ಬೆಂಗಳೂರು: ಇಂದು 66 ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆ ಹಿನ್ನೆಲೆ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು (ನವೆಂಬರ್ 1) ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 400 ರಿಂದ 500 ಶಿಕ್ಷಕರಿಗೆ ಮಾತ್ರ ಅವಕಾಶ ಇರಲಿದೆ. ಕೊವಿಡ್ ನಿಯಮಾವಳಿಗಳನ್ನು ಅನುಸರಿಸಿಕೊಂಡು ಕರ್ನಾಟಕ ರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿದ್ದು, ಎಲ್ಲಾ ಶಾಲೆಗಳಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚಾರಿಸಲು ಸೂಚನೆ ನೀಡಲಾಗಿದೆ.
ಕಳೆದ ಬಾರಿ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಶಾಲೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಹೀಗಾಗಿ ಶಾಲೆಗಳಲ್ಲಿ ನಾಡ ಹಬ್ಬ ಕರ್ನಾಟಕ ರಾಜ್ಯೋತ್ಸವವನ್ನು ಆಚಾರಿಸಲು ಸಾಧ್ಯವಾಗಿರಲಿಲ್ಲ. ಈ ವರ್ಷ ಕೊವಿಡ್ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಹೀಗಾಗಿ ಶಾಲೆಗಳಲ್ಲಿಯೂ ಕರ್ನಾಟಕ ರಾಜ್ಯೋತ್ಸವ ಆಚಾರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಉಧ್ಘಾಟನೆ ಮಾಡಲಿದ್ದು, ಶಿಕ್ಷಣ ಸಚಿವ ನಾಗೇಶ್, ರಿಸ್ಚನ್ ಹರ್ಷದ್ ಹಾಜರಿರಲಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಿ 11 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ.
ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು
ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಆಚರಣೆ ಹಿನ್ನೆಲೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಕೊವಿಡ್ ತಾಂತ್ರಿಕ ಸಮಿತಿಯಿಂದ ಸೂಕ್ತ ನಿಯಮಾವಳಿಗಳನ್ನು ಶಿಫಾರಸು ಮಾಡಲಾಗಿದೆ. ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಂದ ಶಿಫಾರಸು ನವೆಂಬರ್ 1ರಂದು ನಡೆಯುವ ರಾಜ್ಯೋತ್ಸವಕ್ಕೆ ನಿಯಮಾವಳಿ ಸೂಚಿಸಲಾಗಿದೆ. ಹೊರಾಂಗಣ ಕಾರ್ಯಕ್ರಮಗಳಲ್ಲಿ ಜನ ಸೇರ್ಪಡೆಗೆ ನಿರ್ಬಂಧ ವಿಧಿಸಿ ಸೂಚನೆ ಕೊಡಲಾಗಿದೆ. 500ಕ್ಕೂ ಹೆಚ್ಚು ಜನರು ಸೇರುವಂತಿಲ್ಲ. ಕಾರ್ಯಕ್ರಮಕ್ಕೆ ಬರುವವರಿಗೆ 2 ಡೋಸ್ ಲಸಿಕೆ ಆಗಿರಬೇಕು. ಕೊವಿಡ್ ಲಕ್ಷಣ ರಹಿತರಿಗೆ ಮಾತ್ರ ಭಾಗಿಯಾಗಲು ಅವಕಾಶ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಲೇಬೇಕು. ಎಲ್ಲರೂ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು ಮಾಡಲಾಗಿದೆ.
ಮುಂದೆ ಕೊರೊನಾ ಅಲೆ ಅಪಾಯದ ಬಗ್ಗೆ ಗಮನ ಇಟ್ಟುಕೊಂಡು ನಿಯಮಗಳನ್ನು ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ನಿಯಮಗಳೇನು ? ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿರೋ ಅಂಶಗಳೇನು ?
– ಹೊರಾಂಗಣ ಕಾರ್ಯಕ್ರಮಗಳಲ್ಲಿ 500 ಜನಕ್ಕೂ ಹೆಚ್ಚು ಸೇರುವಂತಿಲ್ಲ
– ಕಾರ್ಯಕ್ರಮದಲ್ಲಿ ಭಾಗಿಯಾಗುವ ವ್ಯಕ್ತಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಅದರ ಸರ್ಟಿಫಿಕೇಟ್ ಇರಬೇಕು
– ಥರ್ಮಲ್ ಸ್ಕ್ರೀನಿಂಗ್ ಆಗಬೇಕು. ಲಕ್ಷಣ ರಹಿತ ವ್ಯಕ್ತಿಗಳಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕೊಡಬೇಕು
– ಮಾಸ್ಕ್ ಕಡ್ಡಾಯವಾಗಿ ಹಾಕಬೇಕು
– ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಲೇಬೇಕು
– ಒಂದು ಮೀಟರ್ ಅಷ್ಟು ದೂರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
– ಕಾರ್ಯಕ್ರಮದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲೇಬೇಕು
ಇದನ್ನೂ ಓದಿ:
ಕನ್ನಡ ರಾಜ್ಯೋತ್ಸವ ಆಚರಣೆಗೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು; ಏನೇನಿದೆ ನಿಯಮಗಳು?
Published On - 12:40 pm, Sun, 31 October 21