AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋನಲ್ಲಿ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಚಾಲಕ

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದೆ. ದಾರಿಯಲ್ಲಿ ಹೋಗುತ್ತಿರುವ ಮಹಿಳೆ, ಯುವತಿಯರ ಮೇಲೆ ಕಾಮುಕರು ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಪ್ರಕರಣಗಳು ನಡೆಯುತ್ತಲೇ ಇದ್ದು, ತಮ್ಮ ಪಾಡಿಗೆ ಹೋಗುತ್ತಿರುವ ಮಹಿಳೆಯರ ಖಾಸಗಿ ಅಂಗಾಂಗಳನ್ನು ಮುಟ್ಟಿ ವಿಕೃತಿ ಮೆರೆದು ಪರಾರಿಯಾಗುತ್ತಾರೆ. ಅದರಂತೆ ಬೆಂಗಳೂರಿನಲ್ಲಿ ಆಟೋ ಚಾಲಕನೋರ್ವ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಆಟೋನಲ್ಲಿ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಚಾಲಕ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 16, 2025 | 9:42 PM

Share

ಬೆಂಗಳೂರು, (ಸೆಪ್ಟೆಂಬರ್ 16): ಆಟೋ ಚಾಲಕನೋರ್ವ (Auto Driver) ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ (Bengaluru) ಜೆಪಿ ನಗರದ (JP Nagar) 7ನೇ ಹಂತದಲ್ಲಿ ನಡೆದಿದೆ. ಯುವತಿಯೋರ್ವಳು ಜೆಪಿ ನಗರದ ಏಳನೇ ಸ್ಟೇಜ್​ ನಿಂದ ಆಟೋ ಬುಕ್ ಮಾಡಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಆಟೋ ಚಾಲಕ ಒಳಗೆ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದಾನೆ. ಅಲ್ಲದೇ ನಿಮಗೆ ಜ್ವರ ಬಂದಿದ್ಯಾ ಎಂದು ನಾಟಕ ಮಾಡುತ್ತ ಆಕೆಯ ಹಣೆ ಮುಟ್ಟಿ ಬಳಿಕ ಏಕಾಏಕಿ ಖಾಸಗಿ ಅಂಗಕ್ಕೆ ಕೈ ಹಾಕಿದ್ದಾನೆ. ಈ ಸಂಬಂಧ ಯುವತಿ ಕೊಟ್ಟ ದೂರಿನ ಮೇರೆಗೆ ಆಟೋ ಚಾಲಕ ಹನುಮಂತಪ್ಪ ಹೆಚ್ ತಳವಾರ ಎನ್ನುವಾತನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಯುವತಿ ಬುಕ್ ಮಾಡಿದ್ದ ಆಟೋ ಲೋಕೇಶನ್‌ಗೆ ಬಂದ ತಕ್ಷಣ ಚಾಲಕ ಮೊದಲಿಗೆ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದಾನೆ. ಅಲ್ಲದೇ ನೀನು ಸಿನಿಮಾ ಹಿರೋಯಿನ್ ತರಾ ಇದೀಯಾ ಎಂದು ಬೆಣ್ಣೆಯ ಮಾತುಗಳನ್ನಾಡಿದ್ದಾನೆ. ಬಳಿಕ ಯುವತಿ ಆಟೋ ಒಳಗೆ ಕುಳಿತುಕೊಳ್ಳುತ್ತಿದ್ದಂತೆ ಜ್ವರ ಬಂದಿದೆಯಾ ಎಂದು ಹಣೆ ಮುಟ್ಟಿದ್ದಾನೆ. ಇದಾದ ಬಳಿಕ ಆಕೆಯ ಖಾಸಗಿ ಅಂಗಕ್ಕೆ ಕೈ ಹಾಕಿದ್ದಾನೆ. ಇದರಿಂದ ವಿಚಲಿತಗೊಂಡ ಯುವತಿ ಆಟೋದಿಂದ ಜಿಗಿದು ಓಡಿಹೋಗಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇದೆಂಥಾ ಕೃತ್ಯ: ಯುವತಿಯ ಖಾಸಗಿ ಭಾಗ ಮುಟ್ಟಿ ಬರ್ತಿಯಾ ಎಂದ ಕಾಮುಕರು!

ಈ ದೂರಿನ ಆಧಾರದ ಮೇಲೆ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಜೊತೆಗೆ ಆತ ಕೆಲಸ ಮಾಡುತ್ತಿದ್ದ ಕ್ಯಾಬ್ ಕಂಪನಿಗೂ ಮಾಹಿತಿ ನೀಡಿ, ಆತನ ಲೈಸೆನ್ಸ್ ವಿರುದ್ಧ ಕ್ರಮ ತೆಗದುಕೊಳ್ಳಲು ಸೂಚಿಸಿದ್ದಾರೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:40 pm, Tue, 16 September 25

Follow Us
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ