AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಾಲಕಿ ಮೇಲೆ ಬಿಹಾರದ ಯುವಕನಿಂದ ಅತ್ಯಾಚಾರ, ದುಡಿಯಲು ಬಂದವನಿಂದ ನೀಚ ಕೃತ್ಯ

ಬೆಂಗಳೂರಿನಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಲ್ಲದೇ ಇದನ್ನು ಯಾರಿಗೂ ಹೇಳದಂತೆ ಅಪ್ರಾಪ್ತೆಗೆ 150 ರೂಪಾಯಿ ಕೊಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಬಿಹಾರ ಮೂಲದ ಯುವಕನಿಂದ ಈ ನೀಚ ಕೃತ್ಯ ನಡೆದಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಬಾಲಕಿ ಮೇಲೆ ಬಿಹಾರದ ಯುವಕನಿಂದ ಅತ್ಯಾಚಾರ, ದುಡಿಯಲು ಬಂದವನಿಂದ ನೀಚ ಕೃತ್ಯ
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: |

Updated on:Apr 10, 2026 | 12:41 PM

Share

ಬೆಂಗಳೂರು, ಏಪ್ರಿಲ್ 09):  ಹೊಟ್ಟೆಪಾಡಿಗಾಗಿ ದೂರದ ಬಿಹಾರ್​​ನಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದವ (Bengaluru) ಮಾನಗೇಡಿ ಕೆಲಸ ಮಾಡಿದ್ದಾನೆ. ಹೌದು…  ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರದ (Bihar) ಮೂಲದ ಮೊಹಮ್ಮದ್ ಮುನ್ನ ಎನ್ನುವ ಯುವಕ, ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಪ್ರಾಪ್ತೆ ಕೈಗೆ 150 ರೂಪಾಯಿ ಕೊಟ್ಟು ಎಸ್ಪೇಪ್ ಆಗಿದ್ದ ಮೊಹಮ್ಮದ್ ಮುನ್ನ ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆಪಾಡಿಗಾಗಿ ದುಡಿಯಲೆಂದು ಬಿಹಾರದಿಂದ ಬೆಂಗಳೂರಿಗೆ ಬಂದು ಈ ನೀಚ ಕೃತ್ಯ ಎಸಗಿದ್ದಾನೆ.

ಆರೋಪಿ ಮೊಹಮ್ಮದ್ ಮುನ್ನ ನಿನ್ನೆ (ಏಪ್ರಿಲ್ 08) ಸಂಜೆ ಮನೆ ಬಳಿ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಬಳಿಕ ಇದನ್ನು ಯಾರಿಗೂ ಹೇಳಬೇಡ ಎಂದು ಬಾಲಕಿ ಕೈಗೆ 150 ರೂಪಾಯಿ ಕೊಟ್ಟು ಪರಾರಿಯಾಗಿದ್ದ.

ಇದನ್ನೂ ಓದಿ: ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಇನ್ನೊಂದೆಡೆ ಕೆಲ ಸಮಯದವರೆಗೆ ಮನೆ ಬಳಿ ಬಾಲಕಿ ಕಾಣದಿದ್ದಾಗ ಆತಂಕಕ್ಕೆ ಒಳಗಾಗಿದ್ದ ಪೋಷಕರು ಅಕ್ಕಪಕ್ಕದಲ್ಲಿ ಹುಡುಕಾಡಿದ್ದಾರೆ. ಬಳಿಕ ಕೆಲ ಹೊತ್ತಿನ ನಂತರ ಬಾಲಕಿ ಮನೆಗೆ ಬಂದಿದ್ದು, ಈ ವೇಳೆ ಬಾಲಕಿ ಕೈಯಲ್ಲಿ 150 ರೂ.ಹಣ ಇರುವುದನ್ನು ಪೋಷಕರು ನೀಡಿದ್ದಾರೆ. ನಂತರ ಹಣದ ಬಗ್ಗೆ ವಿಚಾರಿಸಿದಾಗ ಬಾಲಕಿ, ಮುನ್ನನ ನೀಚ ಕೃತ್ಯವನ್ನು ಬಿಚ್ಚಿಟ್ಟಿದ್ದಾಳೆ. ಕೂಡಲೇ ಪೋಷಕರು ಕೂಡಲೇ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು, ಬಿಹಾರ ಮೂಲದ ಮೊಹಮ್ಮದ್ ಮುನ್ನ ಎನ್ನುವಾತನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:40 pm, Thu, 9 April 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ