ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪತ್ತೆ ಪ್ರಕರಣ; ವರದಿ ನೆಗೆಟಿವ್

ಮಂಕಿಪಾಕ್ಸ್ ಮುನ್ನೆಚ್ಚರಿಕೆ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಸೋಂಕು ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.

ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪತ್ತೆ ಪ್ರಕರಣ; ವರದಿ ನೆಗೆಟಿವ್
ಸಾಂದರ್ಭಿಕ ಚಿತ್ರ
Image Credit source: NDTV
TV9kannada Web Team

| Edited By: sandhya thejappa

Jul 31, 2022 | 11:43 AM

ಬೆಂಗಳೂರು: ಕೊರೊನಾ (Coronavirus) ಬಳಿಕ ವಿಶ್ವದಾದ್ಯಂತ ಮಂಕಿಪಾಕ್ಸ್ (Monkeypox) ಅಬ್ಬರ ಜೋರಾಗಿದೆ. ಈಗಾಗಲೇ ಭಾರತದಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬೆಂಗಳೂರಿನಲ್ಲಿದ್ದ ಇಥಿಯೋಪಿಯಾ ಮೂಲದ 55 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಲಕ್ಷಣ ಕಂಡುಬಂದಿತ್ತು. ಶಂಕಿಸಿ ಮಂಕಿಪಾಕ್ಸ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿಯಲ್ಲಿ ಚಿಕನ್ಪಾಕ್ಸ್ ಇರುವುದು ಪತ್ತೆಯಾಗಿದ್ದು, ಮಂಕಿಪಾಕ್ಸ್ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮಂಕಿಪಾಕ್ಸ್ ಮುನ್ನೆಚ್ಚರಿಕೆ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಸೋಂಕು ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಬೆಂಗಳೂರು, ಮಂಗಳೂರು ಏರ್ ಪೋರ್ಟ್​ಗಳಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಶೀತ- ಜ್ವರ, ತಲೆನೋವು, ಸ್ನಾಯು ಸೆಳೆತ, ಆಯಾಸ, ಗಂಟಲು ಕೆರೆತ, ಕೆಮ್ಮು, ಚರ್ಮ ತುರಿಕೆ ಲಕ್ಷಣಗಳು ಕಂಡು ಬರುವ ಪ್ರಯಾಣಿಕರಿಗೆ ತಪಾಸಣೆ ತಪಾಸಣೆ ನಡೆಸಲಾಗುತ್ತದೆ ಎಂದು ಸಚಿವ ಸುಧಾಕರ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಇದನ್ನೂ ಓದಿ

ಭಾರತದ ಮೊದಲ ಮಂಕಿಪಾಕ್ಸ್ ಸೋಂಕಿತ ಗುಣಮುಖ: ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ಮಂಕಿಪಾಕ್ಸ್​ನಿಂದ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ತಿಳಿಸಿದ್ದಾರೆ. ಇದು  ದೇಶದಲ್ಲಿ ಮೊದಲ ಪತ್ತೆಯಾದ  ಮಂಕಿಪಾಕ್ಸ್ ಪ್ರಕರಣವಾಗಿರುವುದರಿಂದ, ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಸೂಚನೆಯಂತೆ 72 ಗಂಟೆಗಳ ಮಧ್ಯಂತರದಲ್ಲಿ ಎರಡು ಬಾರಿ ಪರೀಕ್ಷೆಗಳನ್ನು ನಡೆಸಲಾಗಿದೆ.

Follow us on

Related Stories

Most Read Stories

Click on your DTH Provider to Add TV9 Kannada