ಬೆಂಗಳೂರು, ಸೆ.22: ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇಂದು(ಭಾನುವಾರ) ಸಂಜೆ 4 ಗಂಂಟೆಯ ಸುಮಾರಿಗೆ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಿರಂಜನ್ ಮೃತ ಬಾಲಕ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ.
ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ. ಮೃತ ನಿರಂಜನ್ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್ನಲ್ಲಿ ಈ ಕುಟುಂಬ ವಾಸವಾಗಿತ್ತು. ಇನ್ನು ಘಟನೆ ಬಳಿಕ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಆಂಬ್ಯುಲೆನ್ಸ್ ಬರುವಷ್ಟರಲ್ಲೇ ಮಗು ಸಾವು, 4 ದಿನ ಆಸ್ಪತ್ರೆಯಲ್ಲಿಟ್ಟುಕೊಂಡಿದ್ದ ವೈದ್ಯನ ವಿರುದ್ಧ ಆಕ್ರೋಶ
ಈ ಕುರಿತು ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ‘ನಾವು ಇಲ್ಲಿ ಕ್ರಿಕೆಟ್ ಆಡುತ್ತಿದ್ದೇವೋ, ಆಗ ಸೈಕಲ್ ಜೊತೆಗೆ ಮೃತ ಬಾಲಕ ಗ್ರೌಂಡ್ಗೆ ಬಂದು ಗೇಟ್ ತಗೆಯುತ್ತಿದ್ದಂತೆ ಆ ಹುಡುನ ಮೇಲೆ ಗೇಟ್ ಬಿತ್ತು. ನಾವು ಗೇಟ್ ಮೇಲಕ್ಕೆ ಎತ್ತಿದೇವು. ಆ ಮೇಲೆ ಎಳನೀರು ಅಂಗಡಿ ಅವರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಈ ವೇಳೆ ಹುಡುಗನಿಗೆ ತಲೆ ಮತ್ತು ಕಿವಿಗೆ ಗಾಯವಾಗಿತ್ತು ಎಂದಿದ್ದಾರೆ.
ಧಾರವಾಡ: ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇದೀಗ ತಾಲೂಕಿನ ಹನುಮನಾಳದಲ್ಲಿ ಸಿಡಿಲಿನ ಹೊಡೆತಕ್ಕ ಓರ್ವ ರೈತ ಸಾವನ್ನಪ್ಪಿದ್ದಾನೆ. ಸಿಡಿಲಿಗೆ ರೈತ ಭೀಮನಗೌಡ ಪಾಟೀಲ್(65) ಬಲಿ. ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ದುರಂತ ಸಂಭವಿಸಿದೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:18 pm, Sun, 22 September 24