AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕತ್ತು ಕೊಯ್ದು ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದವಳು ದುರಂತ ಅಂತ್ಯ

ಹಾಡಹಗಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಕಾಲೇಜು ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿನಿಯನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಎಕ್ಸಾಮ್ ಬರೆದು ಮನೆ ಸೇರಬೇಕಿದ್ದ ವಿದ್ಯಾರ್ಥಿನಿ ಮಸಣ ಸೇರಿದ್ದಾಳೆ. ಇನ್ನು ಈ ಕೊಲೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಕತ್ತು ಕೊಯ್ದು ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದವಳು ದುರಂತ ಅಂತ್ಯ
Priya Murder
ರಮೇಶ್ ಬಿ. ಜವಳಗೇರಾ
|

Updated on:Oct 16, 2025 | 5:42 PM

Share

ಬೆಂಗಳೂರು, (ಅಕ್ಟೋಬರ್ 16): ಕತ್ತು ಕೂಯ್ದು ಕಾಲೇಜು ವಿದ್ಯಾರ್ಥಿನಿಯನ್ನು (College Student) ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಬೆಂಗಳೂರಿನ (Bengaluru) ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗ ರೈಲ್ವೆ ಟ್ರಾಕ್ ಬಳಿ ನಡೆದಿದೆ. ಯಾಮಿನಿ‌ ಪ್ರಿಯಾ ಕೊಲೆಯಾದ ವಿದ್ಯಾರ್ಥಿನಿ. ಯಾಮಿನಿ‌ ಪ್ರಿಯಾ ಲವ್ ಮಾಡಲು ಒಪ್ಪದಿರುವುದಕ್ಕೆ ಕೊಲೆ ಮಾಡಿರುವ ಸಾಧ್ಯತೆಗಳಿದ್ದು, ವಿಘ್ನೇಶ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ.

ಬಿ ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಪ್ರಿಯಾ, ಎಕ್ಸಾಮ್ ಇದೆ ಎಂದು ಇಂದು (ಅಕ್ಟೋಬರ್ 16) ಬೆಳಗ್ಗೆ ಏಳು ಗಂಟೆಗೆ ಮನೆಯಿಂದ ಕಾಲೇಜಿಗೆ ಹೋಗಿದ್ದು, ಮಧ್ಯಾಹ್ನ ಕಾಲೇಜ್ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿ, ಪ್ರಿಯಾಳ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಶ್ರೀರಾಮ ಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು,  ಲವ್ ವಿಚಾರಕ್ಕೆ ಈ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ತನಿಖೆ ನಡೆಸಿದ್ದಾರೆ.

ಪ್ರೀತಿ ನಿರಾಕರಿಸಿದ್ದ 20 ವರ್ಷದ ಯಾಮಿನಿ ಪ್ರಿಯಾ, ಕಾಲೇಜಿನಿಂದ ಮನೆಗೆ ಹೋಗುತ್ತಿದ್ದ ವೇಳೆ ರೈಲ್ವೆ ಟ್ರ್ಯಾಕ್ ಬಳಿ ಆಕೆ ಕಣ್ಣಿಗೆ ಖಾರದ ಪುಡಿ ಎರಚಿದ್ದಾನೆ. ಬಳಿಕ ಪ್ರಿಯಾ ಕುತ್ತಿಗೆ, ಮುಖಕ್ಕೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಪರಿಯಾಗಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಪ್ರಿಯಾ ಸ್ಥಳದಲ್ಲೇ ಜೀವ ಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಯಾಮಿನಿ ಪ್ರಿಯಾ ತಂದೆ ಹೇಳಿದ್ದಿಷ್ಟು

ಇನ್ನು ಕೊಲೆಯಾದ ಯಾಮಿನಿ ಪ್ರಿಯಾ ತಂದೆ ಗೋಪಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ನಹಲವು ತಿಂಗಳಿನಿಂದ ನನ್ನ ಮಗಳಿಗೆ ಹಿಂಸೆ ಕೊಡುತ್ತಿದ್ದ. ಹಿಂದೆ ಹಿಂದೆ ಹಿಂಬಾಲಿಸಕೊಂಡು ಬಂದು ಪ್ರೀತಿ ಮಾಡು ಎಂದು ಒತ್ತಾಯಿಸ್ತಿದ್ದ. ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ವೆ. ಈ ಸಂಬಂಧ ಆರು ತಿಂಗಳ ಹಿಂದೆ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಂಡಿದ್ದರು. ಮತ್ತೆ ಏನಾದ್ರೂ ಬಂದು ಟಾರ್ಚರ್ ಕೊಡುತ್ತಿದ್ದಾನಾ ಎಂದು ಒಂದು ತಿಂಗಳ‌ ಹಿಂದೆ ಅಷ್ಟೇ ಮಗಳಿಗೆ ಕೇಳಿದ್ದೆ. ಇಲ್ಲ ಎಂದಿದ್ದಳು. ಆ ಹುಡುಗ ಏರಿಯಾದಲ್ಲಿ ಸರಿ ಇರಲಿಲ್ಲ. ಕಾಲೇಜು ಹೋಗಿ ಬರುವಾಗ ಹೀಗೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

Published On - 5:12 pm, Thu, 16 October 25