ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆ, ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ

ಬೆಂಗಳೂರಿನಲ್ಲಿ ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ಬೆಳಕಿಗೆ ಬಂದಿದೆ. ಬೆಂಗಳೂರಿನ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಆರು ವರ್ಷದ ಬಾಲಕಿ ಶವ ಪತ್ತೆಯಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬಕ್ಕೆ ಸೇರಿರುವ ಬಾಲಕಿ ಎಂದು ಗೊತ್ತಾಗಿದ್ದು, ಮೃತಪಟ್ಟಿರುವ ಮಗುವಿನ ಮೇಲೆ ಸಾಕಷ್ಟು ಗಾಯಗಳು ಕಂಡುಬಂದಿವೆ. ಹೀಗಾಗ ಯಾರೋ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆ, ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ
ಮೃತದೇಹ ಸಿಕ್ಕ ಸ್ಥಳ
Follow us
ರಾಚಪ್ಪಾಜಿ ನಾಯ್ಕ್
| Updated By: ರಮೇಶ್ ಬಿ. ಜವಳಗೇರಾ

Updated on: Jul 03, 2024 | 3:57 PM

ಬೆಂಗಳೂರು, (ಜುಲೈ 03): ಆರು ವರ್ಷದ ಬಾಲಕಿಯ ಮೃತದೇಹ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದೆ. ಇಂದು (ಜುಲೈ 03) ಬೆಳಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿಯ ಪಾರ್ಕಿಂಗ್​ ಸ್ಥಳದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದ್ದು  ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಎಂದು ಗೊತ್ತಾಗಿದೆ. ಇನ್ನು ಮೈಮೇಲೆ ಪರಚಿದ ಗಾಯಗಳು ಹಾಗೂ ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಹೀಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಳಿಕ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಮೃತ ಕಂಡು ಕೂಡಲೇ ಪಾರ್ಕಿಂಗ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕಾಮಿಸಿ ಪರಿಶೀನಲೆ ನಡೆಸಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಜೆ ಕಗೊಂಡಿದ್ದು, ಇಲ್ಲಿಗೆ ಶವ ತಂದು ಹಾಕಿದವರು ಯಾರು ಎನ್ನುವುದನ್ನು  ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮದ್ವೆಯಾಗಿದ್ರೂ ಕಾಲೇಜು ವಿದ್ಯಾರ್ಥಿನಿ ಜತೆ ಲವ್: ವಿಡಿಯೋ ಮಾಡಿಟ್ಟು ಸಾವಿಗೆ ಶರಣಾದ ಪ್ರೇಮಿಗಳು

ಇನ್ನು ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ