ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆ, ಆರೋಗ್ಯ ಇಲಾಖೆ ಫುಲ್ ಅಲರ್ಟ್

ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆಯಾಗಿದೆ. ಈಡಿಸ್ ಸೊಳ್ಳೆಯಿಂದ ಹರಡುವ ಝಿಕಾ ಪತ್ತೆ ಬೆನ್ನಲ್ಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸಲಾಗುವುದು.

ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆ, ಆರೋಗ್ಯ ಇಲಾಖೆ ಫುಲ್ ಅಲರ್ಟ್
ಝಿಕಾ ವೈರಸ್
Follow us
Vinay Kashappanavar
| Updated By: ಆಯೇಷಾ ಬಾನು

Updated on: Aug 18, 2024 | 7:53 AM

ಬೆಂಗಳೂರು, ಆಗಸ್ಟ್​.18: ಡೆಂಗ್ಯೂ (Dengue) ಆಯ್ತು ಈಗ ಬೆಂಗಳೂರಿನಲ್ಲಿ ಝಿಕಾ ವೈರಸ್ (Zika Virus) ಭೀತಿ ಎದುರಾಗಿದೆ. ಈಗಾಗಲೆ ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ಝಿಕಾ ವೈರಸ್ ಭೀತಿ ಬೆನ್ನಲ್ಲೆ ರಾಜ್ಯ ಆರೋಗ್ಯ ಇಲಾಖೆ (Health Department) ಎಚ್ಚೆತ್ತುಕೊಂಡಿದ್ದು ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದರ ಬಗ್ಗೆ ಅಗತ್ಯ ಕ್ರಮ ವಹಿಸಲು ಮುಂದಾಗಿದೆ.

ಈಡಿಸ್ ಸೊಳ್ಳೆಯಿಂದ ಹರಡುವ ಝಿಕಾ ಪತ್ತೆ ಬೆನ್ನಲ್ಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ, ದದ್ದುಗಳು ಕಾಣಿಸಿಕೊಳ್ಳೋದು ಝಿಕಾ ವೈರಸ್ ಗುಣ ಲಕ್ಷಣ. ಇನ್ನು ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ.

ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ, ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಝಿಕಾ ವೈರಸ್ ದೃಢಪಟ್ಟರೆ, ಕುಟುಂಬದ ಸದಸ್ಯರ ರಕ್ತದ ಮಾದರಿ ಲ್ಯಾಬ್ ಟೆಸ್ಟ್​ಗೆ ಒಳಪಡಿಸಬೇಕು.

ಇದನ್ನೂ ಓದಿ: ಅಮೆರಿಕಾದಲ್ಲಿ ವಿದ್ಯಾಭ್ಯಾಸ ಮಾಡಲು ಬಯಸುವವರಿಗೆ ಸುವರ್ಣಾವಕಾಶ; ಬೆಂಗಳೂರಿನಲ್ಲಿಂದು ‘ಯುಎಸ್‌ನಲ್ಲಿ ಅಧ್ಯಯನ’ ಮೇಳ ಆಯೋಜನೆ

ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸಲಾಗುವುದು. ಝಿಕಾ ವೈರಸ್​ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಗರ್ಭಾವಸ್ಥೆಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೋಸೆಫಾಲಿ) ಬೆಳವಣಿಗೆ ದೋಷ ಕಂಡುಬರಬಹುದು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ