಿತಿಗೆ ಗುಡ್ ರೆಸ್ಪಾನ್ಸ್: ಕೇವಲ 14 ದಿನದಲ್ಲಿ 18 ಕೋಟಿಗೂ ಅಧಿಕ ದಂಡ ಸಂಗ್ರಹ
ಪ್ರಾತಿನಿಧಿಕ ಚಿತ್ರ
Image Credit source: thehindu.com

Updated on: Jul 05, 2026 | 3:18 PM

ಮುಖ್ಯಾಂಶಗಳು

  • ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ ಸಖತ್ ರೆಸ್ಪಾನ್ಸ್
  • ಈರವರೆಗೂ 6,06,032 ಪ್ರಕರಣಗಳು ಇತ್ಯರ್ಥ
  • ಕೋಟಿ ಕೋಟಿ ರೂ ದಂಡದ ಹಣ ಪಾವತಿ

ಬೆಂಗಳೂರು, ಜುಲೈ 05: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಮೇಲಿನ ಶೇಕಡಾ 50ರಷ್ಟು ರಿಯಾಯಿತಿ ಯೋಜನೆಗೆ (Traffic Fine Discount) ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 21, ರಿಂದ ಜುಲೈ 4ರವರೆಗೆ ಅಂದರೆ ಕೇವಲ 14 ದಿನಗಳ ಅವಧಿಯಲ್ಲಿ ಒಟ್ಟು 18,15,42,200 ರೂ ದಂಡದ ಹಣ ಪಾವತಿಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೋಟಿ ಕೋಟಿ ದಂಡದ ಹಣ ಪಾವತಿ

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರವು ಜೂನ್​​ 04ರಿಂದ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇ.50% ರಷ್ಟು ರಿಯಾಯಿತಿಗೆ ಆದೇಶಿಸಿತ್ತು. ಅದರಂತೆ ಜೂನ್​​ 21ರಿಂದ ಜಾರಿಗೆ ಬಂದಿತ್ತು.

ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್

ದಂಡವನ್ನು ಪಾವತಿಸಲು ನಿಗದಿಪಡಿಸಲಾಗಿದ್ದ ರಿಯಾಯಿತಿ ಅವಧಿ ಅಂದರೆ ಜೂನ್​​ 21ರಿಂದ ಜುಲೈ 04ರ ವರೆಗೆ ವಿವಿಧ ಮಾಧ್ಯಮಗಳ ಮೂಲಕ ಬರೋಬ್ಬರಿ 6,06,032 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ರೂ.18,15,42,200 ರೂ ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ: ಕೇವಲ 4 ದಿನದಲ್ಲಿ 6 ಕೋಟಿ ರೂ. ಸಂಗ್ರಹ!

ವಾಹನ ಸವಾರರು ಈ ರಿಯಾಯಿತಿ ದರದಲ್ಲಿ ಬಾಕಿ ದಂಡ ಪಾವತಿಸಲು ಜುಲೈ 10ರವರೆಗೆ ಮಾತ್ರ ಅವಕಾಶವಿದೆ. ಇನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ದಂಡ ಪಾವತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಪಿಎಸ್​ಐ ಒಳಗೊಂಡಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರೊಂದಿಗೆ, ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸದಂತೆ ಜಾಗೃತಿ ಮೂಡಿಸುವ ಕಾರ್ಯದಲ್ಲೂ ಸಿಬ್ಬಂದಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ವರದಿ: ನಟರಾಜ್​, ಮೆಟ್ರೋ ಟಿವಿ9 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us