Sign In

By signing in or creating an account, you agree with Associated Broadcasting Company's Terms & Conditions and Privacy Policy.

545 PSI Recruitment Scam: ಆರೋಪಿಯಲ್ಲದವರ ಆಯ್ಕೆ ಸಾಧ್ಯವೇ? 10 ದಿನಗಳಲ್ಲಿ ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಗಳಲ್ಲದವರನ್ನು ನೇಮಕ ಮಾಡಲು ಸಾಧ್ಯವೇ ಎಂದು ತಿಳಿಸುವಂತೆ 10 ದಿನಗಳ ಕಾಲಾವಕಾಶ ನೀಡಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

545 PSI Recruitment Scam: ಆರೋಪಿಯಲ್ಲದವರ ಆಯ್ಕೆ ಸಾಧ್ಯವೇ? 10 ದಿನಗಳಲ್ಲಿ ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
545 ಪಿಎಸ್​ಐ ನೇಮಕಾತಿ ಹಗರಣದಲ್ಲಿ ಭಾಗಿಯಾಗದವರ ಕುರಿತ ತನ್ನ ನಿಲುವು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆImage Credit source: The Hindu
Follow us
Rakesh Nayak Manchi
|

Updated on:Jun 15, 2023 | 7:31 PM

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ (545 PSI Recruitment Scam) ಪ್ರಕರಣದಲ್ಲಿ ಆರೋಪಿಗಳಲ್ಲದವರ ವಿಚಾರದಲ್ಲಿ ತನ್ನ ನಿಲುವು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ಸೂಚನೆ ನೀಡಿದೆ. ಆಯ್ಕೆಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ರಿಟ್ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಆರೋಪಿತರನ್ನು ಹೊರತುಪಡಿಸಿ ಉಳಿದವರನ್ನು ಪರಿಗಣಿಸಲು ಸಾಧ್ಯವೇ? ಅಂತಹವರ ಸಾಮರ್ಥ್ಯ ಅಳೆದು ಆಯ್ಕೆ ಮಾಡಲು ಸಾಧ್ಯವಿದೆಯೇ ಎಂದು ತಿಳಿಸುವಂತೆ 10 ದಿನಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿತು.

ಹಗರಣದಲ್ಲಿ ಭಾಗಿಯಾದವರ ವರದಿ ನೀಡುವಂತೆ ಏಪ್ರಿಲ್ 10 ರಂದು ನಡೆದಿದ್ದ ವಿಚಾರಣೆ ವೇಳೆ ಕೋರ್ಟ್ ಸರ್ಕಾರಕ್ಕೆ ತಿಳಿಸಿತ್ತು. ಅರ್ಜಿ ಸಲ್ಲಿಸಿರುವ 145 ಜನರಲ್ಲಿ ಯಾರೆಲ್ಲಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜೂನ್ 15ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶಿಸಿತ್ತು.

ಇದನ್ನೂ ಓದಿ: ಪಿಎಸ್​ಐ ಹಗರಣದಲ್ಲಿ ಸುಮ್ಮನೇ ನನ್ನ ಹೆಸರು ತೇಲಿಬಿಟ್ಟಿದ್ದಾರೆ, ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ; ಬಿವೈ ವಿಜಯೇಂದ್ರ ಸವಾಲು

545 ಪಿಎಸ್​ಐ ನೇಮಕಾತಿ ಹಗರಣದ ಹಿನ್ನೆಲೆ

545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ ಕಳೆದ ವರ್ಷದ ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತು. 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್​ಗಳಿಗೂ ಹಣದ ಹೊಳೆ ಹರಿದಿತ್ತು. ಬ್ರೋಕರ್​ಗಳ ಹಂತದಲ್ಲಿಯೂ ಕನಿಷ್ಠ 10 ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ ಮೂವತ್ತರಿಂದ ಮೂವತ್ತೈದು ಲಕ್ಷ ತಲುಪುತ್ತಿತ್ತು ಎಂಬ ಅಂಶ ತಿಳಿದುಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 pm, Thu, 15 June 23

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ