AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಶಾಸಕ ಮುನಿರತ್ನನನ್ನು SIT ಕಸ್ಟಡಿಗೆ ನೀಡಿದ ಕೋರ್ಟ್

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನರನ್ನು ಇಂದು ಎಸ್​ಐಟಿ ವಶಕ್ಕೆ ಪಡೆದಿದೆ. ಹೌದು, ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಶಾಸಕ ಮುನಿರತ್ನನನ್ನು SIT ಕಸ್ಟಡಿಗೆ ನೀಡಿದ ಕೋರ್ಟ್
ಶಾಸಕ ಮುನಿರತ್ನನನ್ನು SIT ಕಸ್ಟಡಿಗೆ ನೀಡಿದ ಕೋರ್ಟ್
ರಮೇಶ್​ ಎಮ್​.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 24, 2024 | 5:37 PM

Share

ಬೆಂಗಳೂರು, ಸೆ.24: ಅತ್ಯಾಚಾರ ಆರೋಪ ಪ್ರಕರಣ ಎದುರಿಸುತ್ತಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ (Munirathna)ರನ್ನ ಇಂದು ಎಸ್​ಐಟಿ(SIT) ಕಸ್ಟಡಿಗೆ ಪಡೆದಿದೆ. ಹೌದು, ಅಕ್ಟೋಬರ್​ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶಿಸಿದ್ದಾರೆ.

ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ದ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬೆಳಿಗ್ಗೆ ಬಂಧಿಸಲಾಗಿದ್ದು, ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಇದರ ಬೆನ್ನಲ್ಲೆ ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶಿಸಿದೆ.

ಇದನ್ನೂ ಓದಿ:ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ದೂರಿನಲ್ಲಿವೆ ಆರೋಪಗಳ ಸುರಿಮಳೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಮುನಿರತ್ನ ವಿರುದ್ದ ಆರೋಪಗಳ ಸುರಿಮಳೆಗೈದಿದ್ದ ಸಂತ್ರಸ್ತೆ

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಬೆಳಕಿಗೆ ಬರುತ್ತಿದೆ. ಅದರಂತೆ ಮುನಿರತ್ನ ಬಳಿ ಹಲವಾರು ಖಾಸಗಿ ಅಶ್ಲೀಲ ವಿಡಿಯೋಗಳಿವೆ. ರಾಜಕೀಯ ಎದುರಾಳಿಗಳನ್ನು ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Tue, 24 September 24

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು