AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಾವಿನ ಮೇಳದಲ್ಲಿ 500 ಟನ್​ ಮಾವು ಮಾರಾಟ

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ನಡೆದ ಮಾವು ಮತ್ತು ಹಲಸಿನ ಮೇಳದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾರಾಂತ್ಯದಲ್ಲಿ ಹೆಚ್ಚು ಮಾರಾಟವಾಗಿದೆ. ಈ ಬಾರಿ 13 ರಿಂದ 14 ತಳಿಯ ಮಾವು ಮಾರಾಟವಾಗಿದ್ದು, ರೈತರು ಸಂತಸಗೊಂಡಿದ್ದಾರೆ.

ಬೆಂಗಳೂರು ಮಾವಿನ ಮೇಳದಲ್ಲಿ 500 ಟನ್​ ಮಾವು ಮಾರಾಟ
ಮಾವು ಸವಿಯುತ್ತಿರುವುದು
ವಿವೇಕ ಬಿರಾದಾರ
|

Updated on: Jun 12, 2024 | 9:55 AM

Share

ಬೆಂಗಳೂರು, ಜೂನ್​ 12: ಮೇ 23 ರಿಂದ ಜೂನ್​ 9ರವರೆಗು ಬೆಂಗಳೂರಿನ (Bengaluru) ಲಾಲ್​ಬಾಗ್​ನಲ್ಲಿ (Lalbagh) ಮಾವು (Mango) ಮತ್ತು ಹಲಸಿನ (Jackfruit) ಮೇಳ ನಡೆಯಿತು. 17 ದಿನಗಳ ಕಾಲ ನಡೆದ ಮಾವು ಮೇಳದಲ್ಲಿ ಬರೊಬ್ಬರಿ 500 ಟನ್​​ ಮಾವುಗಳು ಮಾರಾಟವಾಗಿದೆ. ರಾಜ್ಯದ 100ಕ್ಕೂ ಹೆಚ್ಚು ರೈತರು 50ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಿದ್ದರು ಎಂದು ಮೇಳದ ಆಯೋಜಕರಾದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ (KSMDMCL) ವ್ಯವಸ್ಥಾಪಕ ನಿರ್ದೇಶಕ ಸಿ.ಜಿ.ನಾಗರಾಜು ತಿಳಿಸಿದರು.

ಕಳೆದ ವರ್ಷಕ್ಕಿಂತ ಈ ಬಾರಿ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾರಾಂತ್ಯದಲ್ಲಿ ಹೆಚ್ಚು ಮಾರಾಟವಾಗಿದೆ. ಈ ಬಾರಿ 13 ರಿಂದ 14 ತಳಿಯ ಮಾವು ಮಾರಾಟವಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಕೂಡ ಮೇಳದಲ್ಲಿ ಇತ್ತು ಎಂದು ಹೇಳಿದರು.

ಕರಿ ಇಶಾದ್ ಮಾವಿನ ತಳಿ ಕೂಡ ಈ ವರ್ಷ ಮೇಳದಲ್ಲಿ ಲಭ್ಯವಿತ್ತು. ಕರಿ ಇಶಾದ್ ಮಾವನ್ನು ಜನರು ಹೆಚ್ಚಾಗಿ ಕೊಂಡುಕೊಂಡರು. ಕರಿ ಇಶಾದ್​ ತಳಿ ಹೆಚ್ಚು ಮಾರಾಟವಾಗಿದ್ದರಿಂದ ರೈತರು ಹೆಚ್ಚು ಸಂತಸ ಪಟ್ಟರು. ಈ ಹಿಂದೆ ಈ ತಳಿಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಆದರೆ ಈ ಬಾರಿ ಕರಿ ಇಶಾದ್​ ತಳಿಗೆ ಹೆಚ್ಚು ಬೇಡಿಕೆ ಬಂದಿದೆ. ಮೇಳದ ವೇಳೆ ರೈತರು ಮೂರು ಮೂರು ಬಾರಿ ತಮ್ಮ ದಾಸ್ತಾನು ತರಸಿದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಾರ್ಕ್‌ಗಳ ಸಮಯ ವಿಸ್ತರಣೆ, ಇಲ್ಲಿದೆ ಹೊಸ ಟೈಮಿಂಗ್ಸ್

ಆನ್‌ಲೈನ್ ಮಾರಾಟ ವೇದಿಕೆ ಕರ್ಸಿರಿ ಎಲ್ಲೂ ಅಧಿಕ ಪ್ರಮಾಣದಲ್ಲಿ ಮಾವು ಮಾರಾಟವಾಗಿದೆ. ಕರ್ಸಿರೊ ಮೂಲಕ ಗ್ರಾಹಕರು ಉತ್ತಮ ಗುಣಮಟ್ಟದ ಮಾವುಗಳನ್ನು ಖರೀದಿಸಿದರು. ಇಂಡಿಯಾ ಪೋಸ್ಟ್​ ಮೂಲಕ ಮಾವುಗಳು ರೈತರಿಂದ ನೇರವಾಗಿ ಗ್ರಾಹಕರ ಕೈ ಸೇರಿದವು. ಆನ್‌ಲೈನ್ ವೇದಿಕೆ ಮುಖಾಂತರ ಕನಿಷ್ಠ 27 ರೈತರು ಕರಿ ಇಶಾದ್ ಸೇರಿದಂತೆ 13 ತಳಿಯ ಮಾವಿನ ಹಣ್ಣುಗಳನ್ನು ಮಾರಾಟ ಮಾಡಿದ್ದಾರೆ ಎಂದರು.

ಆನ್​ಲೈನ್​ ಪೋರ್ಟಲ್‌ನಲ್ಲಿ 4,514 ಬಾಕ್ಸ್‌ಗಳ (13.5 ಟನ್) ಮಾವಿನಹಣ್ಣುಗಳನ್ನು ಮಾರಾಟ ಮಾಡಿದ್ದೇವೆ ಮತ್ತು ಕಾರಿ ಇಶಾದ್‌ಗಾಗಿ ನಾವು 60 – 70 ಆರ್ಡರ್‌ಗಳನ್ನು ಸ್ವೀಕರಿಸಿದ್ದೇವೆ. ನಮ್ಮ ಪ್ಲಾಟ್‌ಫಾರ್ಮ್‌ಗಳ ಹೊರತಾಗಿ, ರೈತರು ವಿವಿಧ 14 ಪೋರ್ಟಲ್‌ಗಳ ಮೂಲಕವೂ ಮಾವು ಮಾರಾಟ ಮಾಡಿದ್ದಾರೆ. ಈ ಪೋರ್ಟಲ್​ಗಳ ಮೂಲಕ ರೈತರು ನೇರವಾಗಿ ಇಂಡಿಯಾ ಪೋಸ್ಟ್ ಮೂಲಕ ಗ್ರಾಹಕರಿಗೆ ಮಾವಿನಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ