ದಸರಾ ಗಿಫ್ಟ್! ಅರ್ಚಕರು, ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ: ಸಚಿವೆ ಶಶಿಕಲಾ ಜೊಲ್ಲೆ

ಅಕ್ಟೋಬರ್ 1ರಿಂದ 6ನೇ ವೇತನ ಶ್ರೇಣಿ ಜಾರಿಗೆ ಬರುವಂತೆ ನಿರ್ಧಾರ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಒಳಿತಿಗಾಗಿ ವಿಜಯ ದಶಮಿ ದಿನ ಅಂದರೆ ಅಕ್ಟೋಬರ್ 15ರಂದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಮಕ್ಕಳ ಆರೋಗ್ಯ ರಕ್ಷಣೆಗಾಗಿ ವಿಶೇಷ ಪೂಜೆ ಸಲ್ಲಿಸಬೇಕು. -ಸಚಿವೆ ಶಶಿಕಲಾ ಜೊಲ್ಲೆ

ದಸರಾ ಗಿಫ್ಟ್! ಅರ್ಚಕರು, ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ: ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ


ಬೆಂಗಳೂರು: ಅರ್ಚಕರು ಮತ್ತು ಸಿಬ್ಬಂದಿಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭರ್ಜರಿ ದಸರಾ ಗಿಫ್ಟ್ ನೀಡಿದ್ದಾರೆ. ಅರ್ಚಕರು, ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ದಸರಾ ಹಬ್ಬದ ನಿಮಿತ್ತ ಮೂರು ನಾಲ್ಕು ಯೋಜನೆ ಜಾರಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಅಕ್ಟೋಬರ್ 1ರಿಂದ 6ನೇ ವೇತನ ಶ್ರೇಣಿ ಜಾರಿಗೆ ಬರುವಂತೆ ನಿರ್ಧಾರ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಒಳಿತಿಗಾಗಿ ವಿಜಯ ದಶಮಿ ದಿನ ಅಂದರೆ ಅಕ್ಟೋಬರ್ 15ರಂದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಮಕ್ಕಳ ಆರೋಗ್ಯ ರಕ್ಷಣೆಗಾಗಿ ವಿಶೇಷ ಪೂಜೆ ಸಲ್ಲಿಸಬೇಕು. ರಾಜ್ಯದ A ಗ್ರೇಡ್‌ನ 205 ದೇಗುಲಗಳಲ್ಲಿ ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್‌ಮೆಂಟ್ ಸಿಸ್ಟಂ ಜಾರಿ ಮಾಡಲಾಗುತ್ತೆ.

ದೇಗುಲಕ್ಕೆ ಸಂಬಂಧಿಸಿದ ಪೂರ್ಣ ಮಾಹಿತಿ, ಸೇವಾ ವಿವರ, ದೇವಸ್ಥಾನಗಳ ಚರಾಸ್ತಿ, ಸ್ಥಿರಾಸ್ತಿಯ ಮಾಹಿತಿ ತಂತ್ರಾಂಶದಲ್ಲಿ ಲಭ್ಯವಾಗಲಿದೆ. ಪಾರದರ್ಶಕತೆ ಕಾಪಾಡಲು ಹೊಸ ಸಾಫ್ಟ್‌ವೇರ್ ಅಳವಡಿಕೆ ಮಾಡಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಯ ಅರ್ಚಕರು, ನೌಕರರಿಗೆ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಜಾರಿಗೊಳಿಸಲಾಗುತ್ತೆ. ವಾರ್ಷಿಕವಾಗಿ 1.22 ಕೋಟಿ ರೂ. ವೆಚ್ಚದಲ್ಲಿ ಅರ್ಚಕರಿಗೆ ವಿಮೆ ಸೌಲಭ್ಯ, ಆರೋಗ್ಯ ವಿಮೆ ಹಾಗೂ ಅಪಘಾತ ವಿಮೆ ಜಾರಿಗೆ ಚಿಂತನೆ ನಡೆಯುತ್ತಿದೆ. ಕೋವಿಡ್ನಿಂದ ಹಲವು ತೊಂದರೆಗಳನ್ನು ಅನುಭವಿಸಿದ್ದೀವಿ. ವಿಜಯದ ಸಂಕೇತವಾಗಿ ಆಚರಣೆ ಮಾಡುವ ದಿನ ವಿಜಯ ದಶಮಿ ಹೀಗಾಗಿ ಈ ದಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಇನ್ನು ಈ ವೇಳೆ ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಹಾಜರ್ ಇದ್ದರು.

ಇದನ್ನೂ ಓದಿ: ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ, ಮುಜರಾಯಿ ದೇವಸ್ಥಾನಗಳ ಸ್ವಚ್ಛತೆ, ಮೂಲ ಸೌಕರ್ಯಕ್ಕೆ ಆದ್ಯತೆ: ಶಶಿಕಲಾ ಜೊಲ್ಲೆ

Read Full Article

Click on your DTH Provider to Add TV9 Kannada