AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day: ಸ್ವಾತಂತ್ರ್ಯ ಮಹೋತ್ಸವ; ಆಗಸ್ಟ್ 4 ರಿಂದ 15ರವರೆಗೆ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ

Lalbagh Flower Show; ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ ನಡೆಸುತ್ತಿದೆ. ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಷ್ಪ ಪ್ರದರ್ಶನ ಸಾಕಾರಗೊಳ್ಳಲಿದೆ.

Independence Day: ಸ್ವಾತಂತ್ರ್ಯ ಮಹೋತ್ಸವ; ಆಗಸ್ಟ್ 4 ರಿಂದ 15ರವರೆಗೆ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ
ಫಲಪುಷ್ಪ ಪ್ರದರ್ಶನ (ಸಂಗ್ರಹ ಚಿತ್ರ)
Poornima Agali Nagaraj
| Edited By: |

Updated on:Jul 12, 2023 | 8:06 PM

Share

ಬೆಂಗಳೂರು: ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 4ರಿಂದ 15ರವರೆಗೆ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಏರ್ಪಡಿಸಲಾಗಿದೆ. ದೇಶದ 76ನೇ ಸ್ವಾತಂತ್ರ್ಯ ಮಹೋತ್ಸವದ (Independence Day) ಅಂಗವಾಗಿ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದು ಲಾಲ್​ಬಾಗ್​ನಲ್ಲಿ ನಡೆಯಲಿರುವ 214ನೇ ಫಲಪುಷ್ಪ ಪ್ರದರ್ಶನವಾಗಿರಲಿದೆ.

ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ ನಡೆಸುತ್ತಿದೆ. ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಷ್ಪ ಪ್ರದರ್ಶನ ಸಾಕಾರಗೊಳ್ಳಲಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 2 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.

ಗಣರಾಜ್ಯೋತ್ಸವ ಅಂಗವಾಗಿ ಈ ಹಿಂದೆ ಜನವರಿಯಲ್ಲಿ ಫಲಪುಷ್ಪ ಪ್ರದರ್ಶನ ನಡೆದಿತ್ತು. ಜನವರಿ 20ರಿಂದ 30ರವರೆಗೆ 213ನೇ ಫಲಪುಷ್ಪ ಪ್ರದರ್ಶನ ನಡೆದಿತ್ತು. 11 ದೇಶಗಳಿಂದ ತರಿಸಿದ್ದ 69 ವಿವಿಧ ಹೂವುಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು. ಜತೆಗೆ ಹಲವಾರು ಬಗೆಯ ಸ್ಪರ್ಧೆಗಳನ್ನೂ ಏರ್ಪಡಿಸಲಾಗಿತ್ತು.

ಇದನ್ನೂ ಓದಿ: Lalbagh: ಬೆಂಗಳೂರಿನ ಲಾಲ್​ಬಾಗ್​ಗೆ ಭೇಟಿ ನೀಡಿದರೆ ಇವುಗಳನ್ನು ಮಿಸ್ ಮಾಡದೆ ನೋಡಿ, ಎಂಜಾಯ್ ಮಾಡಿ

ಲಾಲ್​ಬಾಗ್​ನಲ್ಲಿ ಪ್ರತಿ ವರ್ಷ ಗಣರಾಜ್ಯೋತ್ವವ ಹಾಗೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ಫ್ಲವರ್​ ಶೋ ಏರ್ಪಡಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Wed, 12 July 23

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ