AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo flights: 550 ಇಂಡಿಗೋ ವಿಮಾನಗಳ ಸಂಚಾರ ರದ್ದು, ಬೆಂಗಳೂರು ಸೇರಿ ಹಲವೆಡೆ ಪ್ರಯಾಣಿಕರ ಒದ್ದಾಟ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ಸತತ ಮೂರನೇ ದಿನವೂ ವ್ಯತ್ಯಯವಾಗಿದ್ದು, ಬೆಂಗಳೂರು ಸೇರಿದಂತೆ ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ 550 ವಿಮಾನಗಳ ಸಂಚಾರ ದಿಢೀರ್ ರದ್ದಾಗಿವೆ. ಪೈಲಟ್‌ಗಳು, ಸಿಬ್ಬಂದಿ ಕೊರತೆಯೇ ಇದಕ್ಕೆ ಮುಖ್ಯ ಕಾರಣ. ಹಾಗಾದರೆ ಏಕಾಏಕಿ ಪೈಟಲ್, ಸಿಬ್ಬಂದಿ ಕೊರೆ ಆಗಿದ್ದು ಹೇಗೆ? ಹೀಗಾಗಲು ಅಸಲಿ ಕಾರಣ ಏನು? ಸಂಪೂರ್ಣ ಮಾಹಿತಿ ಇಲ್ಲಿದೆ.

IndiGo flights: 550 ಇಂಡಿಗೋ ವಿಮಾನಗಳ ಸಂಚಾರ ರದ್ದು, ಬೆಂಗಳೂರು ಸೇರಿ ಹಲವೆಡೆ ಪ್ರಯಾಣಿಕರ ಒದ್ದಾಟ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Dec 05, 2025 | 6:48 AM

Share

ಬೆಂಗಳೂರು, ಡಿಸೆಂಬರ್ 5: ಬೆಂಗಳೂರು (Bengaluru) ಸೇರಿದಂತೆ ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ ವಿಮಾನಗಳ (IndiGo flights) ಸಂಚಾರದಲ್ಲಿ ವ್ಯತ್ಯವಾಗಿ ಸತತ ಮೂರನೇ ದಿನವೂ ಪ್ರಯಾಣಿಕರು ಪರದಾಡುವಂತಾಗಿದೆ. ಗುರುವಾರ ಒಂದೇ ದಿನ ಬರೋಬ್ಬರಿ 550 ವಿಮಾನಗಳ ಸಂಚಾರ ರದ್ದಾಗಿದೆ. ಸಿಬ್ಬಂದಿಯ ಕೊರತೆಯಿಂದಾಗಿ ಇಂಡಿಗೋ ದೇಶೀಯ, ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಬ್ರೇಕ್ ಹಾಕಿದೆ. ಇದರಿಂದ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ​ ಒಂದರಲ್ಲೇ ಒಟ್ಟು 205 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಕಳೆದ 3 ದಿನಗಳಿಂದ ಈ ಸಮಸ್ಯೆ ಆಗುತ್ತಿದ್ದು, ಸಾವಿರಾರು ಪ್ರಯಾಣಿಕರು ಪರದಾಡಿದ್ದಾರೆ.

ಚಂಡೀಗಢದಲ್ಲಿ ಕನ್ನಡಿಗರ ಪರದಾಟ

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವಿಳಂಬ ಆಗಿದ್ದರಿಂದ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕನ್ನಡಿಗರು ಪರದಾಡಿದರು. ಬೆಂಗಳೂರಿಗೆ ಬರಲಾಗದೇ 20 ಕನ್ನಡಿಗರು ಒದ್ದಾಡುವಂತಾಯಿತು. ಗಂಟೆಗಟ್ಟಲೇ ವಿಮಾನ ನಿಲ್ದಾಣದಲ್ಲೇ ಕಾದು ಕುಳಿತ ದೃಶ್ಯಗಳು ಕಂಡುಬಂದಿವೆ.

ವಿಮಾನದೊಳಗೆ ಪ್ರಯಾಣಿಕರು ಲಾಕ್! ಆಕ್ರೋಶ

ಅನೇಕ ಪ್ರಯಾಣಿಕರನ್ನು ವಿಮಾನಕ್ಕೆ ಹತ್ತಿಸಿಕೊಂಡ ಬಳಿಕ ಪ್ರಯಾಣ ವಿಪರೀತ ವಿಳಂಬ ಮಾಡಿದ ಘಟನೆಯೂ ನಡೆಯಿತು, ವಿಮಾನದೊಳಗೆ ಲಾಕ್ ಆದ ಪ್ರಯಾಣಿಕರು, ಇಂಡಿಗೋ ವಿಮಾನ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಳು ಹೇಳಿ ನಮ್ಮ ಸಮಯ ಹಾಳು ಮಾಡುತ್ತಿದ್ದಾರೆ. ಮತ್ತೊಂದೆಡೆ, ತಾವು ಪ್ರಯಾಣಿಸಬೇಕಿದ್ದ ವಿಮಾನ ರದ್ದಾದ ಬಗ್ಗೆ ಮೊದಲೇ ಮಾಹಿತಿ ನೀಡಿಲ್ಲ ಎಂದು ಮಹಿಳಾ ಪ್ರಯಾಣಿಕರೊಬ್ಬರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನಗಳು ರದ್ದಾಗಿದ್ದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಖನೌ ಏರ್​ಪೋರ್ಟ್​​ನಲ್ಲಿ ಘೋಷಣೆ ಕೂಗಿದ್ದಾರೆ. ಪುಣೆ, ದೆಹಲಿ ಸೇರಿದಂತೆ ಅನೇಕ ಕಡೆ ಪ್ರಯಾಣಿಕರು ಏರ್​ಲೈನ್ಸ್ ವಿರುದ್ಧ ಪ್ರತಿಭಟಿಸಿದ್ದಾರೆ.

ಇಂಡಿಗೋ ವಿಮಾನಗಳ ಸಂಚಾರ ರದ್ದಾಗಲು ಕಾರಣವೇನು?

ಇಂಡಿಗೋ ವಿಮಾನಗಳು ರದ್ದಾಗಲು ಮುಖ್ಯ ಕಾರಣ, ಏರ್​ಲೈನ್ ಸಂಸ್ಥೆಯು ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿಯ ತೀವ್ರ ಕೊರತೆ ಎದುರಿಸುತ್ತಿರುವುದು. ಅಲ್ಲದೆ, ಅನೇಕ ಕಾರ್ಯಾಚರಣೆಯ ಸವಾಲುಗಳನ್ನೂ ಎದುರಿಸುತ್ತಿದೆ ಎನ್ನಲಾಗಿದೆ. ಕೆಲವು ವಿಮಾನ ನಿಲ್ದಾಣಗಳಲ್ಲಿ ಪ್ರತಿಕೂಲ ಹವಾಮಾನ ಎದುರಿಸುತ್ತಿರುವುದರಿಂದಲೂ ಹಾರಾಟ ವಿಳಂಬವಾಗುತ್ತಿದೆ.

ದಿಢೀರ್ ಪೈಲಟ್ ಕೊರತೆ ಆಗಿದ್ದೇಕೆ?

ನಾಗರಿಕ ವಿಮಾನಯಾನ ನಿರ್ದೇಶನಾಲಯವು ನವೆಂಬರ್ 1 ರಂದು ವಿಮಾನ ಕರ್ತವ್ಯ ಸಮಯದ ಮಿತಿಗೆ ಸಂಬಂಧಿಸಿದ ಪರಿಷ್ಕೃತ ಮಾನದಂಡಗಳನ್ನು ಬಿಡುಗಡೆ ಮಾಡಿತ್ತು. ಅದರಂತೆ, ಪೈಲಟ್‌ಗಳಿಗೆ ಹೆಚ್ಚಿನ ವಿಶ್ರಾಂತಿ ಸಮಯವನ್ನು ನೀಡುವುದು ಕಡ್ಡಾಯವಾಗಿದೆ. ಅಲ್ಲದೆ, ಪೈಟಲ್​ಗಳ ಆಯಾಸವನ್ನು ಕಡಿಮೆ ಮಾಡಿ ಸುರಕ್ಷತೆ, ದಕ್ಷತೆಯನ್ನು ಸುಧಾರಿಸಲು ರಾತ್ರಿಯ ಕಾರ್ಯಾಚರಣೆಗಳನ್ನು (ಉದಾಹರಣೆಗೆ. ರಾತ್ರಿ ಲ್ಯಾಂಡಿಂಗ್ ಅನ್ನು ಎರಡಕ್ಕೆ ಸೀಮಿತಗೊಳಿಸುವುದು) ಮಿತಿಗೊಳಿಸಬೇಕಿದೆ. ಇದರಿಂದಾಗಿ ಏಕಾಏಕಿ ಪೈಲಟ್ ಕೊರತೆ ಎದುರಿಸುವಂಥ ಅನಿವಾರ್ಯತೆ ಸೃಷ್ಟಿಯಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 am, Fri, 5 December 25

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ