ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ-ಮಗು ಸಾವು; ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಿಸುವಂತೆ ಮೃತರ ಸಂಬಂಧಿಕರಿಂದ ಸಿಎಂಗೆ ಮನವಿ

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಮೃತರ ಸಂಬಂಧಿಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಅವರು ಎಲ್ಲ ನೆರವು ನೀಡುತ್ತೇವೆ ಎಂಬ ಭರವಸೆ ನೀಡಿದ್ದಾರೆ ಎಂದು ಮೃತ ಪ್ರತಿಭಾ ತಾಯಿ ಪ್ರೇಮಾ ಹೇಳಿದರು.

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ-ಮಗು ಸಾವು; ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಿಸುವಂತೆ ಮೃತರ ಸಂಬಂಧಿಕರಿಂದ ಸಿಎಂಗೆ ಮನವಿ
ಸಿಎಂ ಭೇಟಿಯಾದ ದಂಪತಿ ಕುಟುಂಬಸ್ಥರು
Follow us
Anil Kalkere
| Updated By: ವಿವೇಕ ಬಿರಾದಾರ

Updated on:Aug 21, 2023 | 1:06 PM

ಬೆಂಗಳೂರು: ಅಮೆರಿಕದಲ್ಲಿ (America) ದಾವಣಗೆರೆ (Davangere) ಮೂಲದ ದಂಪತಿ ಹಾಗೂ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಮೃತರ ಸಂಬಂಧಿಕರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಲ್ಲಿ ಮನವಿ ಮಾಡಿದ್ದಾರೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಮೃತರು. ಸಿಎಂ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮೃತ ಪ್ರತಿಭಾ ತಾಯಿ ಪ್ರೇಮಾ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಅವರು ಎಲ್ಲ ನೆರವು ನೀಡುತ್ತೇವೆ ಎಂಬ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಮಗಳು, ಅಳಿಯ ಐದು ವರ್ಷದ ಹಿಂದೆ ಅಲ್ಲಿ ಹೋಗಿದ್ದರು. ಅಮೆರಿಕಾದಲ್ಲಿ ಅಂತ್ಯಸಂಸ್ಕಾರ ಮಾಡುವ ಮನಸ್ಸಿಲ್ಲ. ನಮ್ಮ ಊರಲ್ಲೇ ಅವರ ಅಂತ್ಯಕ್ರಿಯೆ ಆಗಬೇಕು. ಹೀಗಾಗಿ ಮೃತ ದೇಹ ತರಿಸಿಕೊಳ್ಳಲು ಸಿಎಂಗೆ ಮನವಿ ಮಾಡಿದ್ದೇವೆ ಎಂದರು.

ಮೃತ ಯೋಗೇಶ್ ಸೋದರ ಮಾವ ಜಯಣ್ಣ ಮಾತನಾಡಿ ನಮಗೆ ಶುಕ್ರವಾರ ಮಾಹಿತಿ ಸಿಕ್ಕಿತ್ತು. ಮೃತ ದೇಹ ಇಂದು ಮನೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿರುವ ಮಾಹಿತಿ ಇದೆ. ಶನಿವಾರ, ಭಾನುವಾರ ಅಲ್ಲಿ ರಜೆ ಇರುತ್ತೆ. ಸೋಮವಾರ ಮೃತ ದೇಹ ಕೊಡುತ್ತೇವೆ ಎಂದಿದ್ದಾರೆ. ಹೀಗಾಗಿ ಇಂದು ಸಿಎಂ ಭೇಟಿ ಮಾಡಿ ಮೃತ ದೇಹ ತರಲು ಮನವಿ ಮಾಡಿದ್ದೇವೆ. ಸಿಎಂ ಅಲ್ಲಿನ ಅಂಬಾಸಿಡರ್ ಅವರ ಜೊತೆ ಸಂಪರ್ಕ ಮಾಡಿ ಸಹಾಯ ಮಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ

ಸ್ವಾತಂತ್ರ್ಯ ದಿನಾಚರಣೆಯಂದೇ ದಂಪತಿ ಹಾಗೂ ಮಗು ಸಾವು

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37) ಮತ್ತು ಪ್ರತಿಭಾ(35) ದಂಪತಿ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿದ್ದು ಕಳೆದ ಐದು ವರ್ಷಗಳಿಂದ ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ವಾಸವಾಗಿದ್ದರು. ದಂಪತಿಗೆ ಯಶ್(6) ಎಂಬ ಹೆಸರಿನ ಮುದ್ದಾದ ಮಗು ಇದೆ.

ಆಗಸ್ಟ್​ 15 ರಂದು ರಾತ್ರಿ ಯೋಗೇಶ್ ಮಗ ಯಶ್​ ಹಾಗೂ ಪತ್ನಿ ಪ್ರತಿಭಾಗೆ ಗುಂಡುಹಾರಿಸಿ ಕೊಲೆಮಾಡಿ ನಂತರ ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಇನ್ನು ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಿಸಿಕೊಡುವಂತೆ ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ಅವರಿಗೆ ಮೃತ ಯೋಗೇಶ್ ತಾಯಿ ಶೋಭಾ ಮನವಿ ಮಾಡಿಕೊಂಡಿದ್ದರು. ಈ ಮನವಿ ಪತ್ರ ಸ್ವೀಕರಿಸಿ ಜಿಲ್ಲಾಧಿಕಾರಿಗಳು ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ರವಾನೆ ಮಾಡಿದ್ದರು.

ಇನ್ನು ಮೃತದೇಹಗಳನ್ನು ಭಾರತಕ್ಕೆ ತರುವ ಜವಾಬ್ದಾರಿ ಅಮೆರಿಕಾದಲ್ಲಿಯೇ ಇರುವ ಮೃತ ಪ್ರತಿಭಾಳ ಸಹೋದರ ಸಂಬಂಧಿ ಸೋಮಶೇಖರ ಎಂಬುವರಿಗೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Mon, 21 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ