AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಉಲ್ಬಣಗೊಂಡ ಡೆಂಗ್ಯೂ ರೋಗ, 7 ಜನ ಸಾವು

ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸೆಪ್ಟೆಂಬರ್​​ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ವೇಳೆ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಉಲ್ಬಣಗೊಂಡ ಡೆಂಗ್ಯೂ ರೋಗ, 7 ಜನ ಸಾವು
ಡೆಂಗ್ಯೂ ಸೊಳ್ಳೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 08, 2023 | 9:51 AM

ಬೆಂಗಳೂರು: ನಗರದಲ್ಲಿ ಡೆಂಗ್ಯೂ ರೋಗ ಉಲ್ಬಣಗೊಂಡಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಶಂಕಿತ ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ (Dengue) ಆತಂಕಕಾರಿಯಾಗಿ ಏರಿಕೆ ಕಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಇಲ್ಲಿಯವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿವೆ. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸೆಪ್ಟೆಂಬರ್​​ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ವೇಳೆ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದರು.

ಡೆಂಗ್ಯೂ ಮುಖ್ಯವಾಗಿ ಮಳೆಗೆ ಸಂಬಂಧಿಸಿದೆ. ಮಳೆ ಹೆಚ್ಚಾದಾಗ ಪ್ರಕರಣಗಳು ಹೆಚ್ಚಾಗುತ್ತವೆ. 2022ರ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್‌ ತಿಂಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಜುಲೈ ಮತ್ತು ಆಗಸ್ಟ್‌ ತಿಂಗಳಿನಲ್ಲೇ ಹೆಚ್ಚು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಹಾಗೂ ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸುವಂತೆ ಸೂಚಿಸಿದರು.

ಬೆಂಗಳೂರಿನಲ್ಲಿ ಇದುವರೆಗೆ ವರದಿಯಾಗಿರುವ ಪ್ರಕರಣಗಳ ಮಾದರಿಯನ್ನು ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ವಿಶ್ಲೇಷಿಸಿದಾಗ, ಒಂದು ಕಾಲದಲ್ಲಿ ಕೊಳೆಗೇರಿಗಳಲ್ಲಿ ಬೇರೂರಿದ್ದ ರೋಗವು ಈಗ ದೊಡ್ಡ ವಸತಿ ಸಂಕೀರ್ಣಗಳು ಮತ್ತು ಉನ್ನತ ಮಟ್ಟದ ಏರಿಯಾಗಳಲ್ಲಿ ಜಾಸ್ತಿ ಹರಡಿದೆ ಎಂದು ತಿಳಿದು ಬಂದಿದೆ. ಈಡಿಸ್ ಸೊಳ್ಳೆಗಳಿಗೆ ಸಂತಾನೋತ್ಪತ್ತಿಗೆ ಶುದ್ಧ ನೀರು ಬೇಕಾಗುತ್ತದೆ. ಕಟ್ಟಡ ನಿರ್ಮಾಣ ಸ್ಥಳಗಳು ಮತ್ತು ದೊಡ್ಡ ಅಪಾರ್ಟ್‌ಮೆಂಟ್ ಸಂಕೀರ್ಣಗಳು ಇರುವ ಕಡೆ ಶುದ್ಧ ನೀರಿನಲ್ಲಿ ಇವುಗಳ ಸಂತಾನೋತ್ಪತ್ತಿಯಾಗುತ್ತದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಕೆವಿ ತ್ರಿಲೋಕ್ ಚಂದ್ರ ವಿವರಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಡೆಂಗ್ಯೂ ರೋಗ ಪ್ರಕರಣ ಸಂಖ್ಯೆಯಲ್ಲಿ ಏರಿಕೆ; ಬೆಂಗಳೂರಿನಲ್ಲಿ ಅಧಿಕ ಬಾಧಿತರು

ಹೆಚ್ಚಾಗಿ ಮಡಕೆಗಳು, ಮೀನಿನ ತೊಟ್ಟಿಗಳು, ಅಂಗಳದಲ್ಲಿ ನಿಂತ ನೀರು ಮತ್ತು ಉದ್ಯಾನವನದ ಕೊಳಗಳಲ್ಲಿ ಡೆಂಗ್ಯೋ ಸೊಳ್ಳೆ ವಾಸಿಸುತ್ತವೆ. ಈ ಹಿಂದೆ ಮಹದೇವಪುರ, ಬೊಮ್ಮನಹಳ್ಳಿ ಮತ್ತು ಪೂರ್ವ ವಲಯದ ಪ್ರದೇಶಗಳು ಡೆಂಗ್ಯೂ ಹಾಟ್‌ಸ್ಪಾಟ್‌ಗಳಾಗಿದ್ದವು. ಆದರೆ ಈ ವರ್ಷ ದಕ್ಷಿಣ ವಲಯದಲ್ಲಿ ಹೆಚ್ಚು ಸಂಖ್ಯೆಯ ಪ್ರಕರಣಗಳು ವರದಿಯಾಗಿದ್ದು, ಬೆಚ್ಚಿಬೀಳಿಸಿದೆ.

ಆರೋಗ್ಯ ಕಾರ್ಯಕರ್ತರ ಕೊರತೆ

ಬೆಂಗಳೂರಿನಾದ್ಯಂತ ಆರೋಗ್ಯ ಕಾರ್ಯಕರ್ತರ ಕೊರತೆ ಇದೆ. 1.3 ಕೋಟಿ ಜನಸಂಖ್ಯೆಯ ನಗರಕ್ಕೆ, ಕೇವಲ 1,000 ಆಶಾ ಕಾರ್ಯಕರ್ತೆಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಆಶಾ ಕಾರ್ಯಕರ್ತೆಯರನ್ನು ನೇಮಿಸುವಂತೆ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:44 am, Fri, 8 September 23