51 ಡಿವೈಎಸ್​ಪಿ, 292 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಕರ್ನಾಟಕ ಸರ್ಕಾರದಿಂದ ಆದೇಶ

ಡಿವೈಎಸ್​ಪಿಗಳನ್ನು ಹಾಗೂ ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

51 ಡಿವೈಎಸ್​ಪಿ, 292 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಕರ್ನಾಟಕ ಸರ್ಕಾರದಿಂದ ಆದೇಶ
ವಿಧಾನಸೌಧ
Follow us
Rakesh Nayak Manchi
|

Updated on:Jun 02, 2023 | 10:58 PM

ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ವರ್ಗಾವಣೆಯಾಗಿದ್ದ 51 ಡಿವೈಎಸ್​ಪಿಗಳನ್ನು ಹಾಗೂ 292 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ಹಿಂದಿನ ಕಾರ್ಯ ಸ್ಥಳಗಳಿಗೆ ವಾಪಸ್ ಆಗುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್​ಪಿಗಳ ಸಹಿತ ಅನೇಕ ಪೊಲೀಸರನ್ನು ವರ್ಗಾವಣೆ (Transfer) ಮಾಡಿ ಆದೇಶ ಹೊರಡಿಸಲಾಗಿತ್ತು.

ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲದೆ, ಯಾವುದೇ ಅಧಿಕಾರಿಯ ಸಂಬಂಧಿಕರು ಚುನಾವಣೆಗೆ ಸ್ಪರ್ಧಿಸಿದರೆ ಅಂತಹ ಅಧಿಕಾರಿಯನ್ನ ಚುನಾವಣಾ ಸೇವೆಯಿಂದ ಬಿಡುಗಡೆ ಮಾಡಬೇಕು. ಇದು ಚುನಾವಣಾ ಆಯೋಗದ ನಿಯಮವಾಗಿದೆ.

ಇದನ್ನೂ ಓದಿ: ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ

ಇನ್ನು ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ವರ್ಗಾವಣೆ ಪರ್ವ ಆರಂಭವಾಗದ್ದು, ಇತ್ತೀಚೆಗಷ್ಟೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದ್ದು, ಅಧಿಕಾರವೂ ಸ್ವೀಕರಿಸಿದ್ದಾರೆ. ಇದಕ್ಕೂ ಮುನ್ನ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರದ ‘ವಿಶೇಷ ಕಮಿಷನರ್’ (ಸಂಚಾರ) ಎಂಎ ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ವರ್ಗಾವಣೆ ಮಾಡಲಾಗಿದೆ.

ಐವರು IAS ಅಧಿಕಾರಿಗಳ ವರ್ಗಾವಣೆ

ಐವರು ಐಎಎಸ್​ ಅಧಿಕಾರಿಗಳನ್ನೂ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಪಂಕಜ್‌ ಕುಮಾರ್ ಪಾಂಡೆ ಸೇರಿದಂತೆ ಒಟ್ಟು ಐವರನ್ನ ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:15 pm, Fri, 2 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ