AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26 ರ ವಿಧವೆ ಜೊತೆ 52 ವರ್ಷದ ಇಬ್ಬರು ಹೆಂಡಿರ ಗಂಡನ ಲಿವಿಂಗ್ ಟುಗೆದರ್! ಯುವತಿ ದೂರವಾಗ್ತಾಳೆಂದು ಬೆಂಕಿ ಹಚ್ಚಿ ಕೊಲೆ

ಬೆಂಗಳೂರಿನ ಆನೇಕಲ್ ಬಳಿ ಭೀಕರ ಘಟನೆ ನಡೆದಿದೆ. 52 ವರ್ಷದ ಕ್ಯಾಬ್ ಚಾಲಕ ವಿಠ್ಠಲ ಎಂಬಾತ, ತನ್ನ 26 ವರ್ಷದ ವಿಧವೆ ಪ್ರೇಯಸಿ ವನಜಾಕ್ಷಿ ಮತ್ತೊಬ್ಬನೊಂದಿಗೆ ಸಲುಗೆ ಬೆಳೆಸುತ್ತಿದ್ದಳೆಂದು ಕಂಡು ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ವಿಠ್ಠಲನಿಗೆ ಈಗಾಗಲೇ ಎರಡು ಮದುವೆಯಾಗಿದ್ದು, ಎರಡನೇ ಪತ್ನಿ ಪರಾರಿಯಾಗಿದ್ದಳು. ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

26 ರ ವಿಧವೆ ಜೊತೆ 52 ವರ್ಷದ ಇಬ್ಬರು ಹೆಂಡಿರ ಗಂಡನ ಲಿವಿಂಗ್ ಟುಗೆದರ್! ಯುವತಿ ದೂರವಾಗ್ತಾಳೆಂದು ಬೆಂಕಿ ಹಚ್ಚಿ ಕೊಲೆ
ಆರೋಪಿ ವಿಠ್ಠಲ ಹಾಗೂ ವನಜಾಕ್ಷಿ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Ganapathi Sharma|

Updated on: Sep 01, 2025 | 11:47 AM

Share

ಬೆಂಗಳೂರು, ಸೆಪ್ಟೆಂಬರ್ 1: ಇಬ್ಬರು ಹೆಂಡತಿಯರ ಗಂಡನೊಬ್ಬ 26 ವರ್ಷದ ವಿಧವೆ ಜೊತೆ ಲಿವಿಂಗ್ ಟುಗೆದರ್​​ನಲ್ಲಿದ್ದು, ಕೊನೆಗೆ ಆ ಯುವತಿ ಬೇರೊಬ್ಬರೊಂದಿಗೆ ಸಲುಗೆ ಬೆಳೆಸಿರುವುದನ್ನು ಕಂಡು ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ (Bengaluru) ಆನೇಕಲ್ ಬಳಿ ನಡೆದಿದೆ. ಅಂದಹಾಗೆ, ಆರೋಪಿ ವಿಠ್ಠಲ ಏನೂ ನವಯುವಕನಲ್ಲ, 52 ವರ್ಷ ವಯಸ್ಸಿನ ವ್ಯಕ್ತಿ! ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿರುವ ವಿಠ್ಠಲನನ್ನು ಪೊಲೀಸರು ಬಂಧಿಸಿದ್ದಾರೆ. ಹುಳಿಮಾವು ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ.

ಮೃತ ಯುವತಿಯನ್ನು ವನಜಾಕ್ಷಿ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಆನೇಕಲ್ ಬಳಿಯ ಮಳೆನಲ್ಲಸಂದ್ರ ಗ್ರಾಮದ ನಿವಾಸಿಗಳಾಗಿದ್ದಾರೆ.

ಆರೋಪಿ ವಿಠ್ಠಲನಿಗೆ ಈಗಾಗಲೇ ಎರಡು ಮದುವೆಯಾಗಿದೆ. ಮೊದಲ ಪತ್ನಿ ಮೃತಪಟ್ಟಿದ್ದು ನಂತರ ಮತ್ತೊಂದು ಮದುವೆಯಾಗಿದ್ದ. ಎರಡನೇ ಪತ್ನಿ ಬೇರೊಬ್ಬನ ಜೊತೆ ಪರಾರಿಯಾಗಿದ್ದಳು. ಅತ್ತ ವನಜಾಕ್ಷಿಗೆ ಮದುವೆಯಾಗಿದ್ದು, ಗಂಡ ಮೃತಪಟ್ಟಿದ್ದ. ಈ ನಡುವೆ ವಿಠ್ಠಲ ವಿಧವೆ ವನಜಾಕ್ಷಿಯ ಸಾಂಗತ್ಯ ಬೆಳೆಸಿದ್ದ. ಕಳೆದ ಮೂರ್ನಾಲ್ಕು ವರ್ಷಗಳಿಂದ ವನಜಾಕ್ಷಿ ಜೊತೆ ಲಿವಿಂಗ್ ಟುಗೆದರ್​ನಲ್ಲಿದ್ದ.

ಕಳೆದ ಕೆಲವು ದಿನಗಳಿಂದ ವನಜಾಕ್ಷಿ ಆತನನ್ನು ಕಡೆಗಣಿಸುತ್ತಿದ್ದಳು. ಅಲ್ಲದೆ, ಮಾಡಿ ಅದೇ ಗ್ರಾಮದ ಮತ್ತೊಬ್ಬರ ಜೊತೆ ಸಲುಗೆ ಬೆಳೆಸಿಕೊಂಡಿದ್ದಳು. ಕಳೆದೊಂದು ತಿಂಗಳಿನಿಂದ ಇದೇ ವಿಚಾರಕ್ಕೆ ವಿಠ್ಠಲ ಹಾಗೂ ವನಜಾಕ್ಷಿ ನಡುವೆ ಜಗಳವಾಗುತ್ತಿತ್ತು.

ಇದನ್ನೂ ಓದಿ: ಬೆಂಗಳೂರಿನ ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ; ಹಲ್ಲೆ ಮಾಡಿ ದುಡ್ಡಿನೊಂದಿಗೆ ಆರೋಪಿ ಪರಾರಿ

ಕಳೆದ ಶನಿವಾರ ವನಜಾಕ್ಷಿ ತನ್ನ ಮತ್ತೊಬ್ಬ ಸ್ನೇಹಿತನ ಜೊತೆ ಬನ್ನೇರುಘಟ್ಟದಿಂದ ಬಸವನಪುರಕ್ಕೆ ಹೊಸ ಸ್ನೇಹಿತನ‌ ಜೊತೆ ಸ್ಯಾಂಟ್ರೋ ಕಾರಲ್ಲಿ ತೆರಳುತ್ತಿದ್ದಳು. ಇದನ್ನು ನೋಡಿದ ವಿಠ್ಠಲ, ಹುಳಿಮಾವು ಠಾಣೆ ವ್ಯಾಪ್ತಿಯ ಹೊಮ್ಮದೇವನಹಳ್ಳಿ ಬಳಿಕಾರನ್ನು ಹಿಂಬಾಲಿಸಿದ್ದ. ಆನಂತರ ಪದೇಪದೇ ಹಾರ್ನ್ ಮಾಡಿ ಮುಂದಿನಿಂದ ಹೋಗುತ್ತಿದ್ದ ವನಜಾಕ್ಷಿ ಇದ್ದ ಸ್ಯಾಂಟ್ರೋ ಕಾರನ್ನು ನಿಲ್ಲಿಸುವಂತೆ ಮಾಡಿದ್ದ. ಕಾರು ನಿಲ್ಲಿಸುತ್ತಿದ್ದಂತೆಯೇ 5 ಲೀಟರ್ ಪೆಟ್ರೋಲ್ ಅನ್ನು ಕಾರಿನ ಮೇಲೆ ಸುರಿಯಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ನೇಹಿತನ ಜೊತೆ ಕಾರಿನಿಂದ ಇಳಿದ ವನಜಾಕ್ಷಿ ಓಡಿ ಹೋಗಲು ಶುರು ಮಾಡಿದ್ದಾಳೆ. ಇಬ್ಬರನ್ನೂ ಹಿಂಬಾಲಿಸಿಕೊಂಡು ಹೋಗಿದ್ದ ವಿಠ್ಠಲ, ಆ ಬಳಿಕ ವನಜಾಕ್ಷಿ ಮೇಲೆ ಪೆಟ್ರೋಲ್ ಎರಚಿ ಲೈಟರ್​​ನಿಂದ ಬೆಂಕಿ ಹಚ್ಚಿದ್ದ.

ಗಂಭೀರವಾಗಿ ಗಾಯಗೊಂಡಿದ್ದ ವನಜಾಕ್ಷಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶೇಕಡ 60ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆಕೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ