ಶಿವಾಜಿನಗರದಲ್ಲಿರುವ 70 ವರ್ಷ ಹಳೆ ಪಾಲಿಕೆ ಹೆರಿಗೆ ಆಸ್ಪತ್ರೆಗೆ ಬೀಗ; ಹೊಸ ಆಸ್ಪತ್ರೆ ನಿರ್ಮಾಣ ಹೆಸರಲ್ಲಿ ಕಾಮಗಾರಿ ವಿಳಂಬ

ಅದು 1957ರಲ್ಲಿ ಬಡವರಿಗೆ ಸಹಾಯ ಆಗಲೆಂದು ನಿರ್ಮಾಣವಾಗಿದ್ದ ಹೆರಿಗೆ ಆಸ್ಪತ್ರೆ. ಅದ್ರೆ ಕಳೆದ ಮೂರು ವರ್ಷಗಳಿಂದ ದುರಸ್ತಿ ಹೆಸರಿನಲ್ಲಿ‌ ಆಸ್ಪತ್ರೆಗೆ ಬೀಗ ಹಾಕಿದ್ದು, ಆಸ್ಪತ್ರೆಗೆ ಹೇಳೋರು ಕೇಳೋರು ಇಲ್ಲದೆ ಬಡವಾಗಿದೆ. ಅಷ್ಟಕ್ಕೂ ಯಾವ ಆಸ್ಪತ್ರೆ, ಎಲ್ಲಿ? ಎಂಬ ವರದಿ ಇಲ್ಲಿದೆ ಓದಿ.

ಶಿವಾಜಿನಗರದಲ್ಲಿರುವ 70 ವರ್ಷ ಹಳೆ ಪಾಲಿಕೆ ಹೆರಿಗೆ ಆಸ್ಪತ್ರೆಗೆ ಬೀಗ; ಹೊಸ ಆಸ್ಪತ್ರೆ ನಿರ್ಮಾಣ ಹೆಸರಲ್ಲಿ ಕಾಮಗಾರಿ ವಿಳಂಬ
ಶಿವಾಜಿನಗರದಲ್ಲಿರುವ 70 ವರ್ಷ ಹಳೆ ಪಾಲಿಕೆ ಹೆರಿಗೆ ಆಸ್ಪತ್ರೆಗೆ ಬೀಗ
Follow us
Vinayak Hanamant Gurav
| Updated By: ಆಯೇಷಾ ಬಾನು

Updated on: Sep 25, 2024 | 6:57 AM

ಬೆಂಗಳೂರು, ಸೆ.25: ಧೂಳು ಹಿಡಿದು ಪಾಳು ಬಿದ್ದಿರುವ ಕಟ್ಟಡ, ಸುತ್ತಮುತ್ತ ದಟ್ಟವಾಗಿ ಬೆಳೆದು‌ ನಿಂತಿರುವ ಗಿಡಗಂಟಿಗಳು. ಕಟ್ಟಡದ ಮುಂದೆ ಕಸದ ರಾಶಿ. ಇದು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ನಾರಾಯಣ ಪಿಳ್ಳೈ ರಸ್ತೆಯಲ್ಲಿರುವ ಬಡವರ ಆಸ್ಪತ್ರೆ ಎಂದೆ ಖ್ಯಾತಿ ಪಡೆದಿದ್ದ ಪೂರ್ ಹೌಸ್ ಹೆರಿಗೆ ಆಸ್ಪತ್ರೆಯ ದುಸ್ಥಿತಿ.

1957 ರಲ್ಲಿ ಶಿವಾಜಿನಗರದ ನಾರಾಯಣ ಪಿಳ್ಳೈ ರಸ್ತೆಯಲ್ಲಿ ಬಿಬಿಎಂಪಿ ಹೆರಿಗೆ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿತ್ತು.‌ ಈ ಭಾಗದ ಜನರಿಗೆ ತುಂಬಾ ಅನುಕೂಲ ಆಗಿತ್ತು. ಹಳೆಯ ಆಸ್ಪತ್ರೆ ಆಗಿದ್ದರಿಂದ ಇದಕ್ಕೆ ಬೀಗ ಜಡಿದು, ಹೊಸ ಕಟ್ಟಡವನ್ನ ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಾಗ್ತಿದೆ. ಆದರೆ ಕಳೆದ ಮೂರು ವರ್ಷಗಳಿಂದ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಮುಗಿದಿಲ್ಲ. ದುರಸ್ತಿ ಹೆಸರಿನಲ್ಲಿ ಪೂರ್ ಹೌಸ್ ಹೆರಿಗೆ ಆಸ್ಪತ್ರೆಗೆ ಬೀಗ ಹಾಕಿದ್ದರಿಂದ ನಿತ್ಯ ಆರೋಗ್ಯ ಸೇವೆ ಸಿಗದ ಈ ಭಾಗದ ಜನರು ಪರದಾಡುವಂತಾಗಿದೆ.

70-year-old corporation maternity hospital in Shivaji Nagar closed people express anger kannada news

ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ; ಕುಡಿದ ಮತ್ತಲ್ಲಿ ಸ್ನೇಹಿತನನ್ನ ಒದ್ದು ಕೊಂದ

ಇನ್ನೂ ಆಸ್ಪತ್ರೆಯ ಕಾಮಗಾರಿ ತ್ವರಿತ ಗತಿಯಲ್ಲಿ ಮುಗಿಸುವಂತೆ ಸ್ಥಳೀಯರು ಹಲವು ಬಾರಿ ಪಾಲಿಕೆಯ ಅಧಿಕಾರಿಗಳ ಗಮನಕ್ಕೆ ತಂದ್ರೂ ಪ್ರಯೋಜನವಾಗಲಿಲ್ಲ. ಇನ್ನು ಹೆರಿಗೆಗೆ ಅಂತ ಹಲಸೂರು ಇಲ್ಲ ಘೋಷ ಆಸ್ಪತ್ರೆಗೆ ತೆರಳಬೇಕು. ಇತ್ತ ಬೌರಿಂಗ್ ಆಸ್ಪತ್ರೆಯಲ್ಲಿ ಹೆರಿಗೆ ಸೌಲಭ್ಯ ಬಂದ್ ಮಾಡಲಾಗಿದೆ. ಹೀಗಾಗಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದಲೂ  ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಿಗೂ ಪತ್ರ ಬರೆದಿದ್ದಾರೆ. ಬಡವರಿಗೆ ಅನುಕೂಲವಾಗಿದ್ದ ಈ ಆಸ್ಪತ್ರೆಗೆ ಆದಷ್ಟು ಬೇಗ ಉದ್ಘಾಟನೆಯ ಭಾಗ್ಯ ಸಿಗಬೇಕಿದೆ.

ಒಟ್ಟಿನಲ್ಲಿ ಇಷ್ಟೋತ್ತಿಗಾಗಲೆ ಆಸ್ಪತ್ರೆ ಕಟ್ಟಡ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಬರಬೇಕಿತ್ತು. ಆದರೆ ಪಾಲಿಕೆ ಅಧಿಕಾರಿಗಳ ನಿರ್ಲಕ್ಷಕ್ಕೆ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಆದಷ್ಟು ಬೇಗನೆ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಕಟ್ಟಡ ಕಾಮಗಾರಿ ಮುಗಿಸಿ ಸಾರ್ವಜನಿಕರಿಗೆ ಅನಕೂಲ ಮಾಡಿಕೊಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ