ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ ನಿರ್ವಹಣೆಗೆ 6 ಸಚಿವರ ಸಮಿತಿ ರಚನೆ: ಸರ್ಕಾರ ಆದೇಶ

ರಾಜ್ಯದಲ್ಲಿನ ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ ನಿರ್ವಹಣೆಗೆ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ 6 ಸಚಿವರ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ವಿಪತ್ತು ನಿರ್ವಹಣೆ, ಪರಿಸ್ಥಿತಿ ಪರಾಮರ್ಶಿಸಿ ಅಗತ್ಯ ಸೂಚನೆ ನೀಡಲು ಸಚಿವ ಸಂಪುಟ ಉಪ ಸಮಿತಿಗೆ ಜವಾಬ್ದಾರಿ ನೀಡಲಾಗಿದೆ. 

ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ ನಿರ್ವಹಣೆಗೆ 6 ಸಚಿವರ ಸಮಿತಿ ರಚನೆ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 22, 2023 | 3:08 PM

ಬೆಂಗಳೂರು: ರಾಜ್ಯದಲ್ಲಿನ ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ (natural calamities) ನಿರ್ವಹಣೆಗೆ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ 6 ಸಚಿವರ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ಸತೀಶ್ ಜಾರಕಿಹೊಳಿ, ಪ್ರಿಯಾಂಕ್​​ ಖರ್ಗೆ, ಎನ್​​.ಚಲುವರಾಯಸ್ವಾಮಿ, S.S.ಮಲ್ಲಿಕಾರ್ಜುನ, ಕೆ.ಎನ್.ರಾಜಣ್ಣ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ವಿಪತ್ತು ನಿರ್ವಹಣೆ, ಪರಿಸ್ಥಿತಿ ಪರಾಮರ್ಶಿಸಿ ಅಗತ್ಯ ಸೂಚನೆ ನೀಡಲು ನೀತಿ ನಿರೂಪಣೆ ನೀಡಲು ಸಚಿವ ಸಂಪುಟ ಉಪ ಸಮಿತಿಗೆ ಜವಾಬ್ದಾರಿ ನೀಡಲಾಗಿದೆ.

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಿದೆ. ಕೆಲವೆಡೆ ಪ್ರಾಕೃತಿಕ ವಿಕೋಪಗಳಿಂದಾಗಿ ಸಾವು ಸಂಭವಿಸಿತ್ತಿವೆ. ಈ ಮಧ್ಯೆ, ಪ್ರಾಕೃತಿಕ ವಿಕೋಪ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮಾಡಿದ್ದರು.

ಇದನ್ನೂ ಓದಿ: ಕೊನೆಗೂ ವಿರೋಧ ಪಕ್ಷ ನಾಯಕನ ಆಯ್ಕೆಗೆ ಕೂಡಿಬಂತು ಮುಹೂರ್ತ, ಬಿಜೆಪಿಯಲ್ಲಿ ಯಾರಾಗ್ತಾರೆ ಪ್ರತಿಪಕ್ಷದ ನಾಯಕ?

ಸಿಡಿಲು, ಆಳಿಕಲ್ಲು ಮಳೆಯಿಂದಾಗಿ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು ಎಂದು ಹೇಳಿದ್ದರು.

ಯಾವುದೇ ರೀತಿಯ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಕರ್ತವ್ಯ ಲೋಪವಾಗಂದತೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ಕೇಂದ್ರ ಗೃಹ ಅಮಿತ್​ ಶಾ ಭೇಟಿಯಾಗಿ ಒಂದು ಪ್ರಮುಖ ಬೇಡಿಕೆ ಇಟ್ಟ ಸಿದ್ದರಾಮಯ್ಯ: ಏನದು?

ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಕೊಳ್ಳಬೇಕು, ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಈ ಹಿಂದೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Thu, 22 June 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್