AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್​​​ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್

2025ಕ್ಕೆ ವಿದಾಯ ಹೇಳಿ 2026ನ್ನು ಸ್ವಾಗತಿಸುವ ಕ್ಷಣಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದೆ. ಹೊಸ ವರ್ಷಾಚರಣೆಯ ಸಂಭ್ರಮ ನಗರದೆಲ್ಲೆಡೆ ಜೋರಾಗುತ್ತಿರುವ ಹಿನ್ನೆಲೆ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಬೆಂಗಳೂರು ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಇದರಿಂದಾಗಿ ಡಿಸೆಂಬರ್ 31ರ ಸಂಜೆಯಿಂದಲೇ ನಗರಾದ್ಯಂತ ಖಾಕಿ ಪಡೆ ಹೈ ಅಲರ್ಟ್ ಆಗಿದ್ದಾರೆ. ಅದಕ್ಕೂ ಮೊದಲು ಬೆಂಗಳೂರಿನಲ್ಲಿ ಕಾಮುಕನೊಬ್ಬ, ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮಾಲ್​​​ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್
Manoj
ರಮೇಶ್ ಬಿ. ಜವಳಗೇರಾ
|

Updated on: Dec 28, 2025 | 8:39 PM

Share

ಬೆಂಗಳೂರು, (ಡಿಸೆಂಬರ್ 28): ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ (christmas celebration) ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಬಂಧಿಸಿದ್ದಾರೆ. ಗುವಾಹಟಿ ಮೂಲದ ಮನೋಜ್(27) ಬಂಧಿತ ಆರೋಪಿ. ಬೆಂಗಳೂರಿನ (Bengaluru) ಮಾಲ್​​​ನಲ್ಲಿ ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆ ವೇಳೆ ಡೆಲಿವರಿ ಬಾಯ್‌ ಮನೋಜ್, ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಇದರಿಂದ ಮುಜುಗರಕ್ಕೊಳಗಾದ ಯುವತಿ, ಕೂಡಲೇ ಸ್ಥಳದಲ್ಲೇ ಇದ್ದ ಹದೇವಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ಪೊಲೀಸರು, ಕಾಮುಕ ಮನೋಜ್​​​​ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಯುವತಿಯನ್ನು ಫಾಲೋ ಮಾಡಿದ್ದವರು ಅರೆಸ್ಟ್​

ಮೊನ್ನೆ ಅಂದರೆ ಡಿಸೆಂಬರ್ 25ರಂದು ಬೆಂಗಳೂರಿನ ಸಿಲ್ಕ್ ಬೋರ್ಡ್​ನಲ್ಲಿ ಪುಂಡರ ಗ್ಯಾಂಗ್​, ಯುವತಿಯನ್ನು ಫಾಲೋ ಮಾಡಿ ಲೈಂಗಿಕ ಕಿರುಕುಳ ನೀಡಿತ್ತು. ಬೈಕ್‌ನಲ್ಲಿದ್ದ ಯುವತಿಯನ್ನು ಫಾಲೋ ಮಾಡಿ ಲೈಂಗಿಕ ಕಿರುಕುಳ ನೀಡಿದ್ದು, ಹಿಂದೆ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ವಿಡಿಯೋ ಸರೆ ಹಿಡಿದಿದ್ದರು. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಶೇರ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಇದರ ಬೆನ್ನಲ್ಲೇ ಕಾರ್ಯಚರಣೆ ನಡೆಸಿದ ಸುದ್ದಗುಂಟೆಪಾಳ್ಯ ಪೊಲೀಸರು, 3 ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಶೇಕ್ ಅಯನ್ ಮತ್ತು ಶೇಕ್ ರೋಷನ್‌ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಿದ್ದರು.

ಇದನ್ನೂ ನೋಡಿ: ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ವಿಡಿಯೋ ಮಾಡ್ತಿದ್ದವನ ಬಂಧನ

ಇನ್ನೊಂದು ಪ್ರಕರಣದಲ್ಲಿ ಮಹಿಳಾ ಸಹೋದ್ಯೋಗಿಗಳ ಖಾಸಗಿ ಫೋಟೋ, ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ನಾಗರಭಾವಿ ಖಾಸಗಿ ಆಸ್ಪತ್ರೆ ನೌಕರ ಸುವೆಂದು ಮೊಹಂತ ಎನ್ನುವಾತ ಸಹ ಅರೆಸ್ಟ್ ಆಗಿದ್ದಾನೆ. ಆಸ್ಪತ್ರೆಯ ಆಪರೇಷನ್ ಥಿಯೇಟರ್​ನಲ್ಲಿ ಕೆಲಸ ಮಾಡ್ತಿದ್ದ ಕಾಮುಕ, ಲೇಡಿ ನರ್ಸ್​ಗಳು ಬಟ್ಟೆ ಬದಲಿಸುವುದನ್ನು ಮೊಬೈಲ್​​ನಲ್ಲಿ ಸರೆ ಹಿಡಿದುಕೊಳ್ಳುತ್ತಿದ್ದ. ಹೀಗೆ ಓರ್ವ ನರ್ಸ್​ ಕಾಮುಕನ ಆಟವನ್ನು ಗಮನಿಸಿ ಕೂಡಲೇ ಆಸ್ಪತ್ರೆ ವಯದ್ಯರ ಗಮನಕ್ಕೆ ತಂದಿದ್ದರು. ಬಳಿಕ ಆಸ್ಪತ್ರೆಯವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಎಫ್​​ಐಆರ್ ದಾಖಲಿಸಿಕೊಂಡ ಪೊಲೀಸರು, ಆರೋಪಿ ಸುವೆಂದು ಮೊಹಂತನನ್ನ ಬಂಧಿಸಿದ್ದಾರೆ.

ಮತ್ತಷ್ಟು ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!