ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ; ಮಾಧ್ಯಮ ಜವಾಬ್ದಾರಿಯನ್ನ ಶ್ಲಾಘಿಸಿದ ಥಾವರ್‌ಚಂದ್ ಗೆಹ್ಲೋಟ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಲಿರುವ ಪತ್ರಕರ್ತರ ಸಮಾರಂಭಕ್ಕೆ ಆಗಮಿಸಬೇಕು ಎಂದು ವಿನಂತಿಸಿತು.

ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ; ಮಾಧ್ಯಮ ಜವಾಬ್ದಾರಿಯನ್ನ ಶ್ಲಾಘಿಸಿದ ಥಾವರ್‌ಚಂದ್ ಗೆಹ್ಲೋಟ್
ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: May 23, 2024 | 7:03 PM

ಬೆಂಗಳೂರು, ಮೇ.23: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಲಿರುವ ಪತ್ರಕರ್ತರ ಸಮಾರಂಭಕ್ಕೆ ಆಗಮಿಸಬೇಕು ಎಂದು ವಿನಂತಿಸಿತು. ಈ ವೇಳೆ ಸರ್ಕಾರ ಮತ್ತು ಜನರ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಮಾಧ್ಯಮ ಮತ್ತು ಪತ್ರಕರ್ತರು, ತಮ್ಮದೇ ಆದ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದು, ಸಾಮಾಜದ ಸ್ವಾಸ್ತ್ಯ ಕಾಪಾಡುತ್ತಿದ್ದಾರೆ ಎಂದು ಶ್ಲಾಸಿದರು.

ಕೆಯುಡಬ್ಲೂಜೆ ಹುಟ್ಟು ಹಾಕಿದ ಸಾಹಿತಿ ಮತ್ತು ಪತ್ರಕರ್ತ ಡಿ.ವಿ.ಗುಂಡಪ್ಪ ಅವರ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನೀಡಿದ ಮಾಹಿತಿ ತಿಳಿದುಕೊಂಡ ರಾಜ್ಯಪಾಲರು, ಅವರ ಆದರ್ಶದಲ್ಲಿ ಈಗಲೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದೆ ಕೆಯುಡಬ್ಲೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

ಇದನ್ನೂ ಓದಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿ ಘೋಷಣೆ; ಬೆಂಗಳೂರಿನ ಐವರಿಗೆ ಪ್ರಶಸ್ತಿ

ತಾವು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಕೇರಳ ಮತ್ತು ಕಾಸರಗೋಡು ಭಾಗಕ್ಕೆ ಭೇಟಿ ನೀಡಿದ ನೆನಪುಗಳನ್ನು ಮೆಲುಕು ಹಾಕಿದ ರಾಜ್ಯಪಾಲರು, ಗಡಿನಾಡು ಕಾಸರಗೋಡಿನ ಬಹುಭಾಷಾ ನೆಲದಲ್ಲಿ ಆಯೋಜನೆಗೊಳ್ಳುವ ಕಾರ್ಯಕ್ರಮ ಅಪೂರ್ವವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು. ಕನ್ನಡಿಗರು ಹೆಚ್ಚಾಗಿರುವ ಮತ್ತು ಕನ್ನಡದ ಪತ್ರಿಕೆಗಳನ್ನು ಓದುವ ಜನರಿರುವ ಪ್ರದೇಶವಾಗಿರುವ ಕಾಸರಗೋಡು ಜನರು ಈಗಲೂ ಭಾವನಾತ್ಮಕವಾಗಿ ಕನ್ನಡಿಗರ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಆದ್ದರಿಂದ ಕಾಸರಗೋಡಿನಲ್ಲಿ ಕನ್ನಡ ಪತ್ರಕರ್ತರ ಬಳಗವೇ ಈ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ ಎಂದು ಕಾಸರಗೋಡು ಜಿಲ್ಲಾ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟಿ ವಿವರಿಸಿದರು.

ಈ ವೇಳೆ ರಾಜ್ಯ ಘಟಕದ ಖಜಾಂಜಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಕಾಸರಗೋಡು ಘಟಕದ ಜಿಲ್ಲಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕಾರ್ಯದರ್ಶಿ ಪುರುಷೋತ್ತಮ ಭಟ್ ಕೆ. , ಖ್ಯಾತ ಗಾಯಕ, ಹವ್ಯಾಸಿ ಬರಹಗಾರ ಗೋ.ನಾ.ಸ್ವಾಮಿ ನಿಯೋಗದಲ್ಲಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ