7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ: ಸರ್ಕಾರ ಆದೇಶ

ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. 

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:May 16, 2023 | 3:04 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಮತ್ತು ನೂತನ ವೇತನ ಶ್ರೇಣಿ ರಚಿಸುವ ಉದ್ದೇಶದಿಂದ ನಿವೃತ್ತ ಸಿ.ಎಸ್.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ (7th State Pay Commission) ಅವಧಿ ವಿಸ್ತರಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. ಆಯೋಗದ ಶಿಫಾರಸ್ಸು ಆಧರಿಸಲು ಮುಂದಿನ ಕ್ರಮ ಕೈಗೊಳ್ಳಲು 2023-24ನೇ ಸಾಲಿನಲ್ಲಿ ಹಣವನ್ನೂ ತೆಗೆದಿಡಲಾಗಿತ್ತು.

ಮಾರ್ಚ್​ ಒಳಗೆ ಮಧ್ಯಂತರ ವರದಿ ಪಡೆದು ಅವಲೋಕಿಸಿ 2023-24ರಲ್ಲಿಯೇ ಜಾರಿಗೊಳಿಸಲು ಸಿದ್ಧರಿದ್ದೇವೆ ಎಂದು ಈ ಹಿಂದೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿ ವಿಚಾರ ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ 7ನೇ ವೇತನ ಆಯೋಗದಲ್ಲಿ ಹಳೇ ಪಿಂಚಣಿ ನೀತಿ​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಫೆಬ್ರವರಿ 22ರಿಂದ 7 ದಿನಗಳ ಗಡುವು ನೀಡಿತ್ತು.

ಒಂದು ವೇಳೆ ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಎಚ್ಚರಿಕೆ ನೀಡಿದ್ದರು. ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1ರಿಂದಲೇ ಕರ್ತವ್ಯಕ್ಕೆ ಗೈರಾಗಲು ನೌಕರರು ಸಭೆಯಲ್ಲಿ ನಿರ್ಧಾರಿಸಿದ್ದರು.

ಇದನ್ನೂ ಓದಿ: 7ನೇ ವೇತನ ಆಯೋಗದಲ್ಲಿ ಒಪಿಎಸ್​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ ನೌಕರರ ಸಂಘ

ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ​ ವಂದಿತಾ ಶರ್ಮಾ ಅವರಿಗೆ ತಿಳಿವಳಿಕೆ ಮತ್ತು ಮನವಿ ಪತ್ರ ಸಲ್ಲಿಸಲು ನಿರ್ಧಾರ ಮಾಡಲಾಗಿತ್ತು. ಇದೇ ವೇಳೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಮಾತನಾಡಿ, ಮಾರ್ಚ್​​ 1ರಿಂದ ಬೆಂಗಳೂರಿನಲ್ಲಿ ಕಸ ಎತ್ತದಿರಲು ತೀರ್ಮಾನಿಸಲಾಗಿತ್ತು. ಅಲ್ಲದೆ, ಹಳೇ ಪಿಂಚಣಿ ನೀತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Tue, 16 May 23

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು