AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವು

ಮಕ್ಕಳ ಬಗ್ಗೆ ಎಷ್ಟೇ ಎಚ್ಚರವಹಿಸಿದರೂ ಅದು ಕಡಿಮೆಯೇ, ಹೌದು, ಇಂದು(ಭಾನುವಾರ) ಸಂಜೆ 4 ಗಂಂಟೆಯ ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಸ್ಥಳಕ್ಕೆ‌ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವು
ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವು
ಕಿರಣ್ ಹನುಮಂತ್​ ಮಾದಾರ್
|

Updated on:Sep 22, 2024 | 6:38 PM

Share

ಬೆಂಗಳೂರು, ಸೆ.22: ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇಂದು(ಭಾನುವಾರ) ಸಂಜೆ 4 ಗಂಂಟೆಯ ಸುಮಾರಿಗೆ ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಿರಂಜನ್ ಮೃತ ಬಾಲಕ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ.

ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ. ಮೃತ ನಿರಂಜನ್​ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್​ನಲ್ಲಿ ಈ ಕುಟುಂಬ ವಾಸವಾಗಿತ್ತು. ಇನ್ನು ಘಟನೆ ಬಳಿಕ ಸ್ಥಳಕ್ಕೆ‌ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಆಂಬ್ಯುಲೆನ್ಸ್ ಬರುವಷ್ಟರಲ್ಲೇ ಮಗು ಸಾವು, 4 ದಿನ ಆಸ್ಪತ್ರೆಯಲ್ಲಿಟ್ಟುಕೊಂಡಿದ್ದ ವೈದ್ಯನ ವಿರುದ್ಧ ಆಕ್ರೋಶ

ಈ ಕುರಿತು ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ‘ನಾವು ಇಲ್ಲಿ ಕ್ರಿಕೆಟ್ ಆಡುತ್ತಿದ್ದೇವೋ, ಆಗ ಸೈಕಲ್ ಜೊತೆಗೆ ಮೃತ ಬಾಲಕ ಗ್ರೌಂಡ್​ಗೆ ಬಂದು ಗೇಟ್​ ತಗೆಯುತ್ತಿದ್ದಂತೆ ಆ ಹುಡುನ ಮೇಲೆ ಗೇಟ್ ಬಿತ್ತು. ನಾವು ಗೇಟ್ ಮೇಲಕ್ಕೆ ಎತ್ತಿದೇವು. ಆ ಮೇಲೆ ಎಳನೀರು ಅಂಗಡಿ ಅವರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಈ ವೇಳೆ ಹುಡುಗನಿಗೆ ತಲೆ ಮತ್ತು ಕಿವಿಗೆ ಗಾಯವಾಗಿತ್ತು ಎಂದಿದ್ದಾರೆ.

ಸಿಡಿಲು ಬಡಿದು 65 ವರ್ಷದ ರೈತ ದುರ್ಮರಣ

ಧಾರವಾಡ: ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇದೀಗ ತಾಲೂಕಿನ ಹನುಮನಾಳದಲ್ಲಿ ಸಿಡಿಲಿನ ಹೊಡೆತಕ್ಕ ಓರ್ವ ರೈತ ಸಾವನ್ನಪ್ಪಿದ್ದಾನೆ. ಸಿಡಿಲಿಗೆ ರೈತ ಭೀಮನಗೌಡ ಪಾಟೀಲ್​​(65) ಬಲಿ. ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ದುರಂತ ಸಂಭವಿಸಿದೆ. ಈ ಕುರಿತು ಗರಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ​ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Sun, 22 September 24

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?