ಏಕಾಏಕಿ ಕುಸಿದ ಹೋಟೆಲ್​​ ಲಿಫ್ಟ್​​: ಶ್ರೀನಗರದಲ್ಲಿ ಬೆಂಗಳೂರಿನ ಪ್ರವಾಸಿಗರು ಬದುಕಿದ್ದೇ ಪವಾಡ!

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ಹೋಟೆಲ್ ಅರಿಸನ್ ಲಕ್ಷುರಿಯಲ್ಲಿ ಲಿಫ್ಟ್ ಕುಸಿದು, ಬೆಂಗಳೂರಿನ ಆರು ಮಂದಿ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಘಟನೆ ಪ್ರವಾಸಿ ಹೋಟೆಲ್‌ಗಳಲ್ಲಿನ ಸುರಕ್ಷತಾ ಮಾನದಂಡಗಳ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ಘಟನೆಗೆ ತಾಂತ್ರಿಕ ದೋಷವೋ ಅಥವಾ ನಿರ್ಲಕ್ಷ್ಯವೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಏಕಾಏಕಿ ಕುಸಿದ ಹೋಟೆಲ್​​ ಲಿಫ್ಟ್​​: ಶ್ರೀನಗರದಲ್ಲಿ ಬೆಂಗಳೂರಿನ ಪ್ರವಾಸಿಗರು ಬದುಕಿದ್ದೇ ಪವಾಡ!
ಸಾಂದರ್ಭಿಕ ಚಿತ್ರ
Image Credit source: AI Image

Updated on: Apr 24, 2026 | 8:05 PM

ಬೆಂಗಳೂರು, ಏಪ್ರಿಲ್​​ 24: ಜಮ್ಮು-ಕಾಶ್ಮೀರದ ಶ್ರೀನಗರದ ಹೈದರ್ಪೋರ ಪ್ರದೇಶದಲ್ಲಿರುವ ಹೊಸದಾಗಿ ನಿರ್ಮಿತ ಹೋಟೆಲ್‌ನಲ್ಲಿ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಬೆಂಗಳೂರಿನ ಆರು ಮಂದಿ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸಿಗರು ವಾಸ್ತವ್ಯ ಹೂಡಿದ್ದ ಹೋಟೆಲ್ ಅರಿಸನ್ ಲಕ್ಷುರಿಯಲ್ಲಿ ಘಟನೆ ನಡೆದಿದ್ದು, ಲಿಫ್ಟ್ ಕುಸಿದ ತಕ್ಷಣ ಗಾಯಾಳುಗಳನ್ನು ಬರ್ಜುಲ್ಲಾದ ಬೋನ್ ಆ್ಯಂಡ್​ ಜಾಯಿಂಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಇದೆ.

ಗಾಯಗೊಂಡವರನ್ನು ವೆಂಕಟೇಶ್ (65), ಡಿ. ಮಂಗಲಾ (54), ಕುಶಲ್ಲಾ (18), ಪಂಕಜಾ (16), ವೆಂಕಟಲಕ್ಷ್ಮಮ್ಮ (60), ಸೌಭಾಗ್ಯ (60) ಎಂದು ಗುರುತಿಸಲಾಗಿದೆ. ಇವರು ಎಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದಾರೆ. ಇನ್ನು ಘಟನೆಗೆ ಹೇಗಾಯಿತು ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಲಿಫ್ಟ್ ಏಕೆ ಕುಸಿದು ಬಿದ್ದಿತು ಎಂಬುದರ ಕುರಿತಾಗಿ ಹೋಟೆಲ್ ಆಡಳಿತ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎನ್ನಲಾಗಿದೆ. ಆದರೆ ಈ ಘಟನೆ ಪ್ರವಾಸಿಗರಿಗೆ ಸೇವೆ ನೀಡುವ ಹೋಟೆಲ್‌ಗಳಲ್ಲಿನ ಸುರಕ್ಷತಾ ಮಾನದಂಡಗಳ ಬಗ್ಗೆ ಆತಂಕ ಉಂಟುಮಾಡಿದೆ. ಈ ಕುರಿತು ತನಿಖೆ ಆರಂಭಗೊಂಡಿದ್ದು, ತಾಂತ್ರಿಕ ದೋಷ ಅಥವಾ ನಿರ್ಲಕ್ಷ್ಯವೇ ಲಿಫ್ಟ್ ಕುಸಿಯಲು ಕಾರಣವಾ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರೋದಾಗಿ ಬೆಂಗಳೂರು ನೌ ವರದಿ ಮಾಡಿದೆ.

ಇದನ್ನೂ ಓದಿ: ಸಿನಿಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ; ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​!

ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

ಮರದಲ್ಲಿ ಮಾವಿನ ಕಾಯಿ ಕೀಳುವಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಪ್ರದೇಶದಲ್ಲಿ ನಡೆದಿದೆ. ಅಲೆವೂರು ನಿವಾಸಿ ಸದಾನಂದ ದೇವಾಡಿಗ(55) ಮೃತ ದುರ್ದೈವಿಯಾಗಿದ್ದು, ಗ್ರಾಮ ಸಹಾಯಕನಾಗಿ ಇವರು ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಘಟನೆ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:31 pm, Fri, 24 April 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us