AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್, ಬಿಆರ್ ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್​ ಆದೇಶ: ಏನಿದು ಕೇಸ್?

ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ತಯಾರಿ ನಡೆಸಿರುವ ಹೊತ್ತಲ್ಲೇ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಹೊಸ ಸಂಕಷ್ಟ ಎದುರಾಗಿದೆ.

ಡಿಕೆ ಶಿವಕುಮಾರ್, ಬಿಆರ್ ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್​ ಆದೇಶ: ಏನಿದು ಕೇಸ್?
ಡಿಕೆ ಶಿವಕುಮಾರ್
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on:Feb 06, 2024 | 6:28 PM

Share

ಬೆಂಗಳೂರು, (ಫೆಬ್ರವರಿ 06): ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ಬಿ.ಆರ್.ನಾಯ್ಡು ವಿರುದ್ಧ ತನಿಖೆಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ(Bengaluru special court) ಆದೇಶಿಸಿದೆ. ಫೋರ್ಜರಿ, ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಪೋಸ್ಟ್ ಹಾಕಿದ್ದಾರೆ ಎಂದು ಬಿಜೆಪಿ ಕಾನೂನು ಘಟಕ ನೀಡಿದ್ದ ದೂರಿನನ್ವಯ, ಎಫ್​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿದೆ.

ನಾನು ಕರಸೇವಕ, ನನ್ನನ್ನೂ ಬಂಧಿಸಿ ಎನ್ನುವ ಬಿಜೆಪಿಯ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾನೂನು ಪ್ರಕೋಷ್ಟ ಸಂಚಾಲಕ ಯೋಗೇಂದ್ರ ಹೊಡಾಘಟ್ಟ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ಇದೀಗ ಕೋರ್ಟ್ ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದು, ಎಫ್​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ಜಡ್ಜ್ ಜೆ.ಪ್ರೀತ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ಫೋಟೋ ಬಳಸಿ ಪೋಸ್ಟ್‌: ಕಾಂಗ್ರೆಸ್​, ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು

ಏನಿದು ಪ್ರಕರಣ?

ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆರೋಪಿ ಶ್ರೀಕಾಂತ್​ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರು. ಇದು ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿತ್ತು. ಈ ವೇಳೆ ಬಿಜೆಪಿ ನಾಯಕರು ನಾನು ಕರಸೇವಕ ನನ್ನನ್ನೂ ಬಂಧಿಸಿ ಅಭಿಯಾನ ಮಾಡಿದ್ದರು. ಈ ಅಭಿಯಾನವನ್ನು ಕಾಂಗ್ರೆಸ್​ ಲೇವಡಿ ಮಾಡಿದ್ದಲ್ಲದೇ ಬಿಜೆಪಿ ನಾಯಕರ ಪೋಟೋಗಳನ್ನು ಬಳಸಿ ವ್ಯಂಗ್ಯವಾಡಿತ್ತು.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ಹಿರಿಯ ನಾಯಕರ ಫೋಟೋ ಬಳಸಿ ಕರ್ನಾಟಕ ಕಾಂಗ್ರೆಸ್ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಫೇಸ್‌ಬುಕ್ ಹ್ಯಾಂಡ್ಲರ್ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲು ಮಾಡಲಾಗಿತ್ತು.

ಬಿಜೆಪಿ ನಾಯಕರ ಫೋಟೋಗಳನ್ನು ಎಡಿಟ್​ ಮಾಡಿ ದುರ್ಬಳಕೆ ಮಾಡಲಾಗುತ್ತಿದೆ. ಆ ಮೂಲಕ ತಪ್ಪುದಾರಿಗೆಳೆಯುವ, ಫ್ಯಾಬ್ರಿಕೇಟೆಡ್ ಪೋಸ್ಟ್‌ಶೇವ್ ಪೋಸ್ಟ್ ಮಾಡಲಾಗುತ್ತಿದೆ. ಇಂತಹ ಪೋಸ್ಟ್‌ಗಳು ಘರ್ಷಣೆಯನ್ನು ಪ್ರಚೋದಿಸುವ ಮತ್ತು ಸಮಾಜದ ಕೆಲವು ವರ್ಗಗಳನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿವೆ. ಹೀಗಾಗಿ ಡಿಕೆ ಶಿವಕುಮಾರ್ ಮತ್ತು ಅವರ ಫೇಸ್‌ಬುಕ್ ಪುಟವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಯೋಗೇಂದ್ರ ಹೊಡಘಟ್ಟ ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:16 pm, Tue, 6 February 24

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ