Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನ ಅಪಹರಿಸಿ ಹಣ ದೋಚಿದ್ದ ಪ್ರಕರಣ; ಐವರಲ್ಲಿ ಇಬ್ಬರ ಬಂಧನ

ಹಣಕ್ಕಾಗಿ ವ್ಯಕ್ತಿಯನ್ನ ಅಪಹರಿಸಿ, 18 ಸಾವಿರ ಹಣ, ಮೊಬೈಲ್, ಪರ್ಸ್ ಕಸಿದುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಲ್ಲಿ ಇಬ್ಬರು ಆರೋಪಿಗಳನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನ ಅಪಹರಿಸಿ ಹಣ ದೋಚಿದ್ದ ಪ್ರಕರಣ; ಐವರಲ್ಲಿ ಇಬ್ಬರ ಬಂಧನ
ಆರೋಪಿಗಳು
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 30, 2023 | 9:26 AM

ಬೆಂಗಳೂರು: ಹಣಕ್ಕಾಗಿ ವ್ಯಕ್ತಿಯನ್ನ ಅಪಹರಿಸಿ, 18 ಸಾವಿರ ಹಣ, ಮೊಬೈಲ್, ಪರ್ಸ್ ಕಳ್ಳತನ(Theft) ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಲ್ಲಿ ಇಬ್ಬರು ಆರೋಪಿಗಳನ್ನು ಗಿರಿನಗರ ಪೊಲೀಸ( Girinagar Police)ರು ಬಂಧಿಸಿದ್ದಾರೆ. ಯಶವಂತ್, ನಂದೀಶ್ ಬಂಧಿತ ಆರೋಪಿಗಳು. ಜೂ.19ರಂದು ಬೆಳಗಿನ ಜಾವ 2ರಿಂದ 3 ಗಂಟೆ ಸುಮಾರಿಗೆ ಹಾಸನದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನ, ಗಿರಿನಗರದಲ್ಲಿ ವಾಹನದಿಂದ ಇಳಿದು ಹೋಗುವಾಗ ಆಟೋದಲ್ಲಿ ಬಂದಿದ್ದ ಐವರ ತಂಡ ಅಪಹರಿಸಿ, ಹಣವನ್ನ ಕಿತ್ತುಕೊಂಡು ಬಳಿಕ ಆಶ್ರಮವೊಂದರ ಬಳಿ ಬಿಟ್ಟು ಪರಾರಿಯಾಗಿದ್ದರು. ಈ ಕುರಿತು ಸಂತ್ರಸ್ಥ ವ್ಯಕ್ತಿ ಗಿರಿನಗರ ಠಾಣೆಗೆ ದೂರು ನೀಡಿದ್ದರು. ಇದೀಗ ಪೊಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಐವರ ಬಂಧನ

ರಾಮನಗರ: ರಾತ್ರಿ ವೇಳೆ ಬೈಕ್​ಗಳನ್ನ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಕನಕಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕನಕಪುರ ನಿವಾಸಿಗಳಾದ ದೀಪು, ರಾಕೇಶ್, ಕಿರಣ್, ಮನು ಹಾಗೂ ಹರ್ಷಿತ್ ಬಂಧಿತ ಆರೋಪಿಗಳು. ಬಂಧಿತರಿಂದ 3 ಸಾವಿರ ನಗದು, ಮೂರು ಫೋನ್​ಗಳು, ಎರಡು ದ್ವಿಚಕ್ರ ವಾಹನವನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಮಹಿಳೆಯ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ; ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಮನೆಯ ಬಾಗಿಲು ಮುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕದ್ದ ಕಳ್ಳರು

ಬೆಂಗಳೂರು ನಗರ: ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಮನೆ ಬಾಗಿಲು ಮುರಿದು ಕಳ್ಳರು ಕೈಚಳಕ ತೋರಿಸಿದ್ದು, ಕೋಟ್ಯಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನ ಕಳ್ಳತನ ಮಾಡಿದ್ದಾರೆ. ಶಶಿಧರ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, 53 ಲಕ್ಷ ನಗದು, ಒಂದು ಕೆಜಿ ಚಿನ್ನಾಭರಣ ಸೇರಿದಂತೆ 6 ಕೆಜಿ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಇನ್ನು ಮನೆಯವರು ಜೂ.28ನೇ ತಾರೀಖಿನಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತವಾಗಿ ತುಮಕೂರಿನ ಸಿದ್ದಗಂಗಾಮಠಕ್ಕೆ ಹೋಗಿದ್ದರು. ಇದನ್ನೇ ಗಮನಿಸುತ್ತಿದ್ದ ಗ್ಯಾಂಗ್​ ಹೊಂಚು ಹಾಕಿ ಮನೆಯ ಬಾಗಿಲು ಹೊಡೆದು ಲಾಕರ್​ನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣವನ್ನ ಕದ್ದು ಎಸ್ಕೇಪ್ ಆಗಿದ್ದಾರೆ. ಇನ್ನು ಈ ಕುರಿತು ಕೂಡಲೇ ಸಹೋದರ ಶಶಿಧರ್​ಗೆ ಮಾಹಿತಿ ನೀಡಿದ್ದು, ಮನೆಗೆ ವಾಪಸ್ ಬಂದು ನೋಡಿದಾಗ ಕಳ್ಳರ ಕೃತ್ಯ ಕಂಡು ಶಾಕ್ ಆಗಿದ್ದಾರೆ. ಮನೆಯ ಬಾಗಿಲುಗಳನ್ನ ಹೊಡೆದು ಹಾಕಿ ಮನೆಯ ಒಳನುಗ್ಗಿದ್ದ ಕದೀಮರು ಸಿಸಿಟಿವಿ ಡಿವಿಆರ್ ಸಮೇತವಾಗಿ ಕದ್ದೋಯ್ದಿದ್ದಾರೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಪುರುಷೋತ್ತಮ್, ಸೂರ್ಯನಗರ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ