545 PSI: ಪಿಎಸ್ಐ ಹಗರಣದಲ್ಲಿ ಭಾಗಿಯಾದವರ ಬಗ್ಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿನ ಹಗರಣ ಸಂಬಂಧ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಹಗರಣದಲ್ಲಿ ಭಾಗಿಯಾದವರ ವರದಿ ನೀಡುವಂತೆ ಸೂಚಿಸಿದೆ.

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿನ ಹಗರಣ (545 PSI recruitment scam) ಸಂಬಂಧ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), ಹಗರಣದಲ್ಲಿ ಭಾಗಿಯಾದವರ ವರದಿ ನೀಡುವಂತೆ ಸೂಚಿಸಿದೆ. ಅರ್ಜಿ ಸಲ್ಲಿಸಿರುವ 145 ಜನರಲ್ಲಿ ಯಾರೆಲ್ಲಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜೂನ್ 15ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶಿಸಿದೆ.
ಏನಿದು ಪ್ರಕರಣ?: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಕಳೆದ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಹಣ ನೀಡಿದ್ದರು. ಈ ಪ್ರಕರಣ ಬೆಳಕಿಗೆ ಬಂದು ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿದೆ.
ಇದನ್ನೂ ಓದಿ: ಕೊಲೆ ಪ್ರಕರಣದ ಅಪರಾಧಿಯೊಂದಿಗೆ ವಿವಾಹವಾಗಲು ಬಯಸಿದ ಯುವತಿ; ಪ್ರಿಯಕರನಿಗೆ ಪೆರೋಲ್ ನೀಡಿ ಆದೇಶಿಸಿದ ಕರ್ನಾಟಕ ಹೈಕೋರ್ಟ್
ಕೋಟಿ ಕೋಟಿ ಹಣ ಪತ್ತೆ ಹಿನ್ನೆಲೆ ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರತನಿಖೆಯನ್ನು ಸಿಐಡಿಗೆ ವಹಿಸಿತು. 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್ಗಳಿಗೂ ಹಣದ ಹೊಳೆ ಹರಿದಿದೆ. ತಿ ಬ್ರೋಕರ್ಗಳ ಹಂತದಲ್ಲಿಯೂ ಕನಿಷ್ಠ ಹತ್ತು ಲಕ್ಷ ಹಣ ಕೊಡಬೇಕಿತ್ತು. ನೇಮಕಾತಿ ವಿಭಾಗದ ಅಧಿಕಾರಿಗೆ ಮೂವತ್ತ ರಿಂದ ಮೂವತ್ತೈದು ಲಕ್ಷ ತಲುಪುತ್ತಿತ್ತು. ಮೂವರು ನಾಲ್ವರು ಬ್ರೋಕರ್ಗಳ ಹಂತದಲ್ಲಿ ಮೂವತ್ತು ನಲವತ್ತು ಲಕ್ಷ ಹಣ ನೀಡಲಾಗುತ್ತಿತ್ತು. ಅಷ್ಟೂ ಬ್ರೋಕರ್ಗಳ ಮೂಲಕ ಹಣ ಕೊನೆಗೆ ನೇಮಕಾತಿ ವಿಭಾಗದ ಅಧಿಕಾರಿಗಳ ಕೈಗೆ ಸೇರುತ್ತಿತ್ತು.
ಹಗರಣ ಹಿನ್ನೆಲೆ ಲಿಖಿತ ಪರೀಕ್ಷೆಯನ್ನೇ ರದ್ದುಗೊಳಿಸಿದ ಸರ್ಕಾರ, ಮರುಪರೀಕ್ಷೆಗೆ ನಿರ್ಧರಿಸಿದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲಾಗುವುದು. ಆರೋಪಿಗಳಿಗೆ ಮರು ಪರೀಕ್ಷೆಯಲ್ಲಿ ಅವಕಾಶ ಸಿಗುವುದಿಲ್ಲ. ಶೀಘ್ರವೇ ಮರು ಪರೀಕ್ಷೆ ದಿನಾಂಕ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದರು. ಆದರೆ ಮರು ಪರೀಕ್ಷೆ ಯನ್ನು ಕೈಬಿಡುವಂತೆ ಒತ್ತಾಯಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದವು. ಅಲ್ಲದೆ, ಹೈಕೋರ್ಟ್ ಮೆಟ್ಟಿಲೇರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:10 pm, Mon, 10 April 23
