ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ, ಸೊಸೆ ತವರು ಮನೆ ಸೇರಿದ್ದಕ್ಕೆ ಸಾವಿಗೆ ಶರಣಾದ್ರಾ?

ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಂತೆ ಇದೀಗ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ(ಜು.01) ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ, ಸೊಸೆ ತವರು ಮನೆ ಸೇರಿದ್ದಕ್ಕೆ ಸಾವಿಗೆ ಶರಣಾದ್ರಾ?
ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jul 02, 2024 | 11:08 PM

ಬೆಂಗಳೂರು, ಜು.02: ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ(ಸೋಮವಾರ) ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ(46) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಗನ ಹೆಂಡತಿ ತವರು ಮನೆಗೆ ತೆರಳಿದ ಹಿನ್ನಲೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಎರಡನೇ‌ ಮಗನನ್ನ ಅಂಗಡಿ ಕಳಿಸಿ ನೇಣಿಗೆ ಶರಣು

ಇನ್ನು ಮಗ ಪ್ರಶಾಂತನಿಗೆ ಕೆಲ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದ್ರೆ, ಮಗ ಕುಡಿತದಿಂದ ಮನೆಗೆ ಬರುವುದು ಕಡಿಮೆ ಮಾಡಿದ್ದ. ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮಾವನ ಮನೆ ಬಿಟ್ಟು ತವರು ಮನೆ ಸೇರಿದ್ದಳು. ಈ ಹಿನ್ನಲೆ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದ ದಂಪತಿ. ನಿನ್ನೆ‌(ಜು.01) ದಿನ ಎರಡನೇ‌ ಮಗನನ್ನ ಅಂಗಡಿ ಕಳಿಸಿ ನೇಣಿಗೆ ಶರಣಾಗಿದ್ದಾರೆ. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಹೊಸಕೋಟೆ ಮೂಲದ ದಂಪತಿಗಳಾದ ಇವರು, ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿಯಲ್ಲಿ ವಾಸ ಮಾಡಿಕೊಂಡಿದ್ದರು. ಸದ್ಯ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್​ಟೇಬಲ್ ಶವವಾಗಿ ಪತ್ತೆ: ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ

ಅಡುಗೆ ಸಿಲಿಂಡರ್​ ಸ್ಫೋಟ-ಐವರ ಸ್ಥಿತಿ ಗಂಭೀರ

ದಾವಣಗೆರೆ: ಸಿಲಿಂಡರ್ ಸ್ಪೋಟವಾಗಿ ಐವರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ದಾವಣಗೆರೆ ನಗರದ ಎಸ್ ಓ ಜಿ ಕಾಲೋನಿಯ ಸರ್ಕಾರಿ ಶಾಲೆ ಪಕ್ಕದ ಮನೆಯಲ್ಲಿ ನಡೆದಿದ್ದು, ಮನೆ ಸಂಪೂರ್ಣ ಧ್ವಂಸವಾಗಿದೆ. ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹೆಚ್ಚಿನ ಚಿಕಿತ್ಸೆಗೆ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ರವಾನೆ‌ ಮಾಡಲಾಗಿದೆ. ತಾಯಿ ಪಾರಮ್ಮ (55), ಮಗ ಪ್ರವೀಣ್​ (27), ಸೊಸೆ ಭಾಗ್ಯಾ (23), ಹಾಗೂ ಇಬ್ಬರು ವೃದ್ಧ ದಂಪತಿಗಳಿಗೆ ಗಾಯವಾಗಿದೆ. ವೃದ್ದ ದಂಪತಿಗಳ ಮನೆಯಲ್ಲಿ ಸಿಲಿಂಡರ್ ವಾಸನೆ ಬರುತ್ತದೆ ಎಂದು ನೋಡಲು ಹೋದ ವೇಳೆ ಸಿಲಿಂಡರ್ ಈ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್