Bengaluru News: ಪಿಜಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ವಿಜಯನಗರದ ಮಾರೇನಹಳ್ಳಿ ಪಿಜಿಯಲ್ಲಿ ನಡೆದಿದೆ.

Bengaluru News: ಪಿಜಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ
ಪ್ರಾತಿನಿಧಿಕ ಚಿತ್ರ
Follow us
|

Updated on: May 27, 2023 | 7:40 PM

ಬೆಂಗಳೂರು: ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ವಿಜಯನಗರದ ಮಾರೇನಹಳ್ಳಿ ಪಿಜಿಯಲ್ಲಿ ನಡೆದಿದೆ. ಬೀದರ್ ಮೂಲದ ಅಭಿಷೇಕ್(19) ಆತ್ಮಹತ್ಯೆಗೆ ಶರಣಾದ ಯುವಕ. ವಿದ್ಯಾಭ್ಯಾಸ ಮಾಡಲು ಪಿಜಿಯಲ್ಲಿ ತಂಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚರಂಡಿ ಕ್ಲೀನ್​ ವಿಚಾರಕ್ಕೆ 2 ಕುಟುಂಬಗಳ ನಡುವೆ ಗಲಾಟೆ

ಆನೇಕಲ್‌: ಚರಂಡಿ ಕ್ಲೀನ್​ ವಿಚಾರಕ್ಕೆ 2 ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ಹಲ್ಲೆ ಮಾಡಿರವಂತಹ ಘಟನೆ ಆನೇಕಲ್‌ ತಾಲೂಕಿನ ಮುಗುಳೂರಿನಲ್ಲಿ‌ ನಡೆದಿದೆ. ಗಿರೀಶ್​ ಮತ್ತು ಸಂಪತ್ ಕುಟುಂಬದ‌‌ ನಡುವೆ ಮಾರಾಮಾರಿ ನಡೆದಿದ್ದು, ಮಧ್ಯೆ ಕುಟುಂಬಸ್ಥರು ಪ್ರವೇಶ ಮಾಡಿದ್ದು, ದೊಣ್ಣೆಯಿಂದ ಬಡಿದಾಡಿಕೊಂಡಿದ್ದಾರೆ. ಗಲಾಟೆ ವೇಳೆ ಎರಡೂ ಕುಟುಂಬದವರಿಗೆ ಗಂಭೀರ ಗಾಯಗಳಾಗಿವೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌‌ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ; ಉದ್ಯಮಿ ಶ್ರೀನಿವಾಸ್ ನಾಯ್ಡು ವಿರುದ್ಧ ದೂರು ದಾಖಲು

ಲಿಕ್ವಿಡ್ ಆಕ್ಸಿಜನ್ ಕೊರತೆಯಿಂದ ಕ್ಯಾನ್ಸರ್ ರೋಗಿ ಸಾವು ಆರೋಪ

ಕಲಬುರಗಿ: ಲಿಕ್ವಿಡ್ ಆಕ್ಸಿಜನ್ ಕೊರತೆಯಿಂದ ಕ್ಯಾನ್ಸರ್ ರೋಗಿ ಮೃತಪಟ್ಟಿದ್ದಾರೆ ಎಂದು ಆರೋಪ ಮಾಡಲಾಗಿದೆ. ಕಲಬುರಗಿಯ ಕಿದ್ವಾಯಿ ಆಸ್ಪತ್ರೆಯಲ್ಲಿ ಝಕೀರಾ ಬೇಗಂ(50) ಮೃತ ವ್ಯಕ್ತಿ. ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಆಕ್ಸಿಜನ್​ ಖಾಲಿಯಾಗಿದ್ದು, ಮೂವರಲ್ಲಿ ಓರ್ವ ರೋಗಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವುದಾಗಿ ಆರೋಪ ಮಾಡಲಾಗಿದೆ.

ಮತ್ತೊಬ್ಬ ರೋಗಿಯನ್ನ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿಗಿದೆ. ಆಕ್ಸಿಜನ್ ಖಾಲಿಯಾಗಿದ್ದರಿಂದ ಕನ್ಯಾಕುಮಾರಿ ಬೇರೆಡೆ ಸ್ಥಳಾಂತರ ಮಾಡಿದ್ದು, ಆಕ್ಸಿಜನ್​ ಖಾಲಿಯಾಗಿರುವ ಆರೋಪವನ್ನು ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ. ಕ್ಯಾನ್ಸರ್​ ತೀವ್ರತೆಯಿಂದ ಬಳಲಿ ಬೇಗಂ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದೋಚಿದ ಲೇಡಿ ರಾಬರ್ಸ್​​

ಸಬ್‌ಇನ್ಸ್‌ಪೆಕ್ಟರ್ ಮನೆಗೆಯೇ ದುಷ್ಕರ್ಮಿಗಳು ಬೆಂಕಿ

ಹಾಸನ: ಸಬ್‌ಇನ್ಸ್‌ಪೆಕ್ಟರ್ ಮನೆಗೆಯೇ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ  ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.