ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ವರ್ಗಾವಣೆಯಾಗಿದ್ದ 51 ಡಿವೈಎಸ್ಪಿಗಳನ್ನು ಹಾಗೂ 292 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ಹಿಂದಿನ ಕಾರ್ಯ ಸ್ಥಳಗಳಿಗೆ ವಾಪಸ್ ಆಗುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿಗಳ ಸಹಿತ ಅನೇಕ ಪೊಲೀಸರನ್ನು ವರ್ಗಾವಣೆ (Transfer) ಮಾಡಿ ಆದೇಶ ಹೊರಡಿಸಲಾಗಿತ್ತು.
ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲದೆ, ಯಾವುದೇ ಅಧಿಕಾರಿಯ ಸಂಬಂಧಿಕರು ಚುನಾವಣೆಗೆ ಸ್ಪರ್ಧಿಸಿದರೆ ಅಂತಹ ಅಧಿಕಾರಿಯನ್ನ ಚುನಾವಣಾ ಸೇವೆಯಿಂದ ಬಿಡುಗಡೆ ಮಾಡಬೇಕು. ಇದು ಚುನಾವಣಾ ಆಯೋಗದ ನಿಯಮವಾಗಿದೆ.
ಇದನ್ನೂ ಓದಿ: ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ
ಇನ್ನು ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ವರ್ಗಾವಣೆ ಪರ್ವ ಆರಂಭವಾಗದ್ದು, ಇತ್ತೀಚೆಗಷ್ಟೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದ್ದು, ಅಧಿಕಾರವೂ ಸ್ವೀಕರಿಸಿದ್ದಾರೆ. ಇದಕ್ಕೂ ಮುನ್ನ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರದ ‘ವಿಶೇಷ ಕಮಿಷನರ್’ (ಸಂಚಾರ) ಎಂಎ ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ವರ್ಗಾವಣೆ ಮಾಡಲಾಗಿದೆ.
ಐವರು ಐಎಎಸ್ ಅಧಿಕಾರಿಗಳನ್ನೂ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಸೇರಿದಂತೆ ಒಟ್ಟು ಐವರನ್ನ ವರ್ಗಾವಣೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:15 pm, Fri, 2 June 23