ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಸಿಹಿ ಸುದ್ದಿ; ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ

ನಾಲ್ಕು ಅಥವಾ ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ಕೊವಿಡ್ 19 ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲಿಸಬೇಕು ಎಂದು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ.

ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಸಿಹಿ ಸುದ್ದಿ; ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ
ಕೆಎಸ್​ಆರ್​ಟಿಸಿ ಬಸ್
Updated By: preethi shettigar

Updated on: Mar 26, 2022 | 4:40 PM

ಬೆಂಗಳೂರು: ಯುಗಾದಿ ಹಬ್ಬದ ಹಿನ್ನಲೆ ಕೆಎಸ್​ಆರ್​ಟಿಸಿ (KSRTC) ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ   ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿಯಾಗಿ 600 ಬಸ್ (Bus) ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್​ಲೈನ್ (Online) ಮೂಲಕ ಮುಂಗಡ ಟಿಕೆಟ್ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

ನಾಲ್ಕು ಅಥವಾ ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ಕೊವಿಡ್ 19 ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲಿಸಬೇಕು ಎಂದು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ

2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಉಚಿತ ಪ್ರಯಾಣಕ್ಕೆ ಕೆಎಸ್​ಆರ್​ಟಿಸಿ ಅವಕಾಶ ಮಾಡಿಕೊಟ್ಟಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದ್ದು, ಪರೀಕ್ಷಾ ಕೇಂದ್ರದವರೆಗೆ ನಿಗಮದ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲು ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರದ ಬಳಿ ಬಸ್ ಹತ್ತಲು ಹಾಗೂ ಇಳಿಯಲು ಕೂಡ ಅವಕಾಶ ಮಾಡಲಾಗುವುದು. ಈಗಾಗಲೇ ಎಲ್ಲಾ ನಿಯಮಗಳನ್ನು ಪಾಲಿಸುವಂತೆ ಬಸ್ ಚಾಲಕ ನಿರ್ವಾಹಕರುಗಳಿಗೆ ಸೂಚಿಸಲಾಗಿದೆ. ಇನ್ನೂ ಪರೀಕ್ಷಾ ಕೇಂದ್ರದ ಬಳಿಯೇ ನಿಲುಗಡೆಗೆ ಸೂಚಿಸಲಾಗಿದೆ ಎಂದು ಕೆಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:

ಮಾ.28 ರಿಂದ ಏ.11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ

ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ; ಕೆಎಸ್​ಆರ್​ಟಿಸಿ ಬಸ್ ರಾತ್ರಿ ಸಂಚರಿಸುವ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

Published On - 4:38 pm, Sat, 26 March 22