ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು
ಬೆಂಗಳೂರಿನ ಸುದ್ದಗುಂಟೆಪಾಳ್ಯ(Suddaguntepalya)ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಅವಶೇಷದಡಿ ಸಿಲುಕಿದ್ದ ಬಿಹಾರ ಮೂಲದ ಕಾರ್ಮಿಕ ರಂಜನ್ ಎಂಬಾತ ಕೊನೆಯುಸಿರೆಳೆದಿದ್ದಾನೆ.
ಬೆಂಗಳೂರು, ಡಿ.25:ನಗರದ ಸುದ್ದಗುಂಟೆಪಾಳ್ಯ(Suddaguntepalya)ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಅವಶೇಷದಡಿ ಸಿಲುಕಿದ್ದ ಬಿಹಾರ ಮೂಲದ ಕಾರ್ಮಿಕ ರಂಜನ್ ಎಂಬಾತ ಕೊನೆಯುಸಿರೆಳೆದಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮೃತ ದೇಹ ಹೊರ ತೆಗೆದಿದ್ದು, ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮತ್ತೊಬ್ಬ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಮಾತನಾಡಿದ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ ‘ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಿರ್ಮಾಣ ಮಾಡಬೇಕು ಎಂದು ಜೆಸಿಬಿ ಮೂಲಕ ಅಡಿಪಾಯ ಅಗೆಯಲಾಗುತ್ತಿತ್ತು. ಜೆಸಿಬಿ ಜೊತೆಗೆ ಮೂರ್ನಾಲ್ಕು ಜನ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳಲಾಗಿತ್ತು. ಈ ವೇಳೆ ಪಕ್ಕದಲ್ಲಿ ಮೂರು ಅಂತಸ್ಥಿನ ಬಿಲ್ಡಿಂಗ್ ಕಟ್ಟಡಕ್ಕೆ ಜೆಸಿಬಿ ತಾಗಿ ಘಟನೆ ನಡೆದಿದೆ. ಆ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಬಿಹಾರ ಮೂಲದ ಓರ್ವ ಸಾವನ್ನಪ್ಪಿದ್ದಾನೆ. ಈಗಾಗಲೇ ಮಾಲೀಕ ಯಾರು, ಕಾಂಟ್ರಾಕ್ಟರ್ ಯಾರು ಎನ್ನುವ ಮಾಹಿತಿ ಪಡೆಯಲಾಗುತ್ತಿದೆ. ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತೆ. ಬಿಬಿಎಂಪಿಯಿಂದ ಮಾಲೀಕರು ಎನೆಲ್ಲಾ ಪರ್ಮಿಷನ್ ತಗೊಂಡಿದ್ದಾರೆ ಎನ್ನುವ ಮಾಹಿತಿ ಪಡೆಯಲಾಗುತ್ತಿದೆ ಎಂದರು.
ಇದನ್ನೂ ಓದಿ:ಅವಶೇಷಗಳಡಿಯಲ್ಲಿ ಮಗಳ ಮೃತದೇಹ,ಆಕೆಯ ಕೈ ಹಿಡಿದು ಕುಳಿತ ಅಪ್ಪ; ಟರ್ಕಿ ಭೂಕಂಪದ ಮನಕಲಕುವ ದೃಶ್ಯ
ಹಸುಗೂಸನ್ನೇ ತಿಂದು ಹಾಕಿದ ನಾಯಿ, ನರಿಗಳು
ಗದಗ: ಗದಗ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದು ಹೋಗಿದೆ. ಹೌದು, ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ ಎನ್ನುವ ಗ್ರಾಮದಲ್ಲಿ ಹಸುಗೂಸನ್ನೇ ನಾಯಿ, ನರಿಗಳು ತಿಂದು ಹಾಕಿದ ಘಟನೆ ನಡೆದಿದೆ. ಇನ್ನು ಅನೈತಿಕ ಸಂಬಂಧದಿಂದ ಜನಿಸಿದ ಮಗು ಎಂಬ ಆರೋಪ ಕೇಳಿಬಂದಿದ್ದು, ತಮ್ಮ ಅನೈತಿಕ ಸಂಬಂಧ ಮುಚ್ಚಿಡುವ ಸಲುವಾಗಿ ಮಗು ಎಸೆದು ಹೋಗಿದ್ದಾರೆ ಎನ್ನಲಾಗುತ್ತಿದೆ. ಕೂಸಿನ ವಾರಸುದಾರರನ್ನ ಪತ್ತೆ ಹಚ್ಚಲು ಇದೀಗ ಪೊಲೀಸರು ಮುಂದಾಗಿದ್ದು, ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ